ಬಾಲವಿಕಾಸ ಅಕಾಡೆಮಿ ಪ್ರಶಸ್ತಿಗಳ ಪ್ರದಾನ: ಅಕಾಡೆಮಿಗೆ ಹೊಸ ಸ್ವರೂಪ ನೀಡಿದ ಸಂಗಮೇಶ ಬಬಲೇಶ್ವರ
Presentation of the Bala Vikas Academy Awards: Sangamesh Babaleswar, who gave a new shape to the ac
ಬೆಳಗಾವಿ 14: ಸುವರ್ಣಸೌಧದಲ್ಲಿ ಡಿ.16 ರಂದು ಅಕಾಡೆಮಿ ವಾರ್ಷಿಕ ಪ್ರಶಸ್ತಿಗಳ ಪ್ರಧಾನ ಸಮಾರಂಭ; 2 ಕೋಟಿ ಮಕ್ಕಳ ಏಳಿಗೆಗಾಗಿ ಶ್ರಮಿಸುತ್ತಿರುವ ಬಾಲವಿಕಾಸ ಅಕಾಡೆಮಿ -ಅಧ್ಯಕ್ಷ ಸಂಗಮೇಶ ಬಬಲೇಶ್ವರ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾರ್ಗದರ್ಶನದಲ್ಲಿ ಅಕಾಡೆಮಿಗೆ ಹೊಸಸ್ವರೂಪ ಬೆಳಗಾವಿ : ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಇದೇ ಪ್ರಥಮಬಾರಿಗೆ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗಳ ಪ್ರಧಾನ ಸಮಾರಂಭ ಹಮ್ಮಿಕೊಂಡಿದ್ದು, 2022-23 ಹಾಗೂ 2023-24 ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪುರಸ್ಕೃತರಿಗೆ ವಿತರಿಸಲಾಗುತ್ತಿದೆ.
ಕರ್ನಾಟಕ ಬಾಲವಿಕಾಸ ಅಕಾಡೆಮಿಯು ರಾಜ್ಯದ ಸುಮಾರು 2 ಕೋಟಿ ಮಕ್ಕಳ ಶ್ರಯೋಭಿವೃದ್ಧಿಗಾಗಿ ನಿರಂತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಶ್ರಮಿಸುತ್ತಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಅಂದು ಮಧ್ಯಾಹ್ನ 1 ಗಂಟೆಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ಬಾಲವಿಕಾಸ ಅಕಾಡೆಮಿಯ 2022-23 ಮತ್ತು 2023-24 ಸಾಲಿನ ಗೌರವ ಪ್ರಶಸ್ತಿ, ಮಕ್ಕಳ ಚಂದಿರ ಪುಸ್ತಕ ಪ್ರಶಸ್ತಿ, ಬಾಲ ಗೌರವ ಪ್ರಶಸ್ತಿ ಹಾಗೂ ವಿಶೇಷ ಗೌರವ ಪ್ರಶಸ್ತಿಗಳನ್ನು ವಿತರಿಸಲಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸೇರಿದಂತೆ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳಿಂದ ಆಯ್ಕೆ ಮಾಡಿರುವ ಪ್ರಶಸ್ತಿ ಪುರಸ್ಕೃತರು ಆಗಮಿಸಲಿದ್ದಾರೆ. ಈ ಪ್ರಶಸ್ತಿಗಳು ಮಕ್ಕಳ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹನೀಯರಿಗೆ ಮತ್ತು ಪ್ರತಿಭಾವಂತ ಮಕ್ಕಳಿಗೆ ಪ್ರೇರಣೆಯಾಗಲಿವೆ. ಮಕ್ಕಳಲ್ಲಿನ ಸೂಪ್ತ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಸೂಕ್ತ ವೇದಿಕೆ ಕಲ್ಪಿಸುವುದು ಮತ್ತು ಮಕ್ಕಳ ಹಕ್ಕುಗಳ ರಕ್ಷಣೆ ನಮ್ಮ ಆದ್ಯತೆಯಾಗಿದೆ ಎಂದು ಅವರು ತಿಳಿಸಿದ್ದಾರೆ. ಮಕ್ಕಳನ್ನು ಗೌರವಿಸುವುದು ಮತ್ತು ಅವರನ್ನು ಪ್ರೋತ್ಸಾಹಿಸುವುದು ಅಕಾಡೆಮಿಯ ಜವಾಬ್ದಾರಿ. ಈ ಪ್ರಶಸ್ತಿಗಳನ್ನು ಗಣ್ಯರ ಮೂಲಕವೇ ಕೊಡಿಸಬೇಕೆಂಬ ಮಹದಾಸೆಯಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳರ್ ಅವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಾಡಿನ ಗಣ್ಯಮಾನ್ಯರ ಉಪಸ್ಥಿತಿಯಲ್ಲಿ ಮಕ್ಕಳಿಗೆ ಪ್ರಶಸ್ತಿ ನೀಡಿ, ಗೌರವ ಸಲ್ಲಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಧಾರವಾಡ ಬಾಲ ವಿಕಾಸ ಅಕಾಡೆಮಿ ವತಿಯಿಂದ ಕೊಡ ಮಾಡುವ ಅಕಾಡೆಮಿ ಗೌರವ ಪ್ರಶಸ್ತಿಗೆ ಆಯ್ಕೆಯಾದ ಸಾಹಿತಿ, ಲೇಖಕರು, ಸಂಘ-ಸಂಸ್ಥೆಗಳಿಗೆ 25 ಸಾವಿರ ನಗದು ಬಹುಮಾನ, ಮಕ್ಕಳ ಚಂದಿರ ಪ್ರಶಸ್ತಿಗೆ ಆಯ್ಕೆಯಾದ ಲೇಖಕರಿಗೆ 15 ಸಾವಿರ ನಗದು ಬಹುಮಾನ ಹಾಗೂ ಅಕಾಡೆಮಿ ಬಾಲ ಗೌರವ ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ 10 ಸಾವಿರ ನಗದು ಬಹುಮಾನ, ವಿಶೇಷ ಗೌರವ ಪ್ರಶಸ್ತಿ ಪುರಸ್ಕೃತರಿಗೆ 10 ಸಾವಿರ ನಗದು ಬಹುಮಾನವನ್ನು ವಿತರಿಸಿ ಗೌರವಿಸಲಾಗುತ್ತದೆ ಎಂದು ಅವರು ಹೇಳಿದರು. 2022 ನೇ ಸಾಲಿನ ಮಕ್ಕಳ ಚಂದಿರ ಪ್ರಶಸ್ತಿಗೆ ಆಯ್ಕೆಯಾದ ಲೇಖಕ ಪುಸ್ತಕ: ಮೈಸೂರಿನ ಕೊಳ್ಳೆಗಾಲ ಶರ್ಮಾ ಅವರ ಗುಬ್ಬಿಯ ಬ್ರಹ್ಮಾಸ್ತ್ರ ಪುಸ್ತಕ, ವಿಜಯಪೂರದ ಎಸ್. ಎಸ್ ಸಾತಿಹಾಳ ಅವರ ಹಾಡು ಕೋಗಿಲೆ ಹಾಡು ಪುಸ್ತಕ, ಬೆಂಗಳೂರಿನ ಡಾ. ಬೇಲೂರ ರಘುನಂದನ ಅವರ ಚಿಟ್ಟೆ ಪುಸ್ತಕ, ವಿಜಯಪೂರನ ಹ.ಮ. ಪೂಜಾರ ಅವರ ಅಜ್ಜನ ಮನೆಯ ಅಂಗಳದಲ್ಲಿ ಪುಸ್ತಕ,
ಬಾಗಲಕೋಟಯ ಡಾ. ಕರವೀರ ಪ್ರಭು ಕ್ಯಾಲಕೊಂಡ ಅವರ ಮಗುವಿಗೆ ಲಸಿಕೆ ಕೊಡಿಸಿದ್ದೀರಾ? ಪುಸ್ತಕಗಳ 2022 ನೇ ಸಾಲಿನ ಮಕ್ಕಳ ಚಂದಿರ ಪ್ರಶಸ್ತಿಗೆ ಆಯ್ಕೆಯಾಗಿವೆ. 2023 ನೇ ಸಾಲಗೆ ಮಕ್ಕಳ ಚಂದಿರ ಪುಸ್ತಕ ಪ್ರಶಸ್ತಿಗೆ ಆಯ್ಕೆಯಾದ ಲೇಖಕ ಪುಸ್ತಕ: ದಕ್ಷಿಣ ಕನ್ನಡದ ನಿರ್ಮಲಾ ಸುರತ್ಕಲ್ ಅವರ ಪುಟ್ಟಿಗೆ ಸಿಟ್ಟಿಲ್ಲ ಪುಸ್ತಕ, ಧಾರವಾಡದ ಲಲಿತಾ ಪಾಟೀಲ ಅವರ ಗಪ್ ಚುಪ್ ಪುಸ್ತಕ. ಹಾವೇರಿಯ ಮಾಲತೇಶ ಅಂಗೂರ ಅವರ ಕಾಡು-ಮೇಡು ಪುಸ್ತಕ ಹಾಗೂ ನಾಗರಾಜ ಹುಡೇದ ಬೆರಗು ಪುಸ್ತಕಗಳಿಗೆ 2023 ನೇ ಸಾಲಿನ ಮಕ್ಕಳ ಚಂದಿರ ಪುಸ್ತಕ ಪ್ರಶಸ್ತಿ ಲಭಿಸಿದೆ. 2022-23ನೇ ಸಾಲಗೆ ಅಕಾಡೆಮಿ ಗೌರವ ಪ್ರಶಸ್ತಿಗೆ ಆಯ್ಕೆ: ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ತುಮಕೂರ ಜಿಲ್ಲೆಯ ತಿಪಟೂರು ಪ್ರೋ ಕೃಷ್ಣಮೂರ್ತಿ ಬಿಳಿಗೆರೆ. ವಿಜಯಪುರದ ಲಲಿತಾ ಕೆ ಹೊಸಪ್ಯಾಟಿ, ಮಂಗಳೂರಿನ ಭಾಸ್ಕರ ಅಚ್ಚಳ, ಮಕ್ಕಳ ರಂಗಭೂಮಿ ಕ್ಷೇತ್ರದಲ್ಲಿ ರಾಯಚೂರಿನ ವಿ. ಎನ್ ಅಕ್ಕಿ, ಮಕ್ಕಳ ಸಾಂಸ್ಕೃತಿಕ, ಚಿತ್ರಕಲೆ ಕ್ಷೇತ್ರದಲ್ಲಿ ಮೈಸೂರಿನ ಎಸ್. ಎಫ್. ಹುಸೇನಿ, ಮಕ್ಕಳ ವಿಕಲಚೇತನ ಕ್ಷೇತ್ರದಲ್ಲಿ ಬೆಳಗಾವಿಯ ಮಾಹೇಶ್ವರಿ ಅಂಧ ಮಕ್ಕಳ ಶಾಲೆ, ಮಕ್ಕಳ ಮನೋವಿಕಾಸ. ಹಕ್ಕುಗಳ ಕ್ಷೇತ್ರದಲ್ಲಿ ಶಿವಮೊಗ್ಗದ ಡಾ ಕೆ. ಎಸ್ ಪವಿತ್ರಾ ಅವರು 2022-23ನೇ ಸಾಲಿನ ಅಕಾಡೆಮಿ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 