ಮುಂಡಗೋಡ27 : ವಿವಿಧ ಕನ್ನಡ ಸಂಘಟನೆಗಳು ಪ್ರತ್ಯೇಕವಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸುವ ಬದಲು ಎಲ್ಲರೂ ಒಗ್ಗೂಡಿ ಭಾಷಾಭಿಮಾನ ತೋರುವುದು ಒಳಿತು ಎಂದು ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಸಾಳುಂಕೆ ಹೇಳಿದರು.
ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಜರುಗಿದ ಕನರ್ಾಟಕ ರಾಜ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ಈ ವಿಷಯ ಚಚರ್ಿಸಿದ ಅವರು ನಮ್ಮ ಭಾಷೆ ನಾಡು ನುಡಿ ಬಗ್ಗೆ ಪ್ರತ್ಯೇಕತೆ ಮೆರೆಯುವುದು ಸಲ್ಲದು. ಇದರಿಂದ ನಮ್ಮ ನಮ್ಮಲ್ಲಿಯೇ ಒಡಕು ಪ್ರದಶರ್ಿಸಿದಂತಾಗುತ್ತದೆ. ಹಾಗಾಗಿ ಎಲ್ಲರೂ ಒಗ್ಗೂಡಿ ರಾಜ್ಯೋತ್ಸವ ಆಚರಿಸುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ತಹಸೀಲ್ದಾರ ಅಶೋಕ ಗುರಾಣಿ ಮಾತನಾಡಿ ನವೆಂಬರ 1ರಂದು ಬೆಳಿಗ್ಗೆ 8.30 ಗಂಟೆಗೆ ಇಲಾಖಾ ಕಛೇರಿಗಳಲ್ಲಿ ಪೂಜೆ 9.15ಕ್ಕೆ ತಾಲೂಕಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಲಾಗುತ್ತದೆ. ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಕ್ರೀಡೆಗಳಿಂದ ರಾಷ್ಟ್ರ ಹಾಗೂ ಅಂತರಾಷ್ಟ್ರ ಮಟ್ಟ ಪ್ರವೇಶಿಸಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸನ್ಮಾನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸರಕಾರಿ ಇಲಾಖೆ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರುವಂತೆ ಅವರು ಸೂಚಿಸಿದರು.
ಸರಕಾರಿ ಇಲಾಖೆಯ ಅಧಿಕಾರಿಗಳು ಮತ್ತು ವಿವಿಧ ಸಂಘಟನೆಯ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದು ತಮ್ಮ ಅಭಿಪ್ರಾಯಗಳನ್ನು ಸಭೆಯಲ್ಲಿ ತಿಳಿಸಿದರು.