ವಿಜಯಪುರ, 12 : ಸ್ವಚ್ಛ ಭಾರತ ಅಭಿಯಾನದಡಿ ಕನರ್ಾಟಕ ರಾಜ್ಯದಲ್ಲಿ ಗಣನೀಯ ಪ್ರಮಾಣದಲ್ಲಿ ಸಾಧನೆ ಮಾಡಿರುವುದಕ್ಕೆ ಭಾರತ ಸಕರ್ಾರದ ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವಾಲಯದ ಕಾರ್ಯದಶರ್ಿ ಪರಮೇಶ್ವರ ಅವರು ಪ್ರಶಂಸೆ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಸ್ವಚ್ಛ ಭಾರತ ಮಿಷನ್ದಡಿ ಸಾಧಿಸಿರುವ ಪ್ರಗತಿ ಹಾಗೂ ಕುಡಿಯುವ ನೀರು ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು, ಕನರ್ಾಟಕ ರಾಜ್ಯದಲ್ಲಿ ಸ್ವಚ್ಛ ಭಾರತ ಅಭಿಯಾನದಡಿ ಶೇ.99ರಷ್ಟು ಪ್ರಗತಿ ಸಾಧಿಸಿರುವುದಕ್ಕೆ ಪ್ರಶಂಸೆ ವ್ಯಕ್ತಪಡಿಸಿದ ಅವರು, ಬಯಲು ಬಹಿದರ್ೆಸೆ ಮುಕ್ತ ಗ್ರಾಮಗಳನ್ನು ಘೋಷಿಸುವ ಮುನ್ನ ಕಡ್ಡಾಯವಾಗಿ ಪರಿಶೀಲನೆ ನಡೆಸಬೇಕು ಎಂದು ಬೆಳಗಾವಿ ವಿಭಾಗದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಿದರು.
ಕನರ್ಾಟಕ ರಾಜ್ಯದ ರಾಯಚೂರು, ಬೀದರ, ಬೆಳಗಾವಿ ಹಾಗೂ ವಿಜಯಪುರಗಳಲ್ಲಿ ಇನ್ನೂ ಚುರುಕಾಗಿ ಶೌಚಾಲಯ ನಿಮರ್ಾಣ ಕಾರ್ಯವನ್ನು ಕೈಗೊಳ್ಳಬೇಕು. ಮುಂಬರುವ ಭವಿಷ್ಯದ ಮುಂದಾಲೋಚನೆಯೊಂದಿಗೆ ಶೌಚಾಲಯಗಳನ್ನು ಡಬಲ್ ಫಿಟ್ಗಳೊಂದಿಗೆ ನಿಮರ್ಿಸಲು ಗಮನ ನೀಡಿದ್ದಲ್ಲಿ ಪರಿಸರ ರಕ್ಷಣೆಗೂ ಸಹಕಾರಿಯಾಗಲಿದೆ ಎಂದು ಸಲಹೆ ನೀಡಿದರು.
ಶೌಚಾಲಯಗಳನ್ನು ನಿಮರ್ಿಸುವ ಸಂದರ್ಭದಲ್ಲಿ ಗುಣಮಟ್ಟಕ್ಕೆ ಹೆಚ್ಚಿನ ಗಮನ ನೀಡಬೇಕು. ಘನತ್ಯಾಜ್ಯ ನಿರ್ವಹಣೆ ಮತ್ತು ಪರಿಸರ ಸಂರಕ್ಷಣೆಗೆ ನೆರವಾಗುವ ನಿಟ್ಟಿನಲ್ಲಿ ನಿಮರ್ಿಸಲು ಗಮನ ನೀಡಬೇಕು. ಬಾಕಿ ಇರುವ ಶೌಚಾಲಯಗಳನ್ನು ಇದೇ ಅಕ್ಟೋಬರ್ ಅಂತ್ಯದೊಳಗೆ ನಿಮರ್ಿಸಿ ಎಲ್ಲ ಗ್ರಾಮಗಳನ್ನು ಬಯಲು ಬಹಿದರ್ೆಸೆ ಮುಕ್ತ ಗ್ರಾಮಗಳನ್ನಾಗಿ ಘೋಷಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಗ್ರಾಮಗಳಲ್ಲಿ ಸ್ವಚ್ಛತೆ ಹಾಗೂ ಶೌಚಾಲಯ ನಿಮರ್ಾಣಕ್ಕಾಗಿ ಸೂಕ್ತ ಜಾಗೃತಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳಬೇಕು. ಸ್ವಚ್ಛ ಗ್ರಾಹಿ ಕಾರ್ಯಕರ್ತರನ್ನು ತರಬೇತುಗೊಳಿಸಿ ಸೂಕ್ತ ಅರಿವು ಕಾರ್ಯವನ್ನು ಕೈಗೊಳ್ಳಬೇಕು. ಶೌಚಾಲಯ ನಿಮರ್ಾಣದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವವರ ಕುರಿತು ಯಶಸ್ವಿಯಶೋಗಾತೆಗಳನ್ನು ಪ್ರಚುರಪಡಿಸಲು ಪ್ರಯತ್ನಿಸಬೇಕು ಎಂದು ಹೇಳಿದರು.
ರಾಜ್ಯದಲ್ಲಿ ಈಗ ನಿಮರ್ಾಣಗೊಳ್ಳುತ್ತಿರುವ ಶೌಚಾಲಯಗಳ ಗುರಿ ಸಾಧನೆ ನಂತರ ಹೆಚ್ಚುವರಿಯಾಗಿ 4.5ಲಕ್ಷ ಮನೆಗಳಿಗೆ ಶೌಚಾಲಯ ನಿಮರ್ಿಸಿಕೊಡಬೇಕಾಗಿದ್ದು, ಈ ಕುರಿತಂತೆ ಕೇಂದ್ರ ಸಕರ್ಾರಕ್ಕೆ ಪ್ರಸ್ತಾವನೆ ಸಹ ಸಲ್ಲಿಸಲಾಗಿದೆ. ಕಳೆದ 4ವರ್ಷಗಳ ಅವಧಿಯಲ್ಲಿ ಜನಾಂದೋಲನ ರಾಜಕೀಯ ನಾಯಕತ್ವ, ಸಕರ್ಾರೇತರ ಸಂಘ-ಸಂಸ್ಥೆಗಳು ಹಾಗೂ ಜನರ ಸಹಭಾಗಿತ್ವದೊಂದಿಗೆ ಹೆಚ್ಚಿನ ಪ್ರಗತಿ ಸಾಧಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಅವರು, ಮುಂದಿನ ದಿನಗಳಲ್ಲಿ ಇನ್ನೂ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿ ಬಯಲು ಬಹಿದರ್ೆಸೆ ಮುಕ್ತ ಗ್ರಾಮಗಳನ್ನು ರೂಪಿಸಲು ಪ್ರಯತ್ನಿಸುವಂತೆ ಸೂಚನೆ ನೀಡಿದರು.
ರಾಷ್ಟ್ರದಾದ್ಯಂತ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ವಿವಿಧ ರಾಜ್ಯಗಳಲ್ಲಿ ಬಯಲು ಬಹಿದರ್ೆಸೆ ಮುಕ್ತ ಗ್ರಾಮಗಳ ಘೋಷಣೆಯಿಂದಾಗಿ ಸುಮಾರು 3ಲಕ್ಷಕ್ಕೂ ಅಧಿಕ ಜನರ ಜೀವಹಾನಿ ತಪ್ಪಿಸಲಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ವರದಿ ನೀಡಿದೆ. ಅದರಂತೆ ಸ್ವಚ್ಛ ಭಾರತ ಅಭಿಯಾನ ಘೋಷಣೆ ಜಾರಿಯಿಂದ ಮಹಿಳೆಯರ ಗೌರವ ಹೆಚ್ಚಿಸುವ ಜೊತೆಗೆ ರಕ್ಷಣೆಗೂ ನೆರವಾಗಿದೆ ಎಂದು ಈ ಸಂದರ್ಭದಲ್ಲಿ ಅವರು ಅಭಿಪ್ರಾಯಟ್ಟರು.
ಕುಡಿಯುವ ನೀರು ಸರಬರಾಜು ಯೋಜನೆಯಲ್ಲಿ ಪ್ರಗತಿಗೆ ಸೂಚನೆ : ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯಡಿಯಲ್ಲಿ ಸೂಕ್ತ ಪ್ರಗತಿ ಸಾಧಿಸಬೇಕು. ಕೊಳವೆ ನೀರು ಸರಬರಾಜು (ಪಿಡಬ್ಲೂಎಸ್) ಯೋಜನೆಯಲ್ಲಿ ಹಾಗೂ ಮನೆ-ಮನೆಗೆ ನೀರು ಸರಬರಾಜು ಯೋಜನೆಯಡಿ ಶೇಕಡಾ ನೂರರಷ್ಟು ಪ್ರಗತಿ ಸಾಧಿಸಬೇಕು. ಸಿಎಸ್ಆರ್ ಸಂಸ್ಥೆಗಳ ಸಹಯೋಗದೊಂದಿಗೆ ಅಂತರಜಲ ಹೆಚ್ಚಳ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳುವಂತೆ ತಿಳಿಸಿದ ಅವರು, ಶುದ್ಧ ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಬೇಕು. ಅಶುದ್ಧ ನೀರಿನ ರಾಸಾಯನಿಕ ಹಾಗೂ ಬಯಾಲಾಜಿಕಲ್ ಪರೀಕ್ಷೆ ನಡೆಸುವ ಕಾರ್ಯ ಪರಿಣಾಮಕಾರಿಯಾಗಿ ಹಮ್ಮಿಕೊಳ್ಳಬೇಕು ಎಂದು ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ನೀಲಮ್ಮ ಮೇಟಿ, ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ರಾಜ್ಯ ಆರ್ಡಿಪಿಆರ್ ಹೆಚ್ಚುವರಿ ಕಾರ್ಯದಶರ್ಿ ಎಲ್. ಅತೀಕ್, ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವಾಲಯದ ಜಂಟಿ ಕಾರ್ಯದಶರ್ಿ ಶ್ರೀಮತಿ ರಾಧಾ, ಮುಖ್ಯ ಅಧೀಕ್ಷಕ ಅಭಿಯಂತರ ಪ್ರಕಾಶ್, ಜಿಲ್ಲಾಧಿಕಾರಿ ಎಸ್.ಬಿ.ಶೆಟ್ಟೆಣ್ಣವರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಕಾಸ ಕಿಶೋರ ಸುರಳಕರ ಸೇರಿದಂತೆ ಬೆಳಗಾವಿ ವಿಭಾಗದ ಅಪರ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು.