ಆರಾಧ್ಯ ದೈವ ಮುಂಜಿ ಬಸವೇಶ್ವರ ಗಂಗೆಸ್ಥಳ ಮೆರವಣಿಗೆ
Procession of the worshipped deity Munji Basaveshwara Gangesthala
ಆರಾಧ್ಯ ದೈವ ಮುಂಜಿ ಬಸವೇಶ್ವರ ಗಂಗೆಸ್ಥಳ ಮೆರವಣಿಗೆ
ಕಂಪ್ಲಿ11 ತಾಲೂಕಿನ ನಂ.10 ಮುದ್ದಾಪುರ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಬೆಳಗೋಡಹಾಳ್ ಗ್ರಾಮದಲ್ಲಿ ಆರಾಧ್ಯ ದೈವ ಮುಂಜಿ ಬಸವೇಶ್ವರ ಗಂಗೆಸ್ಥಳ ಮೆರವಣಿಗೆ ಅತ್ಯಂತ ಸಂಭ್ರಮ ಸಡಗರದಿಂದ ಸೋಮವಾರ ಜರುಗಿತು.ತುಂಗಭದ್ರ ನದಿ ತಟದಲ್ಲಿ ಗಂಗೆಪೂಜೆ ನೆರವೇರಿಸಿದ ನಂತರ ಗ್ರಾಮದಲ್ಲಿ ಮೆರವಣಿಗೆ ಪ್ರಾರಂಭಿಸಿ, ತದನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಮುಂಜಿ ಬಸವೇಶ್ವರ ದೇವಸ್ಥಾನ ಬಳಿಯಲ್ಲಿ ಸಮಾವೇಶಗೊಂಡಿತು. ವೀರಗಾಸೆ, ಕುಂಭ, ಕಳಸ, ನಂದಿಕೋಲು, ತಾಷಾರಾಂಡೋಲ್ ಸೇರಿದಂತೆ ವಿವಿಧ ಕಲಾ ಪ್ರಕಾರಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು. ದೇವಸ್ಥಾನದಲ್ಲಿ ಅಭಿಷೇಕ, ಪುಷ್ಪಾಲಂಕಾರ, ಮಹಾಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಜನರು ಕಾಯಿ, ಕರ್ೂರ ನೀಡಿ ದೇವರ ಕೃಪೆಗೆ ಪಾತ್ರರಾದರು. ಈ ಸಂದರ್ಭದಲ್ಲಿ ಬೆಳಗೋಡು ಗ್ರಾಪಂ ಸದಸ್ಯ ಎಸ್.ಚಂದ್ರಶೇಖರಗೌಡ, ಮುಖಂಡರಾದ ಕೆ.ದೊಡ್ಡಪ್ಪ, ಎಸ್.ವಿರುಪಾಕ್ಷಿ, ಓಂಕಾರಿಗೌಡ, ಜೀರ್ ಅಯ್ಯಪ್ಪ, ಎಂ.ಮೂರ್ತಿಸ್ವಾಮಿ, ಕೆ.ರಾಜಶೇಖರ, ವೈ.ಮಲ್ಲಿಕಾರ್ಜುನಗೌಡ, ಜಿ.ರಾಜಶೇಖರ, ಕಲ್ಯಾಣಿ ಗಂಗಾಧರ, ಜಿ.ತಿಪ್ಪೇರುದ್ರ, ಮಡಿವಾಳ ಅಂಬರೇಶ, ಕಲ್ಯಾಣಿ ಚನ್ನಬಸುವ ಹಾಗೂ ಗ್ರಾಮದ ಸದ್ಭಕ್ತರು ಪಾಲ್ಗೊಂಡಿದ್ದರು.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 