ಲೋಕದರ್ಶನ ವರದಿ
ವಿಜಯಪುರ 01:ಜಿಲ್ಲಾಡಳಿತ ವಿಜಯಪುರ ಮತ್ತು ಬಾಗಲಕೋಟ, ಜಿಲ್ಲಾ ಕೌಶಲ್ಯಾಭಿವೃದ್ದಿ ಇಲಾಖೆ, ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವಿಜಯಪುರ ಮತ್ತು ಬಾಗಲಕೋಟೆ ಇವರ ಆಶ್ರಯದಲ್ಲಿ ಇದೇ ಫೆಬ್ರುವರಿ 23 ಮತ್ತು 24 ರಂದು ನಡೆಯಲಿರುವ ಮಿನಿ ಉದ್ಯೋಗ ಮೇಳದ ಕುರಿತು ಪ್ರತಿಯೊಬ್ಬ ಉದ್ಯೋಗಾಕಾಂಕ್ಷಿಗಳಿಗೆ ತಲುಪುವಂತೆ ಪ್ರಚಾರ ಕಾರ್ಯವನ್ನು ಸರಿಯಾಗಿ ಮಾಡುವಂತೆ ಜಿಲ್ಲಾಧಿಕಾರಿ ಎಸ್.ಬಿ.ಶೆಟ್ಟೆಣ್ಣವರ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಫ್ಲೆಕ್ಸ್, ಬ್ಯಾನರ್, ರೇಡಿಯೋ, ಜಿಂಗಲ್, ಡಾಕುಮೆಂಟರಿ ಜಾಹೀರಾತುಗಳನ್ನು ಪ್ರತಿದಿನ ಪ್ರಕಟ ಹಾಗೂ ಪ್ರಸಾರವಾಗುವಂತೆ ಕ್ರಮ ಕೈಗೊಳ್ಳಬೇಕು. ಆನ್ಲೈನ್ ನೋದಣಿ ಆಗುತ್ತಿರುವುದನ್ನು ಗಮನಿಸುತ್ತಿರಬೇಕು. ಉದ್ಯೋಗ ಮೇಳದಲ್ಲಿ ಸ್ಟಾಲ್ಗಳನ್ನು ಸ್ಥಾಪಿಸಲಾಗುತ್ತಿದ್ದು, ಅಗತ್ಯಬಿದ್ದರೆ ಇನ್ನೂ ಹೆಚ್ಚಿನ ಕೌಂಟರ್ಗಳನ್ನು ತೆರೆಯಲಾಗುತ್ತದೆ ಎಂದು ಹೇಳಿದರು.
ಉದ್ಯೋಗ ಮೇಳಕ್ಕೆ ಬರುವಂತಹ ಅಭ್ಯಥರ್ಿಗಳಿಗೆ ಸರಿಯಾದ ಸಮಯಕ್ಕೆ ತಲುಪುವಂತೆ ಸಾರಿಗೆ ವ್ಯವಸ್ಥೆಗಳನ್ನು ಸರಿಯಾಗಿ ನಿರ್ವಹಿಸಬೇಕು. ಅಲ್ಲದೇ ಸಂದರ್ಶನದಲ್ಲಿ ಭಾಗವಹಿಸುವವರಿಗೆ ಸರಿಯಾದ ಮಾರ್ಗದರ್ಶನ ನೀಡಬೇಕು. ಸಂದರ್ಶನಕ್ಕೆ ಹಾಜರಾಗುವ ಅಭ್ಯಥರ್ಿಗಳಿಗೆ ಉಂಟಾಗುವ ಗೊಂದಲಗಳನ್ನು ಪರಿಹರಿಸುವಂತೆ ನೋಡಿಕೊಳ್ಳಬೇಕು ಎಂದರು. ಜಿಲ್ಲೆಯಲ್ಲಿ ಉದ್ಯೋಗ ಮೇಳ ನಡೆಯುತ್ತಿರುವುದರಿಂದ ದರಬಾರ ಶಾಲೆ-ಕಾಲೇಜ್ಗಳಿಗೆ ಫೆ.23 ಮತ್ತು 24 ರಂದು ಶಾಲಾ ಕಾಲೇಜ್ಗಳಿಗೆ ರಜೆ ಘೋಷಿಸಲಾಗಿದೆ. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಕಾಸ ಕಿಶೋರ ಸುರಳಕರ, ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ ರಮೇಶ ದೇಸಾಯಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.