ಆ.08 ರಂದು ಪೂರ್ವಭಾವಿ ಸಭೆ
Preliminary meeting on August 8th
ಆ.08 ರಂದು ಪೂರ್ವಭಾವಿ ಸಭೆ
ಬಳ್ಳಾರಿ 07: ಮಾಜಿ ಮುಖ್ಯಮಂತ್ರಿ ಡಿ.ದೇವರಾಜು ಅರಸು ಅವರ 110ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಆ.20 ರಂದು ಜಿಲ್ಲಾ ಕೇಂದ್ರದಲ್ಲಿ ಆಚರಣೆ ಕುರಿತಂತೆ ಆ.08 ರಂದು ಬೆಳಿಗ್ಗೆ 11.30 ಗಂಟೆಗೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಏರಿ್ಡಸಲಾಗಿದೆ.
ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನಬಳ್ಳಾರಿ 07: ಕೃಷಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಕೃಷಿ ಪಂಡಿತ ಪ್ರಶಸ್ತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್‌ನಲ್ಲಿ ನೂತನವಾಗಿ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ನಮೂನೆಯನ್ನು ಅಳವಡಿಸಲಾಗಿದ್ದು, ಸಿಟಿಜನ್ ಲಾಗಿನ್ ಅಥವಾ ಆರ್‌ಎಸ್‌ಕೆ ಲಾಗಿನ್ ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರದಲ್ಲಿ ಸ್ವತಃ ಆಸಕ್ತ ರೈತ ಮತ್ತು ರೈತ ಮಹಿಳೆಯರು ಅರ್ಜಿ ಸಲ್ಲಿಸಬಹುದು.
ಅಗತ್ಯ ದಾಖಲೆಗಳೊಂದಿಗೆ ತಮ್ಮ ಎಫ್‌ಐಡಿಯನ್ನು ನಮೂದಿಸಬೇಕು. ಅರ್ಜಿ ಸಲ್ಲಿಸಲು ಆ.30 ಕೊನೆಯ ದಿನವಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಸೋಮಸುಂದರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕುರೇಕುಪ್ಪ: ವಿವಿಧೆಡೆ ಅಕಸ್ಮಿಕ ಪ್ಲಾಸ್ಟಿಕ್ ದಾಳಿ, ದಂಡಬಳ್ಳಾರಿ 07: ಕುರೇಕುಪ್ಪ ಪುರಸಭೆ ವ್ಯಾಪ್ತಿಯಲ್ಲಿ ಏಕಬಳಕೆಯ ಪ್ಲಾಸ್ಟಿಕ್ ನಿಷೇಧ ಕುರಿತಂತೆ ಪರಿಣಾಮಕಾರಿಯಾಗಿ ಜಾರಿಗೆ ತರಲು ಪಟ್ಟಣದ ವಿವಿಧ ಒಟ್ಟು 18 ಅಂಗಡಿಗಳ ಮೇಲೆ ಪುರಸಭೆಯ ಅಧಿಕಾರಿ, ಸಿಬ್ಬಂದಿ ಬುಧವಾರ ಆಕಸ್ಮಿಕ ದಾಳಿ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಂಡು ದಂಡ ವಿಧಿಸಿದರು.
ದಾಳಿಯ ಸಂದರ್ಭದಲ್ಲಿ 8 ಕಿ.ಗ್ರಾಂ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಳ್ಳಲಾಯಿತು. ಪ್ಲಾಸ್ಟಿಕ್ ನಿಷೇಧ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ವ್ಯಾಪಾರಿಗಳ ಮೇಲೆ 1,000 ರೂ. ದಂಡ ವಿಧಿಸಲಾಯಿತು.
ದಾಳಿಯ ಸಂದರ್ಭದಲ್ಲಿ ಪುರಸಭೆ ಆರೋಗ್ಯ ಶಾಖೆಯ ಸಿಬ್ಬಂದಿ ವರ್ಗ ಹಾಗೂ ಕಮ್ಯೂನಿಟಿ ಮೋಬಿಲೈಜರ್ ಹಾಜರಿದ್ದರು.ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ ಹಾಗೂ ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಅರ್ಜಿ ಅಹ್ವಾನಬಳ್ಳಾರಿ 07: ಕೃಷಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಆತ್ಮ ಯೋಜನೆಯಡಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಆತ್ಮ ಶ್ರೇಷ್ಠ ಕೃಷಿ ಪ್ರಶಸ್ತಿ ಮತ್ತು ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಮತ್ತು ರೈತ ಮಹಿಳೆಯರಿಂದ ಅರ್ಜಿ ಅಹ್ವಾನಿಸಲಾಗಿದೆ.
ಸಮಗ್ರ ಕೃಷಿ ಪದ್ಧತಿ, ಬೆಳೆ ಪದ್ಧತಿ, ಬೆಳೆ ವೈವಿಧ್ಯಕರಣ, ಸಾವಯವ ಕೃಷಿ, ಕೃಷಿ ಯಂತ್ರೋಪಕರಣ ಅಭಿವೃದ್ಧಿ, ನೀರಿನ ಸಮರ್ಥ ಬಳಕೆ ಇನ್ನಿತರೆ ಯಾವುದಾದರೂ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಅರ್ಹ ರೈತರು ಕೃಷಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು.ಆತ್ಮ ಯೋಜನೆಯಡಿ ಕೃಷಿ ಪಂಡಿತ ಪ್ರಶಸ್ತಿಗೆ ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ, ವೈಜ್ಞಾನಿಕ ಯಂತ್ರೋಪಕರಣ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ ಹಸಿರುಮನೆ ಅಳವಡಿಕೆ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು, ಕುರಿ, ಮೊಲ ಇತ್ಯಾದಿ ಸಾಕಾಣಿಕೆ ಚಟುವಟಿಕೆಗಳಲ್ಲಿ ತೊಡಗಿರುವ ರೈತ ಹಾಗೂ ರೈತ ಮಹಿಳೆರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಯನ್ನು ಆಯಾ ಹಾಗೂ ಹೋಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನ.ಹೆಚ್ಚಿನ ಮಾಹಿತಿಗಾಗಿ ಹೋಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಸೋಮಸುಂದರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 