ಬಾಂಗ್ಲಾದಲ್ಲಿ ಇರುವ ಹಿಂದೂಗಳನ್ನು ರಕ್ಷಿಸಿ : ಶ್ರೀರಾಮ ಸೇನೆ ಮುಖ್ಯಸ್ಥ ಮುತಾಲಿಕ್ ಆಗ್ರಹ
Protect Hindus in Bangladesh: Shri Ram Sene chief Muthalik demands
ಹುಕ್ಕೇರಿ 24: ಹುಕ್ಕೇರಿಯಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರಿಂದ ಮಾನ್ಯ ತಹಸಿಲ್ದಾರಾದ ಬಲರಾಮ್ ಕಟ್ಟಿಮನಿ ಇವರ ಮುಖಾಂತರ ಸನ್ಮಾನ್ಯ ಪ್ರಧಾನ ಮಂತ್ರಿ ಭಾರತ ಸರ್ಕಾರ ನವ ದೆಹಲಿಗೆ ಇವರಿಗೆ ರಾಮ್ ಸೇನೆ ಕಾರ್ಯಕರ್ತರಿಂದ ಮನವಿ ಪತ್ರ ನೀಡಿ ಎಂದು ಆಗ್ರಹಿಸಲಾಯಿತು. ಬಾಂಗ್ಲಾದೇಶದಲ್ಲಿರುವ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಾಗೂ ದೀಪು ಎಂಬ ಹಿಂದೂ ಯುವಕನ ಹತ್ಯೆ ಖಂಡಿಸಿ-ರಕ್ಷಣೆ ನೀಡುವಂತೆ ಮನವಿ. ಇತ್ತೀಚಿನ ದಿನಗಳಲ್ಲಿ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರಾದ ಹಿಂದೂ ಸಮುದಾಯದ ಮೇಲೆ ನಿರಂತರವಾಗಿ ದೌರ್ಜನ್ಯ, ಹಲ್ಲೆ, ಬೆದರಿಕೆ, ದೇವಸ್ಥಾನಗಳ ಧ್ವಂಸ ಹಾಗೂ ಆಸ್ತಿಪಾಸ್ತಿಗಳ ನಾಶ ನಡೆಯುತ್ತಿರುವುದು ಅತ್ಯಂತ ಆತಂಕಕಾರಿ ವಿಷಯವಾಗಿದೆ.ಇದರಿಂದ ಅಲ್ಲಿನ ಹಿಂದೂ ಜನರು ಭಯಭೀತ ಜೀವನ ನಡೆಸುವ ಸ್ಥಿತಿಗೆ ತಲುಪಿದ್ದಾರೆ. ಇತ್ತೀಚೆಗೆ ದೀಪು ಎಂಬ ನಿರಪರಾಧಿ ಹಿಂದೂ ಯುವಕನನ್ನು ಅಮಾನುಷವಾಗಿ ಹತ್ಯೆ ಮಾಡಿರುವ ಘಟನೆ ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಘಟನೆ ಕೇವಲ ಒಬ್ಬ ವ್ಯಕ್ತಿಯ ಹತ್ಯೆಯಲ್ಲ; ಇದು ಸಂಪೂರ್ಣ ಹಿಂದೂ ಸಮುದಾಯದ ಮೇಲಿನ ಕೌರ್ಯ ಮತ್ತು ಅಸಹಿಷ್ಣುತೆಯ ಪ್ರತೀಕವಾಗಿದೆ. ಬಾಂಗ್ಲಾದೇಶದಲ್ಲಿ ಹಿಂದೂ ಮಹಿಳೆಯರ ಮೇಲೆ ದೌರ್ಜನ್ಯ, ಮಕ್ಕಳ ಮೇಲಿನ ಹಲ್ಲೆ, ಬಲವಂತದ ಧರ್ಮಾಂತರ, ದೇವಸ್ಥಾನಗಳ ಮೇಲೆ ದಾಳಿ ಹಾಗೂ ವ್ಯಾಪಾರಸ್ಥರ ಮೇಲೆ ಹಿಂಸೆ ದಿನೇದಿನೇ ಹೆಚ್ಚಾಗುತ್ತಿದ್ದು, ಅಲ್ಲಿನ ಸರ್ಕಾರ ಈ ಬಗ್ಗೆ, ಪರಿಣಾಮಕಾರಿ ಕ್ರಮ ಕೈಗೊಳ್ಳದಿರುವುದು ವಿಷಾದಕರ ಸಂಗತಿಯಾಗಿದೆ. ಆದ್ದರಿಂದ, ಭಾರತ ಸರ್ಕಾರವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ: ಬಾಂಗ್ಲಾದೇಶ ಸರ್ಕಾರದ ಮೇಲೆ ರಾಜತಾಂತ್ರಿಕ ಒತ್ತಡ ಹೇರಿಸಿ ಅಲ್ಲಿನ ಹಿಂದೂಗಳಿಗೆ ಸಂಪೂರ್ಣ ರಕ್ಷಣೆ ಒದಗಿಸುವಂತೆ ಕ್ರಮ ಕೈಗೊಳ್ಳಬೇಕು.ದೀಪು ಹತ್ಯೆ ಸೇರಿದಂತೆ ಹಿಂದೂಗಳ ಮೇಲೆ ನಡೆದ ಎಲ್ಲಾ ದೌರ್ಜನ್ಯ ಪ್ರಕರಣಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸ್ತಾಪಿಸಬೇಕು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 