ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರ ರಕ್ಷಣೆಗೆ ಆದ್ಯತೆ ನೀಡಿ: ಡಿಸಿಎಂ ಸವದಿ

ಕೊಪ್ಪಳ 07: ಕೊರೋನಾ ಸೋಂಕಿತರ ಚಿಕಿತ್ಸೆಗೆ ಪ್ರಾಣದ ಹಂಗು ತೊರೆದು ಕರ್ತವ್ಯ ನಿರ್ವಹಿಸುವ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗಳ ರಕ್ಷಣೆ, ಸುರಕ್ಷತೆಗೆ ಅಗತ್ಯ ಕಿಟ್ಗಳು, ಸಲಕರಣೆಗಳನ್ನು ಒದಗಿಸಿ, ಅವರ ರಕ್ಷಣೆಗೆ ಆದ್ಯತೆ ನೀಡಿ ಎಂದು ಕನರ್ಾಟಕ ಸಕರ್ಾರದ ಉಪ ಮುಖ್ಯಮಂತ್ರಿಗಳು, ಸಾರಿಗೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸಂಗಪ್ಪ ಸವದಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಕೋವಿಡ್-19 ಸೋಂಕು ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ತೆಗೆದುಕೊಂಡ ಕ್ರಮಗಳ ಕುರಿತ ಪರಿಶೀಲನಾ ಸಭೆಯಲ್ಲಿ ಜಿಲ್ಲೆಯ ಹಿರಿಯ ಅಧಿಕಾರಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.

ದೇಶಾದ್ಯಂತ ವೈದ್ಯರು, ನಸರ್್, ಇತರೆ ಆರೋಗ್ಯ ಸಹಾಯಕರು, ಅಂಗನವಾಡಿ, ಆಶಾ ಕಾರ್ಯಕತರ್ೆಯರು ಪರತಿದಿನ ತಮ್ಮ ಪ್ರಾಣದ ಹಂಗು ತೊರೆದು ಸೋಂಕಿತರ ಪತ್ತೆಗೆ ಹಾಗೂ ಸೋಂಕಿತರ ಚಿಕಿತ್ಸೆಗೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ರಕ್ಷಣೆಗಾಗಿ ಅಗತ್ಯವಿರುವ  ವೈಯಕ್ತಿಕ ರಕ್ಷಣಾ ಸಲಕರಣೆಗಳನ್ನು, ಎನ್-19 ಮಾಸ್ಕ್ಗಳನ್ನು ಜಿಲ್ಲೆಯ ಅಗತ್ಯಕ್ಕೆ ತಕ್ಕಂತೆ ಒದಗಿಸಿ. ಹಾಗೂ ಜಿಲ್ಲೆಯಲ್ಲಿ ಅಗತ್ಯವಿರುವ ವೈದ್ಯರು ಹಾಗೂ ಆರೋಗ್ಯ ಸಹಾಯಕರನ್ನು ನೇಮಕ ಮಾಡಿಕೊಳ್ಳಲು ಇಂದೇ ಕ್ರಮ ವಹಿಸಿ. ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಕಿಮ್ಸ್)ಯಲ್ಲಿ ಮಂಜೂರಾಗಿರುವ ವೈದ್ಯರ ಹುದ್ದೆಯನ್ನು ಭತರ್ಿ ಮಾಡಿ. ಉಳಿದಂತೆ ಆರೋಗ್ಯ ಸಹಾಯಕರು ಹಾಗೂ ಇನ್ನಿತರ ಸಿಬ್ಬಂದಿಗಳನ್ನು ಅಗತ್ಯಕ್ಕನುಸಾರವಾಗಿ ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಿ. ಜಿಲ್ಲೆಯಲ್ಲಿ ಇದುವರೆಗೂ ಯಾವುದೇ ಸೋಂಕಿತ ಪ್ರಕರಣಗಳು ಪತ್ತೆಯಾಗಿಲ್ಲ. ಆದರೂ ಮುಂಜಾಗ್ರತಾ ಕ್ರಮವಾಗಿ ಕೋವಿಡ್-19 ಆಸ್ಪತ್ರೆಗಳನ್ನು ಸ್ಥಾಪಿಸಲಾಗಿದೆ.  ಅದಕ್ಕೆ ತಕ್ಕಂತೆ ವೈದ್ಯರ ಹಾಗೂ ಆರೋಗ್ಯ ಸಹಾಯಕ ಸಿಬ್ಬಂದಿಯನ್ನು ಸೂಕ್ತ ತರಬೇತಿಯೊಂದಿಗೆ ತಯಾರುಗೊಳಿಸಬೇಕು. ಆದ್ದರಿಂದ ವೈದ್ಯರ ನೇಮಕಕ್ಕೆ ಕ್ರಮ ಹಾಗೂ ಅವರ ರಕ್ಷಣೆಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿ ಎಂದು ಅವರು ಹೇಳಿದರು.

ಕೊರೊನಾ ಸೋಂಕಿನ ಹರಡುವಿಕೆ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ.  ಸಾರ್ವಜನಿಕರು ಪ್ರತಿಯೊಬ್ಬರೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಅತ್ಯವಶ್ಯಕವಾಗಿರುವುದರಿಂದ ನ್ಯಾಯಾಬೆಲೆ ಅಂಗಡಿ ಮತ್ತು ತರಕಾರಿ ಅಂಗಡಿಗಳಲ್ಲಿ ಜನಸಂದಣಿ ಆಗದಂತೆ ಎಚ್ಚರವಹಿಸಿ. ಪುರಸಭೆಗಳ ವ್ಯಾಪ್ತಿಯಲ್ಲಿ ಪುರಸಭೆಗಳ ವಾಹನವನ್ನು ಬಳಸಿಕೊಂಡು ಒಬ್ಬ ಪೊಲೀಸ್ ಸಿಬ್ಬಂದಿ, ನ್ಯಾಯಬೆಲೆ ಅಂಗಡಿ ಸಿಬ್ಬಂದಿ ಹಾಗೂ ಪುರಸಭೆ ಸಿಬ್ಬಂದಿಯನ್ನು ಒಳಗೊಂಡಂತೆ  ತೂಕದ ಯಂತ್ರವನ್ನು ವಾಹನದಲ್ಲಿ ಕೊಂಡೊಯ್ದು ಪಟ್ಟಣದ ಮನೆ ಮನೆಗೆ ಪಡಿತರವನ್ನು ವಿತರಿಸಲು ಕ್ರಮ ಕೈಗೊಳ್ಳಿ. ಉಳಿದಂತೆ ಗ್ರಾಮಗಳಲ್ಲಿ ನ್ಯಾಯಬೆಲೆ ಅಂಗಡಿಯು ತಿಂಗಳು ಪೂತರ್ಿ ಬೆಳಗ್ಗೆಯಿಂದ ಸಂಜೆಯವರೆಗೂ ತೆರದಿರಬೇಕು. ನ್ಯಾಯಬೆಲೆ ಅಂಗಡಿಯವರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕ್ರಮ ಕೈಗೊಂಡು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಇದನ್ನು ಪಾಲಿಸದ ನ್ಯಾಯಬೆಲೆ ಅಂಗಡಿಗಳ ಲೈಸನ್ಸ್ಗಳನ್ನು ರದ್ದು ಪಡಿಸಲಾಗುವುದು ಎಂದು ಆಯಾ ನ್ಯಾಯಬೆಲೆ ಅಂಗಡಿಗಳ ಮಾಲೀಕರಿಗೆ ಸೂಚನೆ ನೀಡಬೇಕುವಂತೆ ಸೂಚನೆ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ರೈತರು ಬೆಳೆದ ಹಣ್ಣುಗಳು ಲಾಕ್ಡೌನ್ ಪರಿಣಾಮದಿಂದ ಸೂಕ್ತ ಮಾರುಕಟ್ಟೆ ಇಲ್ಲದೆ ಹೊಲದಲ್ಲಿಯೇ ನಾಶವಾಗುತ್ತಿವೆ. ಇದರಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಆದ್ದರಿಂದ ರೈತರು ಬೆಳೆದ ವಿವಿಧ ಹಣ್ಣುಗಳನ್ನು, ತರಕಾರಿಗಳನ್ನು ನೇರವಾಗಿ ಹಾಪ್ಕಾಮ್ಸ್ಗೆ ತಲುಪಿಸುವಂತೆ ಕ್ರಮ ಕೈಗೊಳ್ಳಿ. ಅನಾಥ ಹಾಗೂ ನಿರ್ಗತಿಕರು, ಕಡುಬಡವರು ಇರುವವರಿಗೆ ಯಾವುದೇ ಆಧಾರ್ ಮತ್ತು ರೇಶನ್ ಕಾಡರ್್ ಇಲ್ಲದಿದ್ದರೂ ಸಹ ಅವರಿಗೆ ಪಡಿತರ ಧಾನ್ಯಗಳನ್ನು ಕೋವಿಡ್-19 ಮುಗಿಯುವವರೆಗೆ ವಿತರಿಸುವ ವ್ಯವಸ್ಥೆಯಾಗಬೇಕು. ಈ ನಿಟ್ಟಿನಲ್ಲಿ ಆಹಾರ ಇಲಾಖೆಯವರು ಅಗತ್ಯ ಕ್ರಮ ವಹಿಸಬೇಕು ಎಂದು ಸಚಿವರು ಸೂಚನೆ ನೀಡಿದರು.

ಕೊರೊನಾ ನಿರ್ಮೂಲನೆಗಾಗಿ ಕೇಂದ್ರ ಮತ್ತು ರಾಜ್ಯ ಸಕರ್ಾರಗಳ ಸುತ್ತೋಲೆಗಳನ್ನು ಪ್ರತಿಯೊಬ್ಬರೂ ಪಾಲನೆ ಮಾಡಬೇಕು. ಈ ಮಾರಕ ಖಾಯಿಲೆ ದೇಶದಾದ್ಯಂತ ಹಬ್ಬಿದ್ದು, ಇದರ ನಿಮರ್ೂಲನೆಗೆ ಸಕರ್ಾರ ಹಾಗೂ ಅಧಿಕಾರಿಗಳೊಂದಿಗೆ ಸಾರ್ವಜನಿಕರೆಲ್ಲರೂ ಕೈಜೋಡಿಸಿದಾಗ ಮಾತ್ರ ಸಾಧ್ಯವಾಗಿದ್ದು, ವೈದ್ಯಾಧಿಕಾರಿಗಳು, ಆರೋಗ್ಯ ಸಹಾಯಕರು ತಮ್ಮ ಮನೆಗೆ ಭೇಟಿ ನೀಡಿದಾಗ ಅವರಿಗೆ ಸಹಕಾರ ನೀಡಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಹೇಳಿದರು.

ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್-19 ಮುಂಜಾಗ್ರತೆಗಾಗಿ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿತ್ತಿದ್ದು, ಜಿಲ್ಲಾ ಆಸ್ಪತ್ರೆಯನ್ನು ವಿಶೇಷ ಕೋವಿಡ್ ಆಸ್ಪತ್ರೆಯನ್ನಾಗಿ ಮಾಡಲಾಗಿದೆ. ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್ ವತಿಯಿಂದ ವಾಹನಗಳ ಮೂಲಕ ಮನೆ-ಮನೆಗೆ ತರಕಾರಿ ವಿತರಿಸುವ ವ್ಯವಸ್ಥೆ ಮಾಡಲಾಗಿದೆ.  ಅನಾಥ ಮತ್ತು ನಿರ್ಗತಿಕ ಬಡವರು ಮತ್ತು ಕಾಮರ್ಿಕರಿಗೆ ಆಹಾರದ ಪ್ಯಾಕೆಟ್ಗಳು ಮತ್ತು ಹಾಲನ್ನು ವಿತರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹೆಚ್.ವಿಶ್ವನಾಥರೆಡ್ಡಿ, ಸಂಸದರಾದ ಕರಡಿ ಸಂಗಣ್ಣ, ಶಾಸಕರಾದ ರಾಘವೇಂದ್ರ ಕೆ. ಹಿಟ್ನಾಳ, ಅಮರೇಗೌಡ ಬಯ್ಯಾಪುರ, ಪರಣ್ಣ ಮುನವಳ್ಳಿ, ಹಾಲಪ್ಪ ಬಸಪ್ಪ ಆಚಾರ್, ಬಸವರಾಜ ದಢೇಸೂಗೂರು,  ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಎಸ್. ಪಾಟೀಲ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ರಘುನಂದನ್ ಮೂತರ್ಿ, ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಲಿಂಗರಾಜು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.