ಉತ್ತರ ಕರ್ನಾಟಕದ 'ಉಡಾಳ'ನಾಗಿ ಗಮನ ಸೆಳೆವ ಪೃಥ್ವಿ
Prithvi, who attracts attention as the 'Udala' of North Karnataka
ದಾವಣಗೆರೆ ಮೂಲದ ರವಿ ಶಾಮನೂರು ಹಾಗೂ ಯೋಗರಾಜ್ ಭಟ್ ಅವರು ನಿರ್ಮಿಸಿರುವ, 'ಉಡಾಳ' ಸಿನಿಮಾ ಇಂದು (ನ.14) ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಈಗಾಗಲೇ ಟೀಸರ್, ಟ್ರೇಲರ್ ಹಾಡುಗಳಿಂದ ಸೌಂಡ್ ಮಾಡುತ್ತಿರುವ ಈ ಚಿತ್ರವನ್ನು ಅಮೋಲ್ ಪಾಟೀಲ್ ನಿರ್ದೇಶನ ಮಾಡಿದ್ದಾರೆ. 'ಪದವಿಪೂರ್ವ' ಖ್ಯಾತಿಯ ಪೃಥ್ವಿ ಶಾಮನೂರು ನಾಯಕನಾಗಿ ನಟಿಸಿದ್ದು, ನಾಯಕಿಯಾಗಿ ಹೃತಿಕಾ ಶ್ರೀನಿವಾಸ್ ಅಭಿನಯ ಮಾಡಿದ್ದಾರೆ. ಸಿನಿಮಾ ಬಗ್ಗೆ ಮಾಹಿತಿ ನೀಡಿರುವ ಯೋಗರಾಜ್ ಭಟ್, 'ನಗಿಸುವುದು ಅಷ್ಟು ಸುಲಭವಲ್ಲ. ನಗು ಬರುವುದು ಅಷ್ಟು ಸುಲಭವಲ್ಲ. ಆದರೆ ನಿರ್ದೇಶಕ ಅಮೋಲ್ ಪಾಟೀಲ್, ನಾಯಕ ಪೃಥ್ವಿ ಶಾಮನೂರು ಸೇರಿದಂತೆ 20 ಜನ ಕಲಾವಿದರ ತಂಡವನ್ನಿಟ್ಟುಕೊಂಡು 'ಉಡಾಳ' ಚಿತ್ರದ ಮೂಲಕ ನಗುವಿನ ರಸದೌತಣವನ್ನೇ ಬಡಿಸಿದ್ದಾನೆ. ವೃತ್ತಿಯಲ್ಲಿ ಅಧ್ಯಾಪಕರಾಗಿದ್ದ ರವಿ ಶಾಮನೂರು ಸಿನಿಮಾಗೆ ಬಂಡಾವಾಳ ಹೂಡಿದ್ದಾರೆ. ಇದೇ ರೀತಿ ಕಲಿತು ನಟನೆ ಮಾಡಿದರೆ, ಪೃಥ್ವಿ ಸ್ವಲ್ಪ ದಿನಗಳಲ್ಲಿ ಸ್ಟಾರ್ ನಟ ಆಗುತ್ತಾನೆ' ಎಂದು ಹೇಳಿದರು.
'ಇದು ನಾನು, ಯೋಗರಾಜ್ ಭಟ್ ಅವರ ಜೊತೆಗೆ ಸೇರಿ ನಿರ್ಮಾಣ ಮಾಡುತ್ತಿರುವ ಎರಡನೇ ಸಿನಿಮಾ. ನಿರ್ಮಾಪಕನಿಗೆ ಒಂದೊಳ್ಳೆ ತಂಡ ಸಿಗುವುಕ್ಕಿಂತ ಮತ್ತೇನು ಬೇಕು. ನನಗೆ ಅಂತಹ ಒಳ್ಳೆಯ ತಂಡ ಸಿಕ್ಕಿದೆ. ಚಿತ್ರ ಕೂಡ ಅಂದುಕೊಂಡ ಹಾಗೆ ಬಂದಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ' ಎನ್ನುವರು ನಿರ್ಮಾಪಕ ರವಿ ಶಾಮನೂರು. 'ಉತ್ತರ ಕರ್ನಾಟಕದ ಸೊಗಡನ್ನು ಊಟದಲ್ಲಿ ಉಪ್ಪಿನಕಾಯಿ ಇದ್ದ ಹಾಗೆ ಮಾತ್ರ ಕೆಲವು ಚಿತ್ರಗಳಲ್ಲಿ ಬಳಸಿಕೊಳ್ಳಲಾಗಿತ್ತು. ಆದರೆ ನಮ್ಮ ಚಿತ್ರ ಫುಲ್ ಮೀಲ್ಸ್ ತರಹ ಉತ್ತರ ಕರ್ನಾಟಕದ ಸಿನಿಮಾ. ಇಡೀ ಕಥೆ ವಿಜಾಪುರದಲ್ಲೇ ನಡೆಯುತ್ತದೆ. ಉತ್ತರ ಕರ್ನಾಟಕದ ಸುಂದರತೆ ಈ ಚಿತ್ರದಲ್ಲಿದೆ. ನಿರ್ಮಾಪಕರು ಹೇಳಿದ ಹಾಗೆ ಒಂದೊಳ್ಳೆ ತಂಡದ ಸಹಕಾರದಿಂದ ಒಂದೊಳ್ಳೆ ಚಿತ್ರ ನವೆಂಬರ್ 14 ರಂದು ನಿಮ್ಮ ಮುಂದೆ ಬರಲಿದೆ' ಎಂದರು ನಿರ್ದೇಶಕ ಅಮೋಲ್ ಪಾಟೀಲ್.
'ಟೀಸರ್, ಟ್ರೇಲರ್ ಹಾಗೂ ಹಾಡುಗಳನ್ನು ಮೆಚ್ಚಿಕೊಂಡಿರುವ ಜನರು ಟ್ರೇಲರ್‌ಗೂ ಪ್ರಶಂಸೆ ನೀಡುತ್ತಿದ್ದಾರೆ. ಚಿತ್ರದ ಹಾಡುಗಳಿಗೆ ಹೇರಳವಾಗಿ ರೀಲ್ಸ್ ಮಾಡುತ್ತಿದ್ದಾರೆ. ಹೋದ ಕಡೆ ಎಲ್ಲಾ ನನ್ನನ್ನು 'ಉಡಾಳ'ನೆಂದೇ ಗುರುತ್ತಿಸುತ್ತಿದ್ದಾರೆ. ಇದನ್ನು ಸಾಧ್ಯವಾಗಿಸಿ ಕೊಟ್ಟ ನನ್ನ ತಂಡಕ್ಕೆ ಹಾಗೂ ಆಗಮಿಸಿರುವ ಗಣ್ಯರಿಗೆ ಅನಂತ ಧನ್ಯವಾದ' ಎನ್ನುವರು ನಾಯಕ ಪೃಥ್ವಿ ಶಾಮನೂರು. ಅಂದಂಗೆ ಚಿತ್ರಕ್ಕೆ ಚೇತನ್-ಡೇವಿ ಸಂಗೀತ, ಶಿವಶಂಕರ ನೂರಂಬದ ಛಾಯಾಗ್ರಹಣ, ಮಧು ತುಂಬಕೆರೆ ಸಂಕಲನವಿದೆ. ತಾರಾಗಣದಲ್ಲಿ ಬಲ ರಾಜವಾಡಿ, ಮಾಳು ನಿಪ್ನಾಳ, ಹರೀಶ್ ಹಿರಿಯೂರು, ಸುಮಿತ್ ಸಂಕೋಜಿ, ವಾದಿರಾಜ್ ಬಬ್ಲಾಡಿ, ಪ್ರವೀಣ್ ಗಸ್ತಿ, ಗೋವಿಂದೇಗೌಡ, ದಯಾನಂದ ಬೀಳಗಿ, ರೇಣುಕಾ, ಶ್ರೀಧರ್, ದಾನಪ್ಪ, ಸೋನಿಯಾ, ಬಿರಾದಾರ್ ಮುಂತಾದವರಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 