ಹಿಡಕಲ್ನಲ್ಲಿ ಪತ್ರಿಕಾ ದಿನಾಚರಣೆ
Press Day Celebration at Hidkal
ರಾಯಬಾಗ 02: ಸಂವಿಧಾನದ ನಾಲ್ಕನೆಯ ಅಂಗವಾದ ಪತ್ರಿಕಾ ರಂಗ ಸಮಾಜವನ್ನು ಜಾಗೃತಗೊಳಿಸುವ ಕೆಲಸ ಮಾಡುತ್ತದೆ ಎಂದು ಹಾರೂಗೇರಿ ಸಿದ್ದೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಟಿ ಎಸ್ ವಂಟಗೂಡಿ ಹೇಳಿದರು.ಬುಧವಾರ ತಾಲೂಕಿನ ಹಿಡಕಲ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಖಿಲ ಕರ್ನಾಟಕ ಸಾಂಸ್ಕೃತಿಕ ಪರಿಷತ್ತು ತಾಲೂಕು ಘಟಕದಿಂದ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜುಲೈ 1 ಕನ್ನಡ ಪತ್ರಿಕೋದ್ಯಮದ ಇತಿಹಾಸ ಪರಂಪರೆ ಮತ್ತು ಸೇವೆಯನ್ನು ಸ್ಮರಿಸುವ ದಿನವಾಗಿದೆ. ಪತ್ರಕರ್ತರು ಎಲ್ಲಿಯವರೆಗೆ ಎಚ್ಚರವಾಗಿರುತ್ತಾರೋ ಅಲ್ಲಿಯವರೆಗೆ ಪ್ರಜಾಪ್ರಭುತ್ವದ ವ್ಯವಸ್ಥೆ ಶುದ್ಧವಾಗಿರುತ್ತದೆ. ಅನ್ಯಾಯ ಆದವರಿಗೆ ನ್ಯಾಯ ದೊರಕಿಸುವ ಕಾರ್ಯವನ್ನು ಪತ್ರಕರ್ತರು ಮಾಡುತ್ತಾರೆ ಎಂದರು. ಶಾಲೆ ಪ್ರಧಾನ ಗುರು ಬಿ ಎಲ್ ಘಂಟಿ, ಟಿ ಆರ್ ಕೋಳಿ, ಮಾಲೂತಾಯಿ ಪಾರ್ಥನಹಳ್ಳಿ, ಭಾರತಿ ಹಳ್ಳೆಪ್ಪಗೋಳ, ಜಯಶ್ರೀ ಹಳ್ಳೂರ, ಪ್ರಭಾವತಿ ರಾಯಮಾನೆ, ಪದ್ಮಾವತಿ ನಾಯ್ಕ, ಲಕ್ಷ್ಮೀ ಬಡಿಗೇರ, ಗಾಯತ್ರಿ ಹೆಚ್ ಇದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 