ಕೊಪ್ಪಳ 28: ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳ ಹಾಗೂ ಶಾಲಾ ಕಾಂಪೌಂಡ ನಿರ್ಮಾಣಕ್ಕೆ ಆದ್ಯತೆ ನಿಡುವಂತೆ ಕೊಪ್ಪಳ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹೆಚ್.ವಿಶ್ವನಾಥರೆಡ್ಡಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೊಪ್ಪಳ ಜಿಲ್ಲಾ ಪಂಚಾಯತ್ ಜೆ.ಹೆಚ್. ಸಭಾಂಗಣದಲ್ಲಿ ಶುಕ್ರವಾರದಂದು ಆಯೋಜಿಸಲಾದ ಜಿ.ಪಂ. ಮಾಸಿಕ ಕೆ.ಡಿ.ಪಿ. (20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧೀನದಲ್ಲಿ ಬರುವ ಅಂಗನವಾಡಿ ಕೇಂದ್ರಗಳ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಶಾಲೆಗಳ ಕಾಂಪೌಂಡ ನಿರ್ಮಾಣ ಮಾಡಬಹುದು. ಈ ಕುರಿತು ಜಿಲ್ಲಾ ಪಂಚಾಯತ್ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಕಾಂಪೌಂಡ ನಿರ್ಮಾಣ ಅಗತ್ಯವಿರುವ ಅಂಗನಾಡಿ ಮತ್ತು ಶಾಲೆಗಳ ಮಾಹಿತಿ ಒದಗಿಸುವಂತೆ ಸಿಡಿಪಿಒ ಹಾಗೂ ಡಿಡಿಪಿಐ ಕ್ರಮ ವಹಿಸಬೇಕು. ಜಿಲ್ಲಾ ಪಂಚಾಯತ್ ವತಿಯಿಂದ ಸ್ವಚ್ಛ ಮೇವ ಜಯತೆ ಅಭಿಯಾನವನ್ನು ಏರ್ಪಡಿಸಲಾಗಿದ್ದು, ಎಲ್ಲಾ ಶಾಲೆಗಳಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಬೇಕಾಗಿದೆ. ತಾಲೂಕವಾರು ಕಾರ್ಯಕ್ರಮದ ಪಟ್ಟಿ ತಯಾರಿಸಿ, ಸ್ವಚ್ಛ ಮೇವ ಜಯತೆ ಕಾರ್ಯಕ್ರಮಗಳಲ್ಲಿ ಸಂಬಂಧಿಸಿದ ಜಿ.ಪಂ., ತಾ.ಪಂ. ಸದಸ್ಯರನ್ನು ಆಹ್ವಾನಿಸಬೇಕು. ಈ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಭಾಗಗಳಲ್ಲಿ ಬಹುತೆಕ ಕಡೆ ಸಿಸಿ ರಸ್ತೆಗಳು ನಿಮರ್ಾಣವಾಗಿವೆ. ಆದರೆ ಕೆಲ ಕಡೆ ರಸ್ತೆ ಪಕ್ಕದಲ್ಲಿ ಚರಂಡಿ ನಿಮರ್ಿಸಿಲ್ಲ. ಇದರಿಂದ ಜನರಿಗೆ ತುಂಬು ಸಮಸ್ಯೆ ಉಂಟಾಗುತ್ತಿದೆ. ಶೀಘ್ರ ಚರಂಡಿಗಳನ್ನು ನಿಮರ್ಿಸುವಂತೆ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ತೋಟಗಾರಿಕೆ ಇಲಾಖೆ ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಆದರೆ ಕೆಲವು ಕಾರ್ಯಕ್ರಮಗಳನ್ನು ತಾಲೂಕ ಮಟ್ಟದಲ್ಲಿಯೂ ಸಹ ಹಮ್ಮಿಕೊಳ್ಳಬೇಕು. ತಮ್ಮ ಇಲಾಖೆಯ ಯೋಜನೆಗಳ ಬಗ್ಗೆ ಗ್ರಾಮೀಣ ಪ್ರದೇಶದಲ್ಲಿಯೂ ಸಹ ಜಾಗೃತಿ ಮೂಡಿಸಬೇಕು. ಜಿಲ್ಲೆಯ ಹಲವು ರೈತರು ಕೃಷಿ ಹೊಂಡ ನಿಮರ್ಾಣ ಮಾಡಿದ್ದು, ಕೃಷಿ ಹೊಂಡದ ಪಕ್ಕದಲ್ಲಿ ನೆಡಲು ಒಬ್ಬ ರೈತರಿಗೆ ಕನಿಷ್ಠ ಎರಡು ಕರಿಬೇವು, ಲಿಂಬೆಯಂತಹ ಸಸಿಗಳನ್ನು ವಿತರಿಸಿ. ಪಶು ಇಲಾಖೆ ಅಧಿಕಾರಿಗಳು ಜಿಲ್ಲೆಯಲ್ಲಿ ಜಾನುವಾರುಗಳು ಎಷ್ಟಿವೆ ಎಂಬ ಮಾಹಿತಿಯ ವರದಿಯನ್ನು ನೀಡಬೇಕು. ಜಾನುವಾರುಗಳ ಸಂಖ್ಯೆ ಕುಗ್ಗುತ್ತಿದೆಯೇ?. ಜಾನುವಾರುಗಳ ಪಾಲನೆಗೆ ರೈತರಿಗೆ ಸಕರ್ಾರದಿಂದ ಹಲವಾರು ಸೌಲಭ್ಯಗಳನ್ನು ನೀಡಲಾಗುತ್ತಿದೆ. ಈ ಸೌಲಭ್ಯ ರೈತರಿಗೆ ಸಿಗಬೇಕಾದರೇ ಕೆ.ಎಂ.ಎಫ್. ಮತ್ತು ಪಶು ಇಲಾಖೆಯವರು ಜಂಟಿಯಾಗಿ ರೈತರ ಬೆನ್ನಿಗೆ ನಿಲ್ಲುವಂತಹ ಕೆಲಸ ಮಾಡಬೇಕು. ಕುರಿ, ಆಡು, ದನ, ಎಮ್ಮೆ ಸಾಕಿರುವಂತಹ ರೈತರು, ಮಹಿಳೆಯರು ಮತ್ತು ಇತರೆ ಸಾಕಾಣಿಕೆದಾರರಿಂದ ಸಹಕಾರ ಸಂಘಗಳನ್ನು ಪ್ರಾರಂಭಿಸಲು ಅವರಿಗೆ ಪ್ರೋತ್ಸಾಹಿಸಬೇಕು. ಈ ನಿಟ್ಟಿನಲ್ಲಿ ಸಹಕಾರ ಸಂಘಗಳ ಉಪನಿಬಂಧಕರು ಸಹ ಸಹಕಾರ ನೀಡಬೇಕು ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹೆಚ್.ವಿಶ್ವನಾಥರೆಡ್ಡಿ ಅವರು ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ಎಸ್. ಪೆದ್ದಪ್ಪಯ್ಯ ಅವರು ಮಾತನಾಡಿ, ಗ್ರಾಮ ಪಂಚಾಯತಿಗಳಿಂದ ಚರಂಡಿಗಳ ಪ್ರಾರಂಭಿಸಲು ಮೊದಲ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಎಲ್ಲಾ ಕಾರ್ಯನಿವರ್ಾಹಕ ಅಧಿಕಾರಿಗಳು ಕ್ರಿಯಾ ಯೊಜನೆ ತಯಾರಿಸಿ ಕಾಮಗಾರಿ ಪ್ರಾರಂಭಕ್ಕೆ ಕ್ರಮ ಕೈಗೊಳ್ಳಬೇಕು. ನರೇಗಾದಡಿ ಗ್ರಾಮೀಣ ಪ್ರದೇಶಗಳಲ್ಲಿ ದನಗಳ ದೊಡ್ಡಿ ನಿರ್ಮಾಣ ಮಾಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಸೂಚನೆ ನೀಡಿದ್ದು, ದನಗಳ ದೊಡ್ಡಿ ನಿರ್ಮಾಣ ಮಾಡುವ ಗುರಿಯನ್ನು ನಿಗದಿ ಮಾಡುವಂತೆ ಪಶು ಸಂಗೋಪನೆ ಇಲಾಖೆ ಅಧಿಕರಿಗಳು ಕ್ರಮವಹಿಸಬೇಕು ಎಂದರು.
ಜಿ.ಪಂ. ಉಪಕಾರ್ಯದಶಿ ಎನ್.ಕೆ. ತೊರವಿ ಅವರು ಮಾತನಾಡಿ, ಪಶು ಸಂಗೋಪನಾ ಇಲಾಖೆಗೆ ಬೇಕಾಗುವ ಅನುದಾನವನ್ನು ಜಿಲ್ಲಾ ಪಂಚಾಯತ್ ನಿಂದಲೇ ಒದಗಿಸಲಾಗುತ್ತಿದೆ. ಪಶು ಇಲಾಖೆಯ ಕಾರ್ಯಕ್ರಮಗಳಿಗೆ ಯಾವುದೇ ಅನುದಾನ ಕೊರತೆ ಇಲ್ಲ. ಪಶು ಇಲಾಖೆಯವರು ತಮ್ಮ ಸಿಬ್ಬಂದಿಗಳಿಂದ ಸರಿಯಾದ ಕೆಲಸ ತೆಗೆದುಕೊಳ್ಳಿ. ತಾಲೂಕಿಗೆ ಒಬ್ಬರಂತೆ ನೋಡಲ್ ಅಧಿಕಾರಿಗಳನ್ನು ನಿಯೋಜಿಸಿ, ತಮ್ಮ ಇಲಾಖೆಯ ಕಾರ್ಯಕ್ರಮಗಳ ಪ್ರಗತಿಯನ್ನು ತಿಳಿದುಕೊಳ್ಳಬಹುದಗಿದೆ. ರೈತರಲ್ಲಿ, ಜನ ಸಾಮಾನ್ಯರಲ್ಲಿ ಪಶು ಇಲಾಖೆಯ ಸಹಾಯಧನ, ಇತ್ಯಾದಿ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಬೇಕು. ತೋಟಗಾರಿಕೆ ಮತ್ತು ಕೃಷಿ ಇಲಾಖೆ ಯಾವ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಅದೇ ರೀತಿಯಲ್ಲಿ ತಮ್ಮ ಇಲಾಖೆಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ ಎಂದರು.
ಪಶುಸಂಗೋಪನೆ ಮತ್ತು ಪಶು ಪಾಲನಾ ಇಲಾಖೆ ಉಪನಿರ್ದೇಶಕ ಡಾ. ಬಸಯ್ಯ ಸಾಲಿ ಮಾತನಾಡಿ, 2018ರ ಅಕ್ಟೋಬರ್. 01 ರಿಂದ 20ನೇ ಜಾನುವಾರುಗಳ ಗಣತಿಯು ಜಿಲ್ಲೆಯಾದ್ಯಂತ ಪ್ರಾರಂಭವಾಗಿದ್ದು, ಶೀಘ್ರದಲ್ಲಿ ಮುಕ್ತಾಯವಾಗಲಿದೆ. 19ನೇ ಗಣತಿಯ ಸಂಖ್ಯೆಗಿಂತಲೂ 20ನೇ ಗಣತಿಯಲ್ಲಿ ಜಾನುವಾರುಗಳ ಸಂಖ್ಯೆ ಹೆಚ್ಚಾಗಬಹುದಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಚಂಡೂರ ಹನುಮಂತ ಗೌಡ ಪಾಟೀಲ್, ಜಿಪಂ. ಯೋಜನಾ ನಿದರ್ೇಶಕ ರವಿ ಬಿಸರಳ್ಳಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.