ಕೆ.ಎಲ್.ಇ ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಪ್ರೊ. ಶಿವಾನಂದ ಬೆಳಕೂಡ
Prof. Shivananda Belakuda spoke as the chief guest at the annual friendship conference of KLE Colle
ಮಾಂಜರಿ 02 : ಕೆ.ಎಲ್.ಇ. ಅಂಕಲಿಯಲ್ಲಿ ವಾತಾವರಣ ಹಚ್ಚು ಹಸಿರಿನಿಂದ ಕೂಡಿದೆ. ನಿಸರ್ಗದ ಮಡಿಲಿನಲ್ಲಿ ಬೆಳೆಯುವ ಮಕ್ಕಳು ಅತ್ಯಂತ ಪ್ರತಿಭಾವಂತರಾಗಿ ಪ್ರೀತಿಯಿಂದ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಂಡು ಬೆಳೆಯುತ್ತಾರೆ.' ಪ್ರತಿ ವ್ಯವಸ್ಥೆಯ ಯಶಸ್ಸಿಗೆ ಪ್ರೀತಿಯೇ ಮೂಲ ಆಧಾರ" ಎಂದು ಕಾಗವಾಡದ ಶಿವಾನಂದ ಪದವಿ ಮಹಾವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕರು ಹಾಗೂ ನಾಡುಕಂಡ ಶ್ರೇಷ್ಠ ಸಾಹಿತಿಗಳಲ್ಲೊಬ್ಬರಾದ ಡಾ. ಎಂ. ಬಿ. ಹೂಗಾರವರು ಹೇಳಿದರು.
ಅವರು ಸೋಮವಾರರಂದು ಚಿಕ್ಕೋಡಿ ತಾಲೂಕಿನ ಅಂಕಲಿಯ ಕೆ.ಎಲ್.ಇ. ಸಂಸ್ಥೆಯ ಶಾರದಾದೇವಿ ಕೋರೆ ಸಂ. ಪ. ಪೂ. ಕಾಲೇಜಿನಲ್ಲಿ ಹಮ್ಮಿಕೊಂಡ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಸಿಬ್ಬಂದಿವರ್ಗ ಹಾಗೂ ಎಲ್ಲ ವಿದ್ಯಾರ್ಥಿಗಳಿಗೆ ಕಲಿಕೆಗಾಗಿ ಆಧುನಿಕ ತಂತ್ರಜ್ಞಾನದ ಎಲ್ಲ ಸೌಲಭ್ಯಗಳನ್ನು ಡಾ. ಪ್ರಭಾಕರಣ್ಣಾ ಕೋರೆಯವರು ಇಲ್ಲಿ ಒದಗಿಸಿ ಕೊಟ್ಟಿದ್ದಾರೆ. ಅದರ ಸದುಪಯೋಗವನ್ನು ಮಾಡಿಕೊಂಡು ವಿದ್ಯಾರ್ಥಿಗಳು ಇತ್ತೀಚಿಗೆ ಭಾರತ ಸರಕಾರದಿಂದ 4ನೇ ಸರ್ವಶ್ರೇಷ್ಠ ಪ್ರಶಸ್ತಿಯಾದ ಪದ್ಮಶ್ರೀಗೆ ಭಾಜನರಾಗಿರುವ ಸನ್ಮಾನ್ಯ ಡಾ. ಪ್ರಭಾಕರಣ್ಣಾ ಕೋರೆಯವರನ್ನು ಆದರ್ಶವಾಗಿಟ್ಟುಕೊಂಡು ತಾವು ಸಹ ಅಂತಹ ಪ್ರಶಸ್ತಿಗಳನ್ನು ಪಡೆದುಕೊಳ್ಳುವ ವ್ಯಕ್ತಿತ್ವವನ್ನು ಗಳಿಸಿಕೊಳ್ಳಿರೆಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸ್ಥಾನಿಕ ಆಡಳಿತ ಮಂಡಳಿಯ ಸದಸ್ಯರಾದ ಸುರೇಶ ಎಸ್. ಪಾಟೀಲರು ಹಿತೋಪದೇಶ ನೀಡಿದರು.
ವರ್ಷದುದ್ದಕ್ಕೂ ನಡೆದ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಪ್ರಸಕ್ತ ಶೈಕ್ಷಣಿಕ ಸಾಲಿಗೆ ಪಿ.ಯು.ಸಿ. ದ್ವಿತೀಯ ವರ್ಷ ವಿಜ್ಞಾನ ವಿಭಾಗದ ಕುಮಾರ : ಆದಿತ್ಯ ಕೇದಾರಿ ಉಮರಾಣೆ ಆದರ್ಶ ವಿದ್ಯಾರ್ಥಿಯಾಗಿ ಆಯ್ಕೆಯಾದರೆ ಪಿ.ಯು.ಸಿ. ದ್ವಿತೀಯ ವರ್ಷ ವಾಣಿಜ್ಯ ವಿಭಾಗದ ಕುಮಾರಿ: ಶೃಷ್ಟಿ ಅಪ್ಪಾಸಾಹೇಬ ಪಾಟೀಲ ಆದರ್ಶ ವಿದ್ಯಾರ್ಥಿನಿಯಾಗಿ ಆಯ್ಕೆಯಾಗಿದ್ದಾಳೆ. ಪ್ರಾಚಾರ್ಯ ಪಿ. ಎನ್. ತಳವಾರರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ ಮುಂಬರುವ ವಾರ್ಷಿಕ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಿ ಸಂಸ್ಥೆಗೆ ಹಾಗೂ ಮನೆಗೆ ಹೆಸರು ತರಬೇಕೆಂದು ಶುಭ ಕೋರಿದರು. ಸಂಸ್ಥೆಯ ಅಜೀವ ಸದಸ್ಯರಾದ ಬಿ. ಎಸ್. ಅಂಬಿ ಹಾಗೂ ಆವರಣದ ಎಲ್ಲ ಅಂಗ ಸಂಸ್ಥೆಗಳ ಮುಖ್ಯಸ್ಥರು, ಸಿಬ್ಬಂದಿವರ್ಗ ಹಾಗೂ ಎಲ್ಲ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕೆ. ಎಸ್. ಗುಡೋಡಗಿ ವಾರ್ಷಿಕ ವರದಿ ವಾಚಿಸಿದರು. ಸಂತೋಷ ಖೋತ ನಿರೂಪಿಸಿದರು. ಕೊನೆಯಲ್ಲಿ ರೂಪಾ ಮಾನೆ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 