ಕೊಪ್ಪಳ ತಾಲೂಕಿನ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆ

ಕೊಪ್ಪಳ ತಾಲೂಕಿನ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆ Progress Review Meeting of Panch Guarantee Schemes of Koppal Taluk

         ಕೊಪ್ಪಳ 12 : ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳು ಸಮರ​‍್ಕವಾಗಿ ಅನುಷ್ಠಾನಿಸಲು ಕೊಪ್ಪಳ ತಾಲೂಕ ಮಟ್ಟದ ಅನುಷ್ಠಾನ ಸಮಿತಿಯ ಪ್ರಗತಿ ಪರೀಶೀಲನಾ ಸಭೆಯು ಬಾಲಚಂದ್ರನ್ ಎಸ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಕೊಪ್ಪಳ ತಾಲೂಕ ಪಂಚಾಯತಿಯ ಸಭಾಂಗಣದಲ್ಲಿ ಜರುಗಿತು. 

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಅಕ್ಟೋಬರ್‌-2025ರವರೆಗೆ ಅನುದಾನ ಜಮೆಯಾಗಿರುವ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾಧಿಕಾರಿಗಳು ಸಭೆಯಲ್ಲಿ ಗಮನಕ್ಕೆ ತಂದರು. ಡ್ಯಾಷ್ ಬೊರ್ಡ ನಲ್ಲಿ ಮಾಹಿತಿ ಅಪಡೇಟ್ ಆಗಿರುವದಿಲ್ಲ ಕುರಿತು ಮಾಹಿತಿ ನೀಡಿದರು. 

ಗೃಹಜ್ಯೋತಿ ಯೋಜನೆಯಡಿ ಮುನಿರಾಬಾದ ಗ್ರಾಮದಲ್ಲಿ ವಿದ್ಯುತ್ ಕಂಬ ಸ್ಥಳಾಂತರ ಮಾಡಲು ತಿಳಿಸಿದ್ದು ಅದರಂತೆ ಸ್ವತಃ ಫಲಾನುಭವಿ ಸ್ಥಳಾಂತರ ಮಾಡಿಕೊಳ್ಳುವಂತೆ ತಿಳಿಸಲಾಗಿದೆ ಎಂಬ ಮಾಹಿತಿಯನ್ನು ಜೆಸ್ಕಾಂ ಇಲಾಖಾಧಿಕಾರಿಗಳು ತಿಳಿಸಿದರು. 

ಸಭೆಯಲ್ಲಿ ಭಾಗವಹಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ಮಾತನಾಡಿ, ಇದೇ 17ರಂದು ಜರುಗುವ ಗ್ಯಾರಂಟಿ ಉತ್ಸವ ಹಾಗೂ ಕಾರ್ಯಗಾರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳನ್ನು ಕರೆತರುವ ಕುರಿತು ವ್ಯವಸ್ಥೆ ಮಾಡಿಕೊಳ್ಳಬೇಕು. ಅಂದು 5 ಅನುಷ್ಠಾನ ಇಲಾಖಾಧಿಕಾರಿಗಳು ಪಂಚ ಗ್ಯಾರಂಟಿ ಯೋಜನೆಗಳ ಮಾಹಿತಿಯುಳ್ಳ ಮಳಿಗೆಗಳನ್ನು ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಿಕೊಳ್ಳಬೇಕು ಮತ್ತು ಸಾರ್ವಜನಿಕರಿಗೆ ಮಾಹಿತಿ ನೀಡಲು ಇಲಾಖಾಧಿಕಾರಿಗಳು ಸಿಬ್ಬಂದಿಗಳನ್ನು ನಿಯೋಜಿಸುವಂತೆ ಸೂಚಿಸಿದರು.  

ಕೊಪ್ಪಳ ನಗರಸಭೆ ಹಾಗೂ ಭಾಗ್ಯನಗರ ಪಟ್ಟಣ ಪಂಚಾಯತಿ ಸ್ಥಳೀಯರು ಇರುವದರಿಂದ ಈ ಕಾರ್ಯಕ್ರಮಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಫಲಾನುಭವಿಗಳನ್ನು ಕರೆತರುವ ವ್ಯವಸ್ಥೆಯಾಗಬೇಕೆಂದರು. 

ಸಭೆಯಲ್ಲಿ ಕೊಪ್ಪಳ ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ, ಅನುಷ್ಠಾನ ಸಮಿತಿ ಸದಸ್ಯರಾದ ಜ್ಯೋತಿ ಗೊಂಡಬಾಳ, ರಮೇಶ ಹ್ಯಾಟಿ, ಪರಶುರಾಮ ಕೊರವರ, ರಾಮಣ್ಣ ಚೌಡ್ಕಿ, ಸವಿತಾ ಗೊರಂಟ್ಲಿ, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಇಲಾಖಾಧಿಕಾರಿಗಳು, ತಾಲೂಕ ಪಂಚಾಯತಿ ಸಿಬ್ಬಂದಿಗಳು ಉಪಸ್ಥಿತರಿದ್ದರು. 


Public Information Centers Government Scheme Awareness