ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ, ಪ್ರತಿಭಟನೆ

Protest against Union Home Minister Amit Shah's statement

 

ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ, ಪ್ರತಿಭಟನೆ 

 ಕಂಪ್ಲಿ24 ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ, ಕಂಪ್ಲಿ ಪಟ್ಟಣದ ಉದ್ಭವ ಗಣೇಶ ದೇವಸ್ಥಾನದ ಗಂಗಾ ಕಾಲೋನಿಯಿಂದ  ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಬಳ್ಳಾರಿ ಜಿಲ್ಲಾ ಮತ್ತು ಕಂಪ್ಲಿ ತಾಲೂಕು ಘಟಕ, ಆದಿ ಜಗದ್ಗುರು ರೇಣುಕಾಚಾರ್ಯ ಸೇವಾ ಟ್ರಸ್ಟ್‌, ವರ್ಷದ ವಿಮೋಚನಾ ಸಮಿತಿ, ಆರ್ಮಿ ವಿದ್ಯಾರ್ಥಿ ಘಟಕ. ಸಹಯೋಗದೊಂದಿಗೆ ಪ್ರತಿಭಟನಾ ಮೆರವಣಿಗೆ ಮಂಗಳವಾರ ನಡೆಸಿ, ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ತಹಸೀಲ್ದಾರ್ ಶಿವರಾಜ ಶಿವಪುರ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಯಿತು.ಬಳ್ಳಾರಿ ಜಿಲ್ಲಾಧ್ಯಕ್ಷ ಹಾಗೂ ಕಲ್ಯಾಣ ಕರ್ನಾಟಕ ಸಂಘಟನಾ ಕಾರ್ಯದರ್ಶಿ ಡಾ.ರಾಜಕುಮಾರ ಮಾತನಾಡಿ, ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವುದು ತೀವ್ರವಾಗಿ ಖಂಡಿಸಿ, ಅಮಿತ್ ಶಾ ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ ರಾಷ್ಟ್ರಪತಿಯವರು ಈ ಕೂಡಲೇ ಕೇಂದ್ರ ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.ಮುಖಂಡ ವಸಂತರಾಜ್ ಕಹಳೆ ಮಾತನಾಡಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಸಂವಿಧಾನ ವಿರುದ್ಧವಾಗಿದೆ. ದೇಶದಲ್ಲಿ ಮನುಸ್ಮೃತಿ ತರುವ ತವಕದಲ್ಲಿದ್ದಾರೆ. ಅದಕ್ಕಾಗಿ ಯಾವಾಗಲೂ ಡಾ.ಅಂಬೇಡ್ಕರ್ ಮತ್ತು ಸಂವಿಧಾನ ವಿರೋಧಿ ಹೇಳಿಕೆಗಳನ್ನು ನೀಡುತ್ತಾ ಬಂದಿದ್ದಾರೆ ಎಂದರು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್, ಬಸವಣ್ಣ, ಬುದ್ಧ ಭಾವಚಿತ್ರ ಪ್ರದರ್ಶಿಸುವ ಮೂಲಕ ಪ್ರತಿಭಟನೆಯೊಂದಿಗೆ ಅಮಿತ್ ಶಾ ಹೇಳಿಕೆಯನ್ನು ತೀವ್ರವಾಗಿ ಮಂಡಿಸಲಾಯಿತು. ಈ ಸಂದರ್ಭದಲ್ಲಿ ಮುಖಂಡರಾದ, ಕೆ ಲಕ್ಷ್ಮಣ, ವಸಂತ ಕಹಳೆ, ರವಿ  ಕುಮಾರ, ಬಸವರಾಜ, ಯಲ್ಲಪ್ಪ, ವೀರೇಶ, ಬುಜ್ಜಿ ಕುಮಾರ್, ಬಸವರಾಜ, ಮರಿಸ್ವಾಮಿ, ಧನಂಜಯ, ಅರುಣ, ಹೆಚ್ ಗೋಪಾಲ್, ಶ್ರೀನಿವಾಸ, ಮೌಲಹುಸೇನ್, ಆರ್ ರಫೀಕ್, ಶಾಂತಪ್ಪ ಪೂಜಾರಿ, ಮಂಜು, ಸುಂಕಣ್ಣ, ರಾಣಾ, ರಾಮ, ಶೇಖಣ್ಣ, ಅಂಕಲಿ, ಮರಿಸ್ವಾಮಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು. 001ಕಂಪ್ಲಿಯಲ್ಲಿ ನಡೆದ ಪ್ರತಿಭಟನೆ ನಂತರ ತಹಶೀಲ್ದಾರ್ ಶಿವರಾಜ ಶಿವಪುರಗೆ ಮನವಿ ಪತ್ರ ಸಲ್ಲಿಸಿದರು.