ಐತಿಹಾಸಿಕ ಪರಂಪರೆ ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿ: ಟಿ.ಹೆಚ್. ಬಸವರಾಜ
Preserving and nurturing historical heritage is everyone's responsibility: T.H. Basavaraja
ಬಳ್ಳಾರಿ, ಸೆ.19: ಭಾರತದ ಇತಿಹಾಸ ಅತ್ಯಂತ ಪ್ರಾಚೀನ ಹಾಗೂ ಪುರಾತನ ಪರಂಪರೆಯನ್ನು ಹೊಂದಿದ್ದು, ಐತಿಹಾಸಿಕ ಪರಂಪರೆಯನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ ಎಂದು ಇತಿಹಾಸ ಅಕಾಡೆಮಿ ಜಿಲ್ಲಾಧ್ಯಕ್ಷ ಟಿ.ಹೆಚ್.ಎಂ. ಬಸವರಾಜ ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ, ವೀರಶೈವ ಕಾಲೇಜು ಹಾಗೂ ಇತಿಹಾಸ ಅಕಾಡೆಮಿ ಬಳ್ಳಾರಿ ಜಿಲ್ಲಾ ಘಟಕ ಮತ್ತು ಟಿ.ಹೆಚ್.ಎಂ. ಸಾಂಸ್ಕೃತಿಕ ಕಲಾ ಟ್ರಸ್ಟ್ ವತಿಯಿಂದ ವೀರಶೈವ ಕಾಲೇಜಿನಲ್ಲಿ ಆಯೋಜಿಸಿದ್ದ ‘ಐತಿಹಾಸಿಕ ಪರಂಪರೆ ಉಳಿಸಿ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇತಿಹಾಸ ಪ್ರಜ್ಞೆ ನಮ್ಮ ಬದುಕನ್ನು ಸುಂದರವಾಗಿ ರೂಪಿಸಿಕೊಳ್ಳಲು ಸಹಕಾರಿಯಾಗಿದೆ. ಬಳ್ಳಾರಿ ಜಿಲ್ಲೆಯು ಪ್ರಾಗೈತಿಹಾಸಿಕ ಕಾಲದಿಂದಲೂ ತನ್ನ ಅಸ್ತಿತ್ವವನ್ನು ಉಳಿಸಿಕೊಂಡಿದ್ದು, ವೈಭವದಿಂದ ಸಾಮ್ರಾಜ್ಯಗಳನ್ನು ಆಳಿದ ಅನೇಕ ರಾಜಮನೆತನಗಳ ಭವ್ಯ ಇತಿಹಾಸ ಹೊಂದಿರುವುದು ಹೆಮ್ಮೆಯ ಸಂಗತಿ ಎಂದರು.
ನಂದಿಹಳ್ಳಿ ಸ್ನಾತಕೋತ್ತರ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಎಚ್. ತಿಪ್ಪೇಸ್ವಾಮಿ ವಿಶೇಷ ಉಪನ್ಯಾಸ ನೀಡಿದರು. ಉದ್ಯಮಿ ಮರೇಗೌಡ ಪಾಟೀಲ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಮಾಜ ಸೇವಕರಾದ ಪಿ. ಬಂಡೇಗೌಡ, ಕಾರಪುರಿ ಮುದ್ದನಗೌಡ, ಕಸಾಪ ಜಿಲ್ಲಾ ಅಧ್ಯಕ್ಷ ಡಾ. ನಿಷ್ಠಿ ರುದ್ರ್ಪ, ವಾಸವಿ ಪ್ರೌಢಶಾಲೆಯ ನಿವೃತ್ತ ಸಂಗೀತ ಶಿಕ್ಷಕ ಫ್ಯಾನ್ಸಿಸ್, ನಿವೃತ್ತ ಪ್ರಾಂಶುಪಾಲ ಸದಾಶಿವಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ರಾಷ್ಟ್ರೋತ್ಥಾನ ಶಾಲೆಯ ಸಂಗೀತ ಶಿಕ್ಷಕ ಶರಣಬಸವರಾಜ ತಬಲಾ ವಾದನದೊಂದಿಗೆ ಹರ್ಷ ಗೀತ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಖ್ಯಾತ ಜನಪದ ಗಾಯಕ ಜಡೇಶ್ ಎಮ್ಮಿಗನೂರು ಜನಪದ ಗೀತೆಗಳನ್ನು ಹಾಡಿದರು. ಡಾ. ಶಾಮೂರ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರವೀಂದ್ರ ಹಿರೇಮಠ ಸ್ವಾಗತಿಸಿದರು. ಡಾ. ಭ್ರಮರಾಂಭ ಯಾಟೆ ಕಾರ್ಯಕ್ರಮ ನಿರೂಪಿಸಿದರು. ಕಪ್ಪಗಲ್ಲು ಬಿ. ಚಂದ್ರಶೇಖರಾಚಾರ್ ವಂದಿಸಿದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 