2023-24 ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ 384 ಹುದ್ದೆಗಳ ಪೂರ್ವಭಾವಿ ಮರು ಪರೀಕ್ಷೆ
ಹಾವೇರಿ 29: ಡಿಸೆಂಬರ್ 28: ಕರ್ನಾಟಕ ಲೋಕ ಸೇವಾ ಆಯೋಗವು 2023-24 ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ 384 ಹುದ್ದೆಗಳ ಪೂರ್ವಭಾವಿ ಮರು ಪರೀಕ್ಷೆಯನ್ನು ರವಿವಾರ ಜಿಲ್ಲೆಯ ಜಿ ಹೆಚ್,ಪಿ ಯು ಕಾಲೇಜ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಗಾಂಧಿಪುರ, ಸರ್ಕಾರಿ ಪಿಯು ಕಾಲೇಜು ಬಸವೇಶ್ವರ ನಗರ ಹಾಗೂ ಬಾಲಕಿಯರ ಸರ್ಕಾರಿ ಪಿಯು ಕಾಲೇಜು, ಇಜಾರಿಲಕಮಾಪುರ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ್ ದಾನಮ್ಮನವರ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರೀಕ್ಷೆಗಳು ನಡೆಯುತ್ತಿರುವ ಕೊಠಡಿಗಳಿಗೆ ತೆರಳಿ ಪರೀಕ್ಷೆಯು ಸುಗಮವಾಗಿ ನಡೆಯುತ್ತಿರುವ ಬಗ್ಗೆ ಪರೀಶೀಲಿಸಿದರು. ಹಾಗೆಯೇ ಪರೀಕ್ಷೆಗೆ ಪೊಲೀಸ್ ಇಲಾಖೆಯಿಂದ ಕೈಗೊಂಡಿರುವ ಬಿಗಿ ಭದ್ರತೆ ಮತ್ತು ಪರೀಕ್ಷಾ ಕೊಠಡಿಯಲ್ಲಿ ಅಳವಡಿಸಿದ ಸಿಸಿಟಿವಿ ಕ್ಯಾಮರಾ, ಪರೀಕ್ಷಾರ್ಥಿಗಳು ಕೊಠಡಿ ಪ್ರವೇಶವಾಗ ಹ್ಯಾಂಡ್ ಹ್ಯಾಂಡ್ ಮೆಟಲ್ ಡಿಟೇಕ್ಟರ್ ಮತ್ತು ಮೊಬೈಲ್ ನೆಟ್ವರ್ಕ್ ಕಡಿತಗೊಳಿಸಲು ಅಳವಡಿಸಿರುವ ಜಾಮರ್, ವಿದ್ಯುತ್ ವ್ಯವಸ್ಥೆ ಇವುಗಳ ಕಾರ್ಯನಿರ್ವಹಣೆ ಬಗ್ಗೆ ಮಾಹಿತಿ ಪಡೆದು ಪರೀಶೀಲಿಸಿದರು. ಪರೀಕ್ಷೆಗಳು ಸುಗಮವಾಗಿ ನಡೆಯಬೇಕು ಯಾವುದೇ ಗೊಂದಲ ಉಂಟಾಗಬಾರದು ಪರೀಕ್ಷಾ ಕೊಠಡಿಯಲ್ಲಿ ಸಮಸ್ಯೆ ಆದಲ್ಲಿ ಕೂಡಲೇ ಸಂಬಂಧಸಿದ ಅಧಿಕಾರಿಗಳ ಗಮನಕ್ಕೆ ತರುವಂತೆ ಪರೀಕ್ಷೆಗೆ ನೇಮಕಗೊಂಡ ಮೇಲ್ವಿಚಾರಕರಿಗೆ ಸೂಚಿಸಿದರು.