“ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ-2026” ಅಂಗವಾಗಿ ಕಾರ್ಯಕ್ರಮ
Program as part of “Touch Leprosy Awareness Campaign-2026”
ಗದಗ 30: ಗದಗ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಷ್ಠರೋಗ ನಿರ್ಮೂಲನ ಕಾರ್ಯಕ್ರಮಾಧಿಕಾರಿಗಳು, ಇವರುಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಭಾಭವನದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ “ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ-2026” ಅಂಗವಾಗಿ ಕಾರ್ಯಕ್ರಮ ಜರುಗಿತು,
ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಸ್.ನೀಲಗುಂದ ಮತ್ತು ಜಿಲ್ಲಾ ಕುಷ್ಠರೋಗ ನಿರ್ಮೂಲನ ಅಧಿಕಾರಿ ಡಾ. ಅರುಂದತಿ ಕುಲಕರ್ಣಿ ಮತ್ತು ಜಿಲ್ಲಾ ಯೋಜನಾ ಆಬಿವೃದ್ದಿ ಅಧಿಕಾರಿ ಡಾ. ಹೆಚ್.ಎಲ್.ಗಿರಡ್ಡಿ ರವರು “ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ-2026” ಉದ್ಘಾಟಿಸಿದರು.
ಜಿಲ್ಲಾ ಕುಷ್ಠರೋಗ ನಿರ್ಮೂಲನ ಅಧಿಕಾರಿ ಡಾ. ಅರುಂದತಿ ಕುಲಕರ್ಣಿ ಕುಷ್ಠರೋಗ ಬಗ್ಗೆ ಹರಡುವ ವಿಧಾನ, ರೋಗದ ಲಕ್ಷಣಗಳು ಹಾಗೂ ಚಿಕಿತ್ಸೆಯ ಬಗ್ಗೆ ಹಾಗೂ “ತಾರತಮ್ಯವನ್ನು ಕೊನೆಗೊಳಿಸುವುದು, ಘನತೆಯನ್ನು ಕಾಪಾಡುವುದು” ಎಂಬ ಈ ವರ್ಷದ ಘೋಷವಾಖ್ಯದ ಬಗ್ಗೆ ಪ್ರಾಸ್ಥಾವಿಕವಾಗಿ ಮಾತನಾಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ನೀಲಗುಂದ ಅವರು ಮಾತನಾಡಿ ರಾಷ್ಟ್ರಪಿತ ಮಹಾತ್ಮ ಗಾಂಧಿಜಿಯವರ ಹುತಾತ್ಮರಾದ ದಿನದ ಅಂಗವಾಗಿ 30-01-2026 ರಿಂದ 13-02-2026 ರ ವರೆಗೆ ಈ ಕಾರ್ಯಕ್ರಮವನ್ನು ಎಲ್ಲಾ ಶಾಲಾ ಕಾಲೇಜುಗಳು ಹಾಗೂ ಗ್ರಾಮ ಪಂಚಯಾತಿಗಳಲ್ಲಿ ಆಯಾ ಮುಖ್ಯಸ್ಥರೊಂದಿಗೆ ಪ್ರತಿಜ್ಞಾ ವಿಧಿಯನ್ನು ಭೊದಿಸುವುದರ ಮುಖಾಂತರ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಡಾ.ಹೆಚ್.ಎಲ್.ಗಿರಡ್ಡಿ ಅವರು “ಸ್ಪರ್ಶ ಕುಷ್ಠರೋಗ ಅರಿವು ಅಭಿಯಾನ-2026” ರ ಪ್ರತಿಜ್ಞಾ ವಿಧಿ ಬೋಧಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೂಪಸೇನ್ ಚವ್ಹಾಣ ಕಾರ್ಯಕ್ರಮ ನಿರೂಪಿಸಿದರು. ಆರೋಗ್ಯ ನೀರೀಕ್ಷಣಾಧಿಕಾರಿ ಎಸ್.ಎಸ್.ಕುಬಸದ ವಂದಿಸಿದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 