ಜಿಲ್ಲಾ ಪೊಲೀಸ್ ಹಿರಿಯ ಅಧಿಕಾರಿಗಳೊಂದಿಗೆ ಡಿಜಿ ಮತ್ತು ಐಜಿಪಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಪ್ರಗತಿ ಪರೀಶೀಲನಾ ಸಭೆ
Progress review meeting held with senior district police officers under the chairmanship of DG and
ಜಿಲ್ಲಾ ಪೊಲೀಸ್ ಹಿರಿಯ ಅಧಿಕಾರಿಗಳೊಂದಿಗೆ ಡಿಜಿ ಮತ್ತು ಐಜಿಪಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಪ್ರಗತಿ ಪರೀಶೀಲನಾ ಸಭೆ
ಧಾರವಾಡ ಅ.27: ಡಿಜಿ ಮತ್ತು ಐಜಿಪಿ ಎಮ್.ಎ.ಸಲೀಂ ಅವರು ನಿನ್ನೆ (ಅ.26) ಸಂಜೆ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ, ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ವಿಮರ್ಶನಾ ಸಭೆ ನಡೆಸಿ, ಮಾತನಾಡಿದರು.
ಪೊಲೀಸ್ ಸೇವೆಯು ಜನ ಸ್ನೇಹಿಯಾಗಿದ್ದು ನಮ್ಮ ಪ್ರಥಮ ಆದ್ಯತೆ ಸಾರ್ವಜನಿಕರ ರಕ್ಷಣೆಗಿರಲಿ ಮತ್ತು ಪೊಲೀಸ್ ಇಲಾಖೆಯು ಜಾರಿ ತಂದಿರುವ ಮನೆ ಮನೆಗೆ ಪೊಲೀಸ್ ಉಪಕ್ರಮವು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದ್ದು ಅಭಾಧಿತ ಮತ್ತು ನೊಂದ ವ್ಯಕ್ತಿಗಳ ಪರವಾಗಿ ಪೊಲೀಸರು ಇನ್ನೂ ಉತ್ತಮ ಕರ್ತವ್ಯ ನಿರ್ವಹಿಸುವ ಕುರಿತು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.
ಇಲಾಖೆಯ ಅಧೀನ ಪೊಲೀಸ್ ಸಿಬ್ಬಂದಿಗಳ ಆರೋಗ್ಯ ಮತ್ತು ಕ್ಷೇಮದ ಬಗ್ಗೆ ವಿಶೇಷ ಗಮನ ಹರಿಸಬೇಕೆಂದು ಸಲಹೆಗಳನ್ನು ನೀಡಿದರು. ಇದೇ ಸಂದರ್ಭದಲ್ಲಿ ಸಿ.ಐ.ಡಿ ಘಟಕ ಧಾರವಾಡ ಹಾಗೂ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರೀಶೀಲನೆ ನಡೆಸಿ, ಅಧಿಕಾರಿ ಮತ್ತು ಸಿಬ್ಬಂದಿಗಳೊಂದಿಗೆ ಸಂವಹನ ನಡೆಸಿ ಸೂಕ್ತ ಮಾರ್ಗದರ್ಶನ ನೀಡಿದರು.
ಈ ಸಂಧರ್ಭದಲ್ಲಿ ಬೆಳಗಾವಿ ಉತ್ತರ ವಲಯದ ಐಜಿಪಿ ಚೇತನಸಿಂಗ್ ರಾಥೋಡ್ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕ ಗುಂಜನ್ ಆರ್ಯ ಮತ್ತು ಸಿ.ಐ.ಡಿ ಎಸ್.ಪಿ ರಶ್ಮಿ ಪರಡಿ ಅವರು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 