ಧರ್ಮಸ್ಥಳದ ಹೆಸರಿಗೆ ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಿ: ಶಾಂತವೀರ ಸರ್ಕ್‌ಲ್ ವತಿಯಿಂದ ಪ್ರತಿಭಟನೆ

ಧರ್ಮಸ್ಥಳದ ಹೆಸರಿಗೆ ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಿ: ಶಾಂತವೀರ ಸರ್ಕ್‌ಲ್ ವತಿಯಿಂದ ಪ್ರತಿಭಟನೆ Protest by Shantaveera Circle, condemning the slanderous propaganda against Dharmasthala

ಧರ್ಮಸ್ಥಳದ ಹೆಸರಿಗೆ ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಿ: ಶಾಂತವೀರ ಸರ್ಕ್‌ಲ್ ವತಿಯಿಂದ ಪ್ರತಿಭಟನೆ  


ವಿಜಯಪುರ 29: ಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಿ, ಶಾಂತವೀರ ಸರ್ಕ್‌ಲ್ ವತಿಯಿಂದ ಪ್ರತಿಭಟನೆ ಹಮ್ಮಿಕೊಂಡು ತಹಶೀಲ್ದಾರ ಅವರ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.  


     ಇದೇ ಸಂದರ್ಭದಲ್ಲಿ  ದಾನಮ್ಮದೇವಿ ಟ್ರಸ್ಟ್‌ ಗುಡ್ಡಾಪೂರ ಅಧ್ಯಕ್ಷರಾದ ವಿಜುಗೌಡ ಎಸ್‌. ಪಾಟೀಲ ಮಾತನಾಡಿ, ಕ್ಷೇತ್ರ ಧರ್ಮಸ್ಥಳವು ಕೇವಲ ಕರ್ನಾಟಕವಲ್ಲದೇ ದೇಶಾದ್ಯಂತ ಕೋಟ್ಯಾಂತರ ಭಕ್ತಾಧಿಗಳನ್ನು ಹೊಂದಿರುತ್ತದೆ. ಈ ಕ್ಷೇತ್ರಕ್ಕೆ ದಿನನಿತ್ಯ ಲಕ್ಷಾಂತರ ಮಂದಿ ಭಕ್ತಾಧಿಗಳು ಆಗಮಿಸುತ್ತಾರೆ. ಹಿಂದೂಗಳಿಗೆ ಇದು ಪ್ರಮುಖ ಧಾರ್ಮಿಕ ಶ್ರದ್ಧೆಯ ಕೇಂದ್ರವಾಗಿರುತ್ತದೆ.  


  ಹಿಂದೂಗಳ ಧಾರ್ಮಿಕ ಭಾವನೆಯನ್ನು ಅಪಮಾನಿಸುವ ದುರುದ್ಧೇಶದಿಂದ ಕೆಲವು ಕಿಡಿಗೇಡಿಗಳು ಹಾಗೂ ಎಡಚರರು ಸುಳ್ಳು ಅಪಪ್ರಚಾರವನ್ನು ಮಾಡುತ್ತಿದ್ದಾರೆ. ಇದರ ಹಿಂದೆ ಹಿಂದೂಗಳ ಶ್ರದ್ಧಾ ಭಕ್ತಿಯನ್ನು ಅತ್ಯಂತ ನಿಕೃಷ್ಟವಾಗಿ ಬಿಂಬಿಸುವ ಹುನ್ನಾರವಿದೆ. ಇಂತಹ ಕಿಡಿಗೇಡಿಗಳಿಗೆ ಕುಮ್ಮಕ್ಕು ನೀಡುವ ಷಡ್ಯಂತ್ರ್ಯವು ನಡೆದಿದೆ. ಭಾರತದ ನ್ಯಾಯ ಸಂಹಿತೆ ಅಡಿಯಲ್ಲಿ ಅನಾಮಿಕ ವ್ಯಕ್ತಿಯೊಬ್ಬ ಯಾವುದೇ ಆಧಾರಗಳಿಲ್ಲದೇ ಮಾಡಿದ ಆರೋಪಕ್ಕೆ ರಾಜ್ಯ ಸರ್ಕಾರವು ಲಕ್ಷಾಂತರ ರೂಪಾಯಿಗಳನ್ನು ವ್ಯಯಿಸಿ ಆತ ಹೇಳಿದ ಕಡೆಗಳೆಲ್ಲೆಲ್ಲಾ ಗುಂಡಿಗಳನ್ನು ತೋಡಿದೆ. ಆದರೆ, ಈ ಅನಾಮಿಕನ ಹಿಂದಿರುವ ದುಷ್ಠ ವ್ಯಕ್ತಿಗಳು ಯಾರು ಮತ್ತು ಅವರು ಮಾಡುತ್ತಿರುವ ಸಂಚುಗಳೇನು ಎಂಬುದನ್ನು ಈವರೆಗೂ ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರ ತಿಳಿಸಿರುವುದಿಲ್ಲ. 


        ಆದುದರಿಂದ ಹಿಂದುಗಳ ಧಾರ್ಮಿಕ ಶ್ರದ್ಧಾ ಕೇಂದ್ರಗಳನ್ನು ಅವಮಾನಿಸುತ್ತಿರುವ ಸಮಾಜ ವಿರೋಧಿ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಅವರನ್ನು ಶಿಕ್ಷೆಗೆ ಒಳಪಡಿಸಬೇಕೆಂದು ಒತ್ತಾಯಿಸಿ ರಾಜ್ಯಾದ್ಯಂತ ಪ್ರತಿಭಟನೆಯನ್ನು ಕೈಗೊಳ್ಳಲಾಗಿದೆ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಹಿಂದೂಗಳ ಭಕ್ತಿ ಭಾವನೆಗಳಿಗೆ ಧಕ್ಕೆತರುವ ಹುನ್ನಾರವನ್ನು ನಿರಂತರವಾಗಿ ಮಾಡುತ್ತಾ ಬಂದಿದೆ. ಇಂತಹ ದುಷ್ಕೃತ್ಯವನ್ನು ತಡೆಯುವಲ್ಲಿ ವಿಫಲವಾಗಿರುವ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳು ರಾಜ್ಯದ ಜನತೆಯ ಕ್ಷಮೆಯಾಚನೆ ಮಾಡಬೇಕೆಂದು ಈ ಮೂಲಕ ಒತ್ತಾಯಿಸಿದರು.  


 ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷರಾದ ಸಂತೋಷ ಕುರದಡ್ಡಿ, ಪರಮಾನಂದ ಕಣಮುಚನಾಳ, ಸಾಬು ಮಾಶ್ಯಾಳ, ಈರಣ್ಣ ರಆವೂರ, ಉಮೇಶ ಕೋಳಕೂರ, ಮಹಾವೀರ ಮಾಯಪ್ಪಗೋಳ ಶಂಖರಗೌಡ ಬಿರಾದಾರ, ಪ್ರವೀಣ ತಮಗೊಂಡ, ವಿನಾಯಕ ಮಮಾದಾಪೂರ, ಶಂಕರ ಬಬಲೇಶ್ವರ, ವಿನಾಯಕ ಮಮದಾಪೂರ, ಪರಮಾನಂದ ಕಣಮುಚನಾಳ, ಶಂಕರ ಬಲೇಶ್ವರ, ಮಹೇಶ ಮುಕರ್ತಿಹಾಳ, ಪ್ರವೀಣ ತಮಗೊಂಡ, ಲಕ್ಷ್ಮಣ ಶಿ. ಈಟಿ, ಸಲಿಂಗ ಪತ್ತಾರ, ಬಸಲಿಂಗಪ್ಪ ಜಂಗಮಶೆಟ್ಟಿ, ಮಲ್ಲಪ್ಪ ಕೋಟ್ಯಾಳ, ಗುರುರಾಜ ಹೂಲಿ ಮುಂತಾದವರು ಇದ್ದರು.