ಸೂಕ್ತ ತನಿಖೆ, ಮೃತರ ಕುಟುಂಬಕ್ಕೆ 5 ಲಕ್ಷ: ಸಿಎಂ
Proper investigation, Rs 5 lakh to the family of the deceased: CM
ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ನಡೆದ ರಸ್ತೆ ಅಪಘಾತದ ಬಗ್ಗೆ ತನಿಖೆ ನಡೆಸಲಾಗುವುದು, ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.50,000 ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಬರೆದುಕೊಂಡಿದ್ದಾರೆ.
‘ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ’ ಎಂದು ಅವರು ದುಃಖಿತರಾಗಿದ್ದಾರೆ.
’ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾರಣವನ್ನು ಪತ್ತೆಹಚ್ಚಲಾಗುವುದು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಲ್ಲಿ ಮಡಿದ ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿ’ ಎಂದು ಹೇಳಿದ್ದಾರೆ. ಘಟನೆಯಿಂದ ತೀವ್ರ ಆಘಾತವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
‘ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್ ಮತ್ತು ಟ್ರಕ್ ನಡುವೆ ಹಿರಿಯೂರು ಬಳಿ ಅಪಘಾತ ಸಂಭವಿಸಿ ಹಲವರು ಸಜೀವ ದಹನಗೊಂಡಿರುವ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಮೃತಪಟ್ಟವರಿಗೆ ನನ್ನ ಸಂತಾಪಗಳನ್ನು ತಿಳಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಇಂತಹ ದುರಂತಗಳು ಮರುಕಳಿಸದಿರಲಿ’ ಎಂದು ಎಕ್ಸ್ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 