ವಚನ ಸಾಹಿತ್ಯ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಡಾ. ಫ. ಗ. ಹಲಕಟ್ಟಿ ಸ್ಮರಣೋತ್ಸವದಲ್ಲಿ ಅಭಿಪ್ರಾಯ
Preserving Vachana literature is everyone's responsibility: Views expressed at the Dr. P.G. Halakat
ಹಾವೇರಿ 02: ವಚನ ಸಾಹಿತ್ಯದ ಸಂಗ್ರಹ, ಸಂರಕ್ಷಣೆ ಹಾಗೂ ಪ್ರಸಾರದ ಕಾರ್ಯವನ್ನು ತಮ್ಮ ಜೀವನವನ್ನೇ ಅರ್ಿಸಿ ಮಾಡಿದ ಮಹಾನ್ ವ್ಯಕ್ತಿ ಡಾ. ಫ. ಗ. ಹಲಕಟ್ಟಿ ಎಂದು ಗಣ್ಯರು ಅಭಿಪ್ರಾಯಪಟ್ಟರು.
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ವಚನ ಪಿತಾಮಹ ಡಾ. ಫ. ಗ. ಹಲಕಟ್ಟಿ ಅವರ ಜನ್ಮದಿನ ಹಾಗೂ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಆಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಟಿಎಂಎಇಎಸ್ ಬಿ.ಎಡ್ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಎಂ.ಎಂ. ಮೈಸೂರು ಅವರು, ಬಸವಣ್ಣನವರ ವಚನಗಳನ್ನು ಸಂಗ್ರಹಿಸಿ ಮುಂದಿನ ಪೀಳಿಗೆಗೆ ತಲುಪಿಸಿದ ಹಲಕಟ್ಟಿ ಅವರ ಕೊಡುಗೆ ಅಪಾರವಾಗಿದ್ದು, ಅವರ ಕಾರ್ಯದಿಂದ ಕನ್ನಡ ಸಾಹಿತ್ಯಕ್ಕೆ ಹೊಸ ದಿಕ್ಕು ದೊರಕಿದೆ ಎಂದು ಹೇಳಿದರು.
ನ್ಯಾಯವಾದಿ ಕೆ. ಎಸ್. ಕೊರಿಶೆಟ್ಟರ್ ಅವರು ಮಾತನಾಡಿ, ವಚನ ಸಾಹಿತ್ಯವು ಕೇವಲ ಸಾಹಿತ್ಯವಲ್ಲ, ಅದು ಮಾನವೀಯ ಮೌಲ್ಯಗಳನ್ನು ಬೋಧಿಸುವ ಜೀವನದರ್ಶನವಾಗಿದೆ ಎಂದು ಅಭಿಪ್ರಾಯಪಟ್ಟರು.
ವಚನ ಪಿತಾಮಹ ಹಲಕಟ್ಟಿ ಅವರ ತತ್ವ, ಆದರ್ಶ ಮತ್ತು ಸಮಾಜಮುಖಿ ಚಿಂತನೆಗಳು ಇಂದಿಗೂ ಪ್ರೇರಣೆಯಾಗಿದೆ ಎಂದು ಗಣ್ಯರು ಹೇಳಿದರು. ಮಹಿಳೆಯರು ಹಾಗೂ ದಲಿತರಿಗೆ ಸಮಾನ ಅವಕಾಶ ನೀಡುವಲ್ಲಿ ವಚನ ಸಾಹಿತ್ಯದ ಪಾತ್ರ ಮಹತ್ವದ್ದಾಗಿದೆ ಎಂದು ಅವರು ತಿಳಿಸಿದರು.
ಜಿಲ್ಲಾ ಉಪವಿಭಾಗಾಧಿಕಾರಿ ಕಲ್ಯಾಣಿ ಕಾಂಬಳೆ ಕಾರ್ಯಕ್ರಮ ಉದ್ಘಾಟಿಸಿದರು. ಬಸವ ಶಾಂತಲಿಂಗ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ. ಹಿರೇಮಠ, ಟಿಎಂಎಇಎಸ್ ಬಿ.ಎಡ್ ಕಾಲೇಜಿನ ಪ್ರಾಂಶುಪಾಲ ಡಾ. ಸಿದ್ಧಲಿಂಗಸ್ವಾಮಿ ಪ್ರಸಾದಮಠ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 