ಮಾನವ ಹಕ್ಕುಗಳ ರಕ್ಷಣೆ ಹಾಗೂ ಪಾಲನೆ ನಾಗರಿಕರ ಹೊಣೆ: ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಹರೀಶ್ ಎ
Protection and upholding of human rights is the responsibility of citizens: Principal District and
ವಿಜಯಪುರ 10: ಸರ್ವರ ಮಾನವ ಹಕ್ಕುಗಳ ರಕ್ಷಣೆ ಹಾಗೂ ಪಾಲನೆ ಮಾಡುವುದು ನಮ್ಮೆಲ್ಲರ ಹೊಣೆಯಾಗಿದ್ದು, ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ಪರಿಪಾಲಿಸುವುದು ಕರ್ತವ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಹರೀಶ್ ಎ ಅವರು ಹೇಳಿದರು.
ಅವರು ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಇವರ ಸಹಯೋಗದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ, ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು.ಮಾನವ ಹಕ್ಕುಗಳ ಅರಿವು ಅವುಗಳ ರಕ್ಷಣೆ ಮಾಡುವ ನಿಟ್ಟಿನಲ್ಲಿ ಉಲ್ಲಂಘನೆಯಾಗದ ರೀತಿಯಲ್ಲಿ ನೋಡಿಕೊಳ್ಳಬೇಕು. ಮಾನವ ಹಕ್ಕುಗಳನ್ನು ರಕ್ಷಿಸುವಲ್ಲಿ ನಮ್ಮ ಕರ್ತವ್ಯಗಳನ್ನು ನಿರ್ವಹಿಸೋಣ.
ಹಕ್ಕು ಮತ್ತು ಕರ್ತವ್ಯಗಳನ್ನು ಸರಿಯಾಗಿ ಪಾಲನೆ ಮಾಡಬೇಕು. ಮಾನವ ಹಕ್ಕುಗಳ ಸಂರಕ್ಷಣೆಯ ಅರಿವು ಮತ್ತು ಜಾಗೃತಿ ಹೊಂದಬೇಕು. ಮಾನವ ಹಕ್ಕುಗಳ ಪರಿಧಿ ವ್ಯಾಪಕ ಸ್ವರೂಪವಾದದ್ದು, ಅದು ನಾಗರಿಕ, ಸಾಮಾಜಿಕ, ರಾಜಕೀಯ, ಸಾಂಸ್ಕೃತಿಕ, ಆರ್ಥಿಕ ಹಕ್ಕು ಒಳಗೊಂಡಿದ್ದು, ಸಮಾನತೆ, ಸಮಾನ ಕಾನೂನು ರಕ್ಷಣೆ, ಶೋಷಣೆ ರಹಿತ ಆರೋಗ್ಯ ಪೂರ್ಣ ಪರಿಸರದಲ್ಲಿ ಗೌರವಯುತ ಜೀವನ ನಡೆಸುವುದು, ಕಲಿಕೆ, ಆಯ್ಕೆಯ ವೃತ್ತಿ, ಆತ್ಮಸಾಕ್ಷಿ ಸೇರಿದಂತೆ ಇವುಗಳ ತಾರತಮ್ಯವಾಗದಂತೆ ನಮ್ಮ ಕರ್ತವ್ಯಗಳನ್ನು ನಿಷ್ಠೆಯಿಂದ ಪಾಲಿಸೋಣ ಎಂದು ಅವರು ಹೇಳಿದರು.
ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿ ಘನತೆ ಗೌರವ ಹೊಂದಿದ್ದು, ಆ ಘನತೆ ಗೌರವಕ್ಕೆ ಕುಂದು ಬಾರದ ರೀತಿಯಲ್ಲಿ ನಡೆದುಕೊಳ್ಳಬೇಕು. ಮಾನವ ಹಕ್ಕುಗಳ ರಕ್ಷಣೆಗೆ ಮತ್ತು ಅವುಗಳ ಪರಿಣಾಮಕಾರಿ ಜಾರಿಗಾಗಿ, ಮಾನವ ಹಕ್ಕುಗಳ ರಕ್ಷಣೆ 1993ರನ್ವಯ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಹಾಗೂ ರಾಜ್ಯ ಮಾನವ ಹಕ್ಕುಗಳ ಆಯೋಗ ರಚನೆ ಮಾಡಲಾಗಿದೆ. ನಮ್ಮ ಸಂವಿಧಾನವು ಸಹ ಮಾನವ ಹಕ್ಕುಗಳ ಗೌರವಿಸುವ ಮತ್ತು ರಕ್ಷಣೆ ಒದಗಿಸುತ್ತದೆ. ಸ್ವಾಭಾವಿಕವಗಾಗಿ ಪ್ರತಿಯೊಬ್ಬರು ವಿಶೇಷತೆಯನ್ನು ಹೊಂದಿದ್ದು, ತಮ್ಮದೇಯಾದ ಸಾಮರ್ಥ್ಯ ಹೊಂದಿರುತ್ತಾರೆ.
ಮಾನವ ಹಕ್ಕುಗಳನ್ನು ಗೌರವಿಸುವ ರಕ್ಷಿಸುವುದು ಆಶಯ ನಮ್ಮ ಸಂವಿಧಾನದಲ್ಲಿ ಅಡಕವಾಗಿದೆ. ವಿದ್ಯಾರ್ಥಿಗಳು ಮಾನವ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಮುಂದಾಗಬೇಕು. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ರಚನೆಯ ಸಂವಿಧಾನ ಮೂಲಭೂತ ಹಕ್ಕುಗಳು, ಕರ್ತವ್ಯಗಳು ಹಾಗೂ ರಾಜ್ಯ ನೀತಿ ನಿರ್ದೇಶಕ ತತ್ವಗಳು ಉಲ್ಲೇಖವಾಗಿವೆ. ಮಾನವ ಹಕ್ಕುಗಳ ಬಗ್ಗೆ ನಾವು ಅರಿತುಕೊಂಡು ಪ್ರತಿಯೊಬ್ಬರನ್ನು ಪ್ರೀತಿಯಿಂದ, ಗೌರವದಿಂದ, ಭ್ರಾತೃತ್ವ ಮನೋಭಾವನೆಯನ್ನು ಹೊಂದುವ ಮೂಲಕ ಮಾನವ ಹಕ್ಕುಗಳ ಘನತೆಯನ್ನು ಎತ್ತಿಹಿಡಿದು ನಮ್ಮ ಜವಾಬ್ದಾರಿ ಮೆರೆಯೋಣ ಎಂದು ಅವರು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ, ಅಪರ ಜಿಲ್ಲಾಧಿಕಾರಿಗಳಾದ ಸೋಮಲಿಂಗ ಗೆಣ್ಣೂರು, ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿಗಳಾದ ಪ್ರಕಾಶ ವಡ್ಡರ, ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಹೇಶ್ ಪೊತದಾರ, ತಹಶೀಲ್ದಾರರಾದ ಪಿ.ಎಸ್.ಚನಗೊಂಡ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಧಾನ ಕಾನೂನು ಅಭಿರಕ್ಷಕರಾದ ಆರ್.ಎಸ್.ಬಿದರಿ, ವಕೀಲರ ಸಂಘದ ಅಧ್ಯಕ್ಷ ಡಿ.ಜಿ.ಬಿರಾದಾರ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ವಿವಿಧ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 