ದುರ್ಗಾದೇವಿಯ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ Preparatory Meeting of Durga Devi Jatra Jubilee
Lokadrshan Daily
11/7/24, 6:52 AM ಪ್ರಕಟಿಸಲಾಗಿದೆ
ಲೋಕದರ್ಶನ ವರದಿ
ಬ್ಯಾಡಗಿ 08: ಇದೇ ತಿಂಗಳು 17 ರಂದು ಜರುಗಲಿರುವ ತಾಲೂಕಿನ ಸುಕ್ಷೇತ್ರ ಕೆಂಗೊಂಡ ಗ್ರಾಮದ ದುಗರ್ಾದೇವಿಯ ಜಾತ್ರಾ ಮಹೋತ್ಸವಕ್ಕೆ ಸುಮಾರು 25 ಸಾವಿರಕ್ಕೂ ಹೆಚ್ಚು ಭಕ್ತಾದಿಗಳು ಆಗಮಿಸಲಿದ್ದು, ಈ ಸಂದರ್ಭದಲ್ಲಿ ಯಾವುದೇ ಅವ್ಯವಸ್ಥೆ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಅವರು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.
ಇಲ್ಲಿನ ತಾ ಪಂ ಸಭಾಭವನದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಈ ಜಾತ್ರೆಗೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ಭಕ್ತಾಧಿಗಳಿಗೆ ಕುಡಿಯುವ ನೀರು, ಬಸ್ ವ್ಯವಸ್ಥೆ, ಸಂಚಾರಿ ಶೌಚಾಲಯಗಳ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಅಲ್ಲದೇ ಜಾತ್ರೆಗೆ ಆಗಮಿಸುವ ಜನರಿಗೆ, ಜಾನುವಾರುಗಳಿಗೆ ಸಂಚಾರಿ ಆರೋಗ್ಯ ಘಟಕಗಳನ್ನು ಸ್ಥಾಪಿಸಲು ಹಾಗೂ ಮುಖ್ಯವಾಗಿ ಜಾತ್ರಾ ಸಂದರ್ಭದಲ್ಲಿ ಕಳ್ಳಭಟ್ಟಿ ಸಾರಾಯಿ ಮತ್ತು ಅಕ್ರಮ ಮದ್ಯ ಮಾರಾಟದ ನಿಯಂತ್ರಣಕ್ಕೆ ಕಡಿವಾಣ ಹಾಕುವಂತೆ ಅಬಕಾರಿ ಇಲಾಖೆಗೆ ಸೂಚಿಸಿದರು.
ದೇವಸ್ಥಾನ ಕಮಿಟಿಯ ಅಧ್ಯಕ್ಷ ಚಂದ್ರಪ್ಪ ಗುಡುಗೂರ ಮಾತನಾಡಿ, ಜಾತ್ರೆಯ ಸಂದರ್ಭದಲ್ಲಿ ವಿದ್ಯುತ್ ಅಡಚಣೆ ಆಗದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಟಿ ಸಿ ಅಳವಡಿಸಲು ತುತರ್ು ವ್ಯವಸ್ಥೆ ಹಾಗೂ ದೇವಸ್ಥಾನದಲ್ಲಿ ಆಗಮಿಸುವ ಮಹಿಳಾ ಭಕ್ತರಿಗೆ ತೊಂದರೆ ಯಾಗದಂತೆ ಪ್ರತ್ಯೇಕ ಮಹಿಳಾ ಪೊಲೀಸರ ನಿಯೋಜನೆ, ರಸ್ತೆಗಳ ದುರಸ್ತಿಗೆ ಕ್ರಮ ಕೈಗೊಳ್ಳಲು ಸಭೆಯಲ್ಲಿ ಮನವಿ ಮಾಡಿದರು.
ತಹಶೀಲ್ದಾರ ಶರಣಮ್ಮ ಕಾರಿ ಮಾತನಾಡಿ, ಜಾತ್ರೆಯ ಸಂದರ್ಭದಲ್ಲಿ ಸ್ವಚ್ಛತೆಯ ಬಗ್ಗೆ ಆದ್ಯತೆ ನೀಡಬೇಕು. ಇಲ್ಲದೇ ಹೋದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಗಳಿವೆ. ಈ ಕುರಿತು ಗ್ರಾಮ ಪಂಚಾಯತಿ ಸಿಬ್ಬಂದಿಯಿಂದ ಕ್ರಮ ವಹಿಸುವಂತೆ ಪಿಡಿಓ ಸತೀಶ ಮೂಡೇರ ಅವರಿಗೆ ತಿಳಿಸಿದರು
ಸಭೆಯಲ್ಲಿ ತಾ.ಪಂ. ಕಾರ್ಯನಿವರ್ಾಹಕ ಅಧಿಕಾರಿ ಅಭಿದ್ ಗದ್ಯಾಳ, ಶಿವಬಸಪ್ಪ ಕುಳೇನೂರ, ವೀರೇಂದ್ರ ಶೆಟ್ಟರ, ಶಿವರಾಜ ಅಂಗಡಿ ದ್ಯಾಮನ ಗೌಡ ಪಾಟೀಲ, ನಾಗರಾಜ ಕುಂಬಾರ, ಗುಡ್ಡಪ್ಪ ಓಲೇಕಾರ ಹಾಗೂ ಇನ್ನಿತರರು ಉಪಸ್ಥಿತರಿದ್ದರು.