ಮೊದಲ 'ವಂದೇ ಭಾರತ್ ಸ್ಲೀಪರ್ ರೈಲಿ'ಗೆ ಪ್ರಧಾನಿ ಮೋದಿ ಹಸಿರು ನಿಶಾನೆ
Prime Minister Modi gives green signal to first 'Vande Bharat Sleeper Train'
ಮಾಲ್ಡಾ: ಪಶ್ಚಿಮ ಬಂಗಾಳದ ಮಾಲ್ಡಾ ಪಟ್ಟಣದಿಂದ ದೇಶದ ಮೊದಲ 'ವಂದೇ ಭಾರತ್ ಸ್ಲೀಪರ್ ರೈಲಿ'ಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಹಸಿರು ನಿಶಾನೆ ತೋರಿದರು. ಈ ರೈಲು ಪಶ್ಚಿಮ ಬಂಗಾಳದ ಹೌರಾ ಮತ್ತು ಗುವಾಹಟಿ (ಕಾಮಾಖ್ಯ) ನಡುವೆ ಸಂಚರಿಸಲಿದೆ. ರೈಲಿನೊಳಗೆ ಮೋದಿ ಅವರು ಮಕ್ಕಳು ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದಾರೆ.
ಆಧುನಿಕ ಭಾರತದ ಹೆಚ್ಚುತ್ತಿರುವ ಸಾರಿಗೆ ಅಗತ್ಯಗಳನ್ನು ಪೂರೈಸಲು ಸಂಪೂರ್ಣ ಹವಾನಿಯಂತ್ರಿತ (ಎಸಿ) ವಂದೇ ಭಾರತ್ ಸ್ಲೀಪರ್ ರೈಲನ್ನು ಪ್ರಯಾಣಿಕರಿಗಾಗಿ ಅಭಿವೃದ್ಧಿಪಡಿಸಲಾಗಿದೆ. ಕಡಿಮೆ ದರದಲ್ಲಿ ವಿಮಾನಯಾನ ಪ್ರಯಾಣದ ಅನುಭವವನ್ನು ನೀಡುತ್ತದೆ ಎಂದು ಪ್ರಧಾನಿ ಕಚೇರಿ (ಪಿಎಂಒ) ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ. ಈ ರೈಲು ದೂರದ ಪ್ರಯಾಣವನ್ನು ವೇಗವಾಗಿ, ಸುರಕ್ಷಿತವಾಗಿ ಮತ್ತು ಹೆಚ್ಚು ಅನುಕೂಲಕರವಾಗಿಸುತ್ತದೆ ಎಂದು ತಿಳಿಸಿದೆ.
ಅಲ್ಲದೇ ಈ ರೈಲು ಹೌರಾ ಮತ್ತು ಗುವಾಹಟಿ ಮಾರ್ಗದ ಪ್ರಯಾಣವನ್ನು ಸುಮಾರು 2.5 ಗಂಟೆಗಳಷ್ಟು ಕಡಿಮೆ ಮಾಡಲಿದೆ. ಜತೆಗೆ ಧಾರ್ಮಿಕ ಮತ್ತು ಪ್ರವಾಸೋದ್ಯಮಕ್ಕೂ ಉತ್ತೇಜನ ನೀಡಲಿದೆ ಎಂದೂ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 