ಉತ್ತರ ಕನ್ನಡ ಜಿಲ್ಲಾ ಪಂಚಾಯತಿಗೆ ಪ್ರತಿಷ್ಠಿತ ಸ್ಕೂಚ್‌ ಪ್ರಶಸ್ತಿ

Prestigious Scooch Award for Uttara Kannada Zilla Panchayat

ಉತ್ತರ ಕನ್ನಡ ಜಿಲ್ಲಾ ಪಂಚಾಯತಿಗೆ ಪ್ರತಿಷ್ಠಿತ ಸ್ಕೂಚ್‌ ಪ್ರಶಸ್ತಿ 

ಕಾರವಾರ 03: ಡಮಾಮಿ ಸಿದ್ಧಿ ಸಮುದಾಯಕ್ಕಾಗಿ ಅನುಷ್ಠಾನ ಮಾಡಿದ ಪ್ರವಾಸೋದ್ಯಮ ಮೂಲಕ ಅಭಿವೃದ್ಧಿ ಯೋಜನೆಗೆ ಪ್ರತಿಷ್ಠಿತ ಸ್ಕೂಚ್‌ಪ್ರಶಸ್ತಿಯು ಉತ್ತರ ಕನ್ನಡ ಜಿಲ್ಲಾ ಪಂಚಾಯತಿಗೆ ದೊರಕಿದೆ.ನವದೆಹಲಿಯಲ್ಲಿ ಪಿ ಎಚ್‌ ಡಿ ಚೆಂಬರ್ ಆಪ್ ಕಾಮರ್ಸನಲ್ಲಿ ಈಚೆಗೆ ನಡೆದ ಸಮಾರಂಭದಲ್ಲಿಜಿಲ್ಲಾ ಪಂಚಾಯತನ ಯೋಜನಾ ನಿರ್ದೇಶಕ ಕರೀಂ ಅಸದಿ ಎಚ್‌.ಎ. ಯವರು ಪ್ರಶಸ್ತಿಯನ್ನು ಸ್ವೀಕರಿಸಿದರು.ಈ ರಾಷ್ಟ್ರ ಮಟ್ಟದ ಗೌರವವು ಸುಸ್ಥಿರ ಅಭಿವೃದ್ಧಿ, ಸುಸ್ಥಿರ ಪ್ರವಾಸೋದ್ಯಮ, ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳ ಸಬಲಿಕರಣ ಕ್ಷೇತ್ರದಲ್ಲಿ ಜಿಲ್ಲಾ ಪಂಚಾಯತ ಮಾಡಿದ ಸಾಧನೆಗೆ ನೀಡಲಾಗಿರುತ್ತದೆ. 

ಡಮಾಮಿ ಸಿದ್ಧಿ ಸಮುದಾಯ ಪ್ರವಾಸೋದ್ಯಮ ಯೋಜನೆಯು ಉತ್ತರ ಕನ್ನಡ ಜಿಲ್ಲೆಯ ಸಿದ್ಧಿ ಸಮುದಾಯದ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯನ್ನು ಉತ್ತೇಜಿಸಲು ಮತ್ತು ಗ್ರಾಮೀಣ ಸಮುದಾಯ ಪ್ರವಾಸೋದ್ಯಮವನ್ನು ಉತ್ತೇಜಿಸಿ ಸ್ವಸಹಾಯ ಸಂಘದ ಮಹಿಳೆಯರಿಗೆ ಪ್ರವಾಸೋದ್ಯಮ ಚಟುವಟಿಕೆಯಲ್ಲಿ ಜೀವನೋಪಾಯ ಚಟುವಟಿಕೆಯನ್ನು ಕೈಗೊಳ್ಳಲು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಅಡಿಯಲ್ಲಿ ಜಾರಿಗೆ ತಂದಿರುವ ರಾಜ್ಯ ಮಟ್ಟದಲ್ಲಿಯೇ ಒಂದು ವಿನೂತನ ಯೋಜನೆಯಾಗಿದೆ. ಈ ಯೋಜನೆಯು ಸಮುದಾಯದ ಸದಸ್ಯರ, ವಿಶೇಷವಾಗಿ ಮಹಿಳೆಯರ, ಜೀವನೋಪಾಯವನ್ನು ಉತ್ತಮಗೊಳಿಸಲು, ಮತ್ತು ಅವರ ಸಾಂಪ್ರದಾಯಿಕ ಮತ್ತು ಪರಿಸರ ಸ್ನೇಹಿ ಪರಂಪರೆಯನ್ನು ಉಳಿಸಿ ಬೆಳೆಸಲು ಹೆಚ್ಚಿನ ಆದ್ಯತೆ ನೀಡುತ್ತಿದ್ದು ಮುಂದಿನ ದಿನಗಳಲ್ಲಿ ಸಂಪೂರ್ಣ ಗ್ರಾಮವೇ ಪರಿಸರ ಸ್ನೇಹಿ ಸಮುದಾಯ ಪ್ರವಾಸೋದ್ಯಮ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವ ಗುರಿಯನ್ನು ಹೊಂದಲಾಗಿದೆ. 

ಈ ಸಂದರ್ಭದಲ್ಲಿ ಮಾತನಾಡಿದ ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರು, ಉತ್ತರ ಕನ್ನಡ ಜಿಲ್ಲೆಯು ಸಂಪೂರ್ಣವಾಗಿ ಅರಣ್ಯ ಪ್ರದೇಶಗಳಿಂದ ಕೂಡಿದ್ದು ಪರಿಸರ ಪ್ರವಾಸೋದ್ಯಮವನ್ನು ಅಭಿವೃದ್ಧಿ ಪಡಿಸಲು ಉತ್ತಮ ಅವಕಾಶಗಳಿದ್ದು ಈ ನಿಟ್ಟಿನಲ್ಲಿ ಎನ್‌.ಆರ್‌.ಎಂ.ಲ್ ಯೋಜನೆಯಡಿ ಬರುವ ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ಸಮುದಾಯ ಪ್ರವಾಸೋದ್ಯಮ ಚಟುವಟಿಕೆಯಲ್ಲಿ ಜೀವನೋಪಾಯ ಚಟುವಟಿಕೆಯನ್ನು ಕಲ್ಪಿಸುವ ಉದ್ದೇಶದಿಂದ ಈ ವಿನೂತನ ಯೋಜನೆಯನ್ನು ಪ್ರಾರಂಭಿಸಲಾಗಿತ್ತು.ಜಿಲ್ಲೆಯ ಸಿದ್ಧಿ ಸಮುದಾಯದ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯನ್ನು ಉತ್ತೇಜಿಸಲು, ಬೆಳೆಸಲು ಮತ್ತು ಪರಿಸರಕ್ಕೆ ಮಾರಕವಾಗದ ರೀತಿಯಲ್ಲಿ ಪ್ರವಾಸೋದ್ಯಮ ಚಟುವಟಿಕೆಯನ್ನು ಡಮಾಮಿ ಸಿದ್ಧಿ ಸಮುದಾಯ ಪ್ರವಾಸೋದ್ಯಮದಲ್ಲಿ ಅಳವಡಿಸಲಾಗಿದೆ.  

ಈ ಪ್ರಶಸ್ತಿಯನ್ನು ಪಡೆಯುವಲ್ಲಿ ಸಹಕರಿಸಿದ ಜಿಲ್ಲಾ ಸಿಬ್ಬಂದಿಗಳು, ತಾಲೂಕು ಸಿಬ್ಬಂದಿಗಳು, ಗ್ರಾಮ ಪಂಚಾಯತ ಸಿಬ್ಬಂದಿಗಳು ಹಾಗೂ ನಿಸರ್ಗ ಸ್ಪರ್ಶ ಪ್ರವಾಸೋದ್ಯಮ ಗುಂಪಿನ ಸದಸ್ಯರಿಗೆ ಅಭಿನಂದಿಸಿದರು. ಗ್ರಾಮೀಣ ಸ್ವಸಹಾಯ ಗುಂಪಿನ ಮಹಿಳೆಯರಿಂದ ಮುನ್ನಡೆಸಲ್ಪಡುವ ಈ ಸುಸ್ಥಿರ ಅಭಿವೃದ್ಧಿ ಮಾದರಿಯ ಸಮುದಾಯ ಪ್ರವಾಸೋದ್ಯಮ ಚಟುವಟಿಕೆಯು ನಮ್ಮ ಜಿಲ್ಲೆಯ ಹೆಮ್ಮೆಯ ಹೆಮ್ಮೆಯಾಗಿದೆ. ಇದೇ ಮಾದರಿಯಲ್ಲಿ ಜಿಲ್ಲೆಯ ಇತರೆ ಭಾಗಗಳಲ್ಲಿಯೂ ಸ್ವಸಹಾಯ ಗುಂಪಿನ ಮಹಿಳೆಯರ ಮೂಲಕ ಸಮುದಾಯ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಹೇಳಿದರು.ಸ್ಕೂಚ್‌ ಪ್ರಶಸ್ತಿಯು ಭಾರತದಲ್ಲಿ ಆಡಳಿತ ಸುಧಾರಣೆ ಮತ್ತು ಅಭಿವೃದ್ಧಿಯ ಕ್ಷೇತ್ರದಲ್ಲಿ ಅತ್ಯುನ್ನತ ಗೌರವಗಳಲ್ಲಿ ಒಂದಾಗಿದೆ, ನವೀನ ಚಟುವಟಿಕೆಗಳು, ಸುಸ್ಥಿರ ಅಭಿವೃದ್ಧಿ ಮತ್ತು ಪರಿಣಾಮಕಾರಿ ಕಾರ್ಯಕ್ರಮದ ಅನುಷ್ಠಾನಕ್ಕಾಗಿ ಸ್ಕೂಚ್‌ ಪ್ರಶಸ್ತಿಯನ್ನು ನೀಡಲಾಗುತ್ತದೆ ಎಂದರು.