ಡಾ.ಬಾಬು ಜಗಜೀವನರಾಮ ಮತ್ತು ಡಾ:ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ ಕುರಿತು ಪೂರ್ವಸಿದ್ಧತಾ ಸಭೆ
ಕಾರವಾರ,ಮಾ.27 :- ಡಾ.ಬಾಬು ಜಗಜೀವನರಾಮ ರವರ 118 ನೇ ಜನ್ಮ ದಿನಾಚರಣೆ ಹಾಗೂ ಡಾ:ಬಿ.ಆರ್.ಅಂಬೇಡ್ಕರ್ ರವರ 134 ನೇ ಜನ್ಮದಿನಾಚರಣೆ ಜಿಲ್ಲಾ ಮಟ್ಟದಲ್ಲಿ ಆಚರಣೆ ಕಾರ್ಯಕ್ರಮದ ರೂಪರೇಷೆಗಳನ್ನು ರೂಪಿಸುವ ಉದ್ದೇಶದಿಂದ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಏ. 1 ರಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ, ಸಭಾಂಗಣದಲ್ಲಿ ಪೂರ್ವಸಿದ್ಧತಾ ಸಭೆ ನಡೆಯಲಿದೆ.
ಸದರಿ ಸಭೆಗೆ ಜಿಲ್ಲೆಯ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವಿವಿಧ ಸಂಘಟನೆ ಮುಖಂಡರು ಮತ್ತು ಇತರೆ ಎಲ್ಲಾ ಸಂಘಟನೆಯ ಮುಖಂಡರು ಪಾಲ್ಗೊಳ್ಳುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.