ವಿಶ್ವ ವಿಕಲಚೇತನರ ದಿನಾಚರಣೆ ನಿಮಿತ್ಯ ಪೂರ್ವಭಾವಿ ಸಭೆ
Preparatory meeting for the International Day of Persons with Disabilities
ಗದಗ 17: ವಿಶ್ವ ವಿಕಲಚೇತನರ ದಿನಾಚರಣೆಯನ್ನು ಡಿಸೆಂಬರ್ 3 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ವ್ಯವಸ್ಥಿತವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್ ತಿಳಿಸಿದರು. ನಗರದ ಜಿಲ್ಲಾ ಪಂಚಾಯತ್ ವಿಡಿಯೋ ಕಾನ್ಪರೆನ್ಸ್ ಹಾಲ್‌ನಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಕುರಿತು ಶನಿವಾರ ಜರುಗಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳಾಗದಂತೆ ನೋಡಿಕೊಳ್ಳಬೇಕು. ಶಿಷ್ಟಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಣಕ್ಕೆ ಕ್ರಮ ವಹಿಸಬೇಕು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿಕಲಚೇತನರು ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್. ಹೇಳಿದರು.
ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿಕಾರಿ ಮಹಾಂತೇಶ್ ಕೆ ಮಾತನಾಡಿ ವಿಶ್ವ ವಿಕಲಚೇತನರ ದಿನಾಚರಣೆ ನಿಮಿತ್ಯ ದಿನಾಂಕ:24/11/2025 ರಂದು ಬೆಳಿಗ್ಗೆ: 9:00 ಗಂಟೆಗೆ ನಗರದ ಕೆ.ಎಚ್.ಪಾಟೀಲ್, ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗುವುದು. ವಿಶ್ವ ವಿಕಲಚೇತನರ ದಿನಾಚರಣೆ ದಿನದ ಸಕಲ ಸಿದ್ಧತೆಗೆ ಕ್ರಮ ವಹಿಸಲಾಗಿದೆ. ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನಗೈದ (ರಾಜ್ಯ, ಅಂತರರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ) ವಿಕಲಚೇತನ ವ್ಯಕ್ತಿಗಳಿಗೆ ಸನ್ಮಾನಿಸಲಾಗುವುದು. ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿನ ವಿಜೇತರಿಗೆ ವಿಶ್ವ ವಿಕಲಚೇತನರ ದಿನಾಚರಣೆಯಂದು ಬಹುಮಾನ ವಿತರಿಸಲಾಗುವುದು. ವಿವಿಧ ಕ್ಷೇತ್ರಗಳಲ್ಲಿ ಸಾಧನಗೈದ ಆಸಕ್ತ ವಿಕಲಚೇತನರು ನವೆಂಬರ್ 26 ರೊಳಗಾಗಿ ಪ್ರಸ್ತಾವನೆಯನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿಕಾರಿಗಳ ಕಚೇರಿ, ಗದಗ ಇಲ್ಲಿ ಸಲ್ಲಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪದ್ಮಾವತಿ ಜಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಆರ್.ಎಸ್.ಬುರುಡಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ವಿಕಲಚೇತನ ಸರ್ಕಾರಿ ನೌಕರರ ಸಂಘ, ಜಿಲ್ಲಾ ಘಟಕ, ಗದಗ ಸದಸ್ಯರು, ಜಿಲ್ಲೆಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು/ಸಂಘಗಳ ಮುಖ್ಯಸ್ಥರು, ಜಿಲ್ಲೆಯ ಎಲ್ಲಾ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು, ವಿವಿಧ ಇಲಾಖೆಯ ಅಧಿಕಾರಿಗಳು, ವಿಕಲಚೇತನರು ಹಾಗೂ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 