ಪ್ರಧಾನಿ, ಶಾ ಭೇಟಿಯಾದ ನೀತೀಶ್ ಕುಮಾರ್
Prime Minister, Nitish Kumar met Shah
ಬಿಹಾರ ಮುಖ್ಯಮಂತ್ರಿಯಾಗಿ ದಾಖಲೆಯ10ನೇ ಬಾರಿ ಪ್ರಮಾಣವಚನ ಸ್ವೀಕರಿಸಿದ ನಂತರ ಮೊದಲ ಬಾರಿಗೆ ರಾಷ್ಟ್ರ ರಾಜಧಾನಿಗೆ ಭೇಟಿ ನೀಡಿರುವ ನೀತೀಶ್ ಕುಮಾರ್, ಸೋಮವಾರ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದರು. ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರ ನಿವಾಸದಲ್ಲಿ ನಡೆದ ಈ ಮಹತ್ವದ ಸಭೆಯಲ್ಲಿ ಚುನಾವಣೋತ್ತರ ಬಿಹಾರದ ಅಭಿವೃದ್ಧಿ ಯೋಜನೆಗಳು, ಕೇಂದ್ರದ ನೆರವು ಹಾಗೂ ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ನಾಯಕರು ಸುದೀರ್ಘ ಸಮಾಲೋಚನೆ ನಡೆಸಿದರು. ನೀತೀಶ್ ಕುಮಾರ್ ಅವರೊಂದಿಗೆ ಬಿಹಾರದ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಮತ್ತು ಕೇಂದ್ರ ಸಚಿವ ರಾಜೀವ್ ರಂಜನ್ ಸಿಂಗ್ (ಲಲನ್ ಸಿಂಗ್) ಉಪಸ್ಥಿತರಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಚೌಧರಿ,”ಬಿಹಾರದಲ್ಲಿ ಎನ್‌ಡಿಎಗೆ ದೊರೆತ ಭರ್ಜರಿ ಜನಾದೇಶದ ನಂತರ, ನಾವು ವಿಶ್ವದ ಅತ್ಯಂತ ಜನಪ್ರಿಯ ನಾಯಕ ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದೇವೆ. ಮೋದಿ ಅವರ ಮಾರ್ಗದರ್ಶನದಲ್ಲಿ ದೇಶ ಮತ್ತು ಬಿಹಾರ ರಾಜ್ಯವು ನಿರಂತರವಾಗಿ ಪ್ರಗತಿಯ ಹಾದಿಯಲ್ಲಿ ಸಾಗುತ್ತಿದೆ. ಅಭಿವೃದ್ಧಿ ಹೊಂದಿದ ಬಿಹಾರದ ಗುರಿಗಳನ್ನು ತಲುಪಲು ಈ ಭೇಟಿಯಲ್ಲಿ ಅಮೂಲ್ಯವಾದ ಸಲಹೆಗಳು ಲಭಿಸಿವೆ,” ಎಂದು ಚೌಧರಿ ತಿಳಿಸಿದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 