ಎಪಿಎಂಸಿ ಮಾರುಕಟ್ಟೆಯಲ್ಲಿ ಖರೀದಿ ಕೇಂದ್ರ ಪ್ರಾರಂಭ
Procurement centre opens in APMC market
ಸವದತ್ತಿ, 19 : ಪಟ್ಟಣದ ಎಪಿಎಂಸಿ ಮಾರುಕಟ್ಟೆಯಲ್ಲಿ ಖರೀದಿ ಕೇಂದ್ರ ಪ್ರಾರಂಭಿಸಲಾಗಿದೆ. ಖರೀದಿ ಪ್ರಕ್ರಿಯೆ ಫೆಬ್ರವರಿ 7ರ ವರೆಗೆ ಇರುತ್ತದೆ ಎಂದು ಎಂಪಿಎಂಸಿ ಕಾರ್ಯದರ್ಶಿ ಕೆ.ಜೆ.ನಾಯಕ ಹೇಳಿದರು. ಪಟ್ಟಣದ ಎಪಿಎಂಸಿ ಕಚೇರಿಯಲ್ಲಿ ಶುಕ್ರವಾರ ನಡೆದ ರೈತರ ಹೆಸರು ನೋಂದಣಿ ಸಂದರ್ಭದಲ್ಲಿ ಮಾತನಾಡಿದ ಅವರು, ರೈತರು ಆಧಾರ್ ಕಾರ್ಡ, ಬ್ಯಾಂಕ್ ಪಾಸ್ ಬುಕ್, ಪಹಣಿ, ಕೃಷಿ ಇಲಾಖೆ ನೀಡಿರುವ ಎಫ್‌ಐಡಿ ಸಂಖ್ಯೆಯೊಂದಿಗೆ ಕಚೇರಿಗೆ ಆಗಮಿಸಿ ಹೆಸರು ನೋಂದಾಯಿಸಿಕೊಳ್ಳುವ ಮೂಲಕ ಸರ್ಕಾರದ ಸೌಲಭ್ಯ ಪಡೆಯಬಹುದಾಗಿದೆ. ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿ ಮೆಕ್ಕೆಜೋಳವನ್ನು ಸರಾಸರಿ ವಹಿವಾಟಿನ ಧಾರಣೆ ಆಧಾರದ ಮೇಲೆ ರೈತರಿಗೆ ಆಗುವ ಬೆಲೆ ವ್ಯತ್ಯಾಸದ ಮೊತ್ತ ಪಾವತಿಸಲು ಸರ್ಕಾರದ ಸೂಚನೆಯಂತೆ ರೈತರು ಎಪಿಎಂಸಿಯಲ್ಲಿ ನೋಂದಾಯಿತ ವರ್ತಕರಿಗೆ ಮೆಕ್ಕೆಜೋಳ ಮಾರಾಟ ಮಾಡಬೇಕು.
ನಂತರ ವಹಿವಾಟಿನ ಆಧಾರದ ಮೇಲೆ ರೈತರಿಗೆ ದರ ವ್ಯತ್ಯಾಸದ ಮೊತ್ತವನ್ನು ಸರ್ಕಾರದಿಂದ ಪಾವತಿಸಲಾಗುವುದು. ಮಾರುಕಟ್ಟೆ ಮಧ್ಯ ಪ್ರವೇಶದ ದರ ಪ್ರತಿ ಕ್ವಿಂಟಾಲ್‌ಗೆ ಗರಿಷ್ಠ 2150 ರೂ. ನಿಗದಿಪಡಿಸಿದೆ. ಪ್ರತಿ ಎಕರೆಗೆ 12 ಕ್ವಿಂಟಾಲ್ ನಂತೆ ಫ್ರೂಟ್ಸ್ ತಂತ್ರಾಂಶದಲ್ಲಿ ಲಭ್ಯವಾಗುವ ರೈತರು ಹೊಂದಿರುವ ಜಮೀನಿನ ವಿಸ್ತೀರ್ಣಕ್ಕನುಗುಣವಾಗಿ ಗರಿಷ್ಠ 50 ಕ್ವಿಂಟಾಲ್‌ಗೆ ಮಿತಿಗೊಳಿಸಲಾಗಿದೆ. ಮಾರುಕಟ್ಟೆ ಧಾರಣಿ ಪ್ರತಿ ಕ್ವಿಂಟಲ್ ಗೆ ರೂ.1900 ಅಥವಾ ಅದಕ್ಕಿಂತ ಕಡಿಮೆ ದರದಲ್ಲಿ ಮಾರಾಟವಾದರೆ. ಪ್ರತಿ ಕ್ವಿಂಟಲ್‌ಗೆ ಗರಿಷ್ಠ ರೂ 250ರಂತೆ ರೈತರಿಗೆ ಬೆಲೆ ವ್ಯತ್ಯಾಸದ ಮೊತ್ತವನ್ನು ಪಾವತಿಸಲಾಗುತ್ತದೆ ಎಂದರು. ನೊಂದಣಿಅಧಿಕಾರಿಗಳು ರೈತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 