ಕ್ಷತ್ರಿಯ ಸಮಾಜದಿಂದ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಪ್ರತಿಭಟನೆ

Protest demanding fulfillment of various demands from the Kshatriya community

ಕ್ಷತ್ರಿಯ ಸಮಾಜದಿಂದ  ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಪ್ರತಿಭಟನೆ

ಬೆಳಗಾವಿ 19: ಸೋಮವಂಶ ಸಹಸ್ರಾರ್ಜುನ ಕ್ಷತ್ರಿಯ(ಎಸ್ ಎಸ್ ಕೆ) ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪಿಸಿ 200 ಕೋಟಿ ರೂ. ಮೀಸಲಿಡಲು ಸೇರಿ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ಸೋಮವಂಶೀಯ ಸಹಸ್ರಾರ್ಜುನ ಕ್ಷತ್ರಿಯ ಸಮಾಜ ಆಶ್ರಯದಲ್ಲಿ ಕರ್ನಾಟಕ ಸೋಮವಂಶ ಸಹಸ್ರಾರ್ಜುನ ಕ್ಷತ್ರಿಯ ಸಮಾಜ ಅಭಿವೃದ್ಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಬೆಳಗಾವಿ ಸುವರ್ಣ ಸೌಧದ ಕೊಂಡಸಕೊಪ್ಪ ದಲ್ಲಿ ಗುರುವಾರ ಧರಣಿ ನಡೆಸಿದರು.  

ಕರ್ನಾಟಕದಲ್ಲಿ ಸಮುದಾಯದ ಜನಸಂಖ್ಯೆ 10 ರಿಂದ 12 ಲಕ್ಷವಿದೆ. ಕೆಲವರಷ್ಟೇ ಸ್ಥಿತವಂತರಿದ್ದಾರೆ. ಶೇ.80 ರಷ್ಟು ಜನರು ಕಡುಬಡವರಾಗಿದ್ದು, ಸಣ್ಣ-ಪುಟ್ಟ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಸಮುದಾಯ ಸಾಮಾಜಿಕ, ಆರ್ಥಿಕ, ರಾಜಕೀಯವಾಗಿ ಹಿಂದುಳಿದೆ. ಇದಕ್ಕೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅಭಿವೃದ್ಧಿ ಹೋರಾಟ ಸಮಿತಿ ರಾಜ್ಯ ಸಂಚಾಲಕ ಹನುಮಂತಸಾ ನಿರಂಜನ ಆಗ್ರಹಿಸಿದರು.ಸೈಕಲ್  ಅಂಗಡಿ, ಬೀದಿ ಬದಿ ವ್ಯಾಪಾರ, ಬಂಡಿ ಅಂಗಡಿ , ಡಿಟಿಪಿ , ವೈರಿಂಗ ಕೆಲಸ, ಹೋಟೆಲ್ ಮಾಡಿ ಜೀವನ ಸಾಗಿಸುತ್ತಿದ್ದಾರೆ.  

ಇದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಸಾಲ ಮಾಡುವ ಸ್ಥಿತಿ ಬಂದಿದೆ. ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಎಸ್ ಎಸ್ ಕೆ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರೆ​‍್ಡ ಮಾಡಬೇಕು. ಸೋಮವಂಶ ಸಹಸ್ರಾರ್ಜುನ ಜಯಂತಿಯನ್ನು ಸರ್ಕಾರದಿಂದ ಆಚರಣೆ ಮಾಡಬೇಕು. ಕಳೆದ ಮೂರು ವರ್ಷಗಳಿಂದ ಸಮುದಾಯ ಬೇಡಿಕೆ ಈಡೇರಿಕೆಗಾಗಿ ಹೋರಾಟ ಮಾಡಲಾಗುತ್ತಿದೆ. ಆದರೆ, ಸರ್ಕಾರ ಕಿವಿಕೊಡುತ್ತಿಲ್ಲ. ಬೇಡಿಕೆ ಈಡೇರಿಕೆಗಾಗಿ ಉಗ್ರವಾದ ಹೋರಾಟ ಮಾಡಲಾಗುವುದು. ರಸ್ತೆ ತಡೆ ಹಾಗೂ ಬೆಂಗಳೂರಿನ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು. 

ರಾಯಚೂರು, ಕೊಪ್ಪಳ, ಗದಗ, ಹಾವೇರಿ, ಧಾರವಾಡ, ದಾವಣಗೆರೆ ಜಿಲ್ಲೆಗಳಲ್ಲಿ ಸೇರಿ ರಾಜ್ಯದ ವಿವಿಧೆಡೆಯಿಂದ 1500 ಕ್ಕಿಂತ ಹೆಚ್ಚು ಸಮುದಾಯದ ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಶಾಸಕರಾದ ಬಸವನಗೌಡ ಪಾಟೀಲ್ ಯತ್ನಾಳ್, ಬಿ.ಪಿ.ಹರೀಶ್, ಅಭಯ ಪಾಟೀಲ್, ಮಹೇಶ ತೆಂಗಿನ ಕಾಯಿ ಅವರು ಮನವಿ ಸ್ವೀಕರಿಸಿ, ಕಾಂಗ್ರೆಸ್ ಸರ್ಕಾರಕ್ಕೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಲಾಗುವುದು. ಇಲ್ಲದಿದ್ದರೆ ಮುಂದಿನ ಪಕ್ಷ ಆಡಳಿತಕ್ಕೆ ಬಂದಾಗ ನಿಗಮ ಅನುಷ್ಠಾನ ಮಾಡಲಾಗುವುದು ಎಂದು ಭರವಸೆ ನೀಡಿದರು. ಕರ್ನಾಟಕ ರಾಜ್ಯ ಸೋಮವಂಶೀಯ ಸಹಸ್ರಾರ್ಜುನ ಕ್ಷಮೆಹರವಾಡೆ ರಾಜ ರಾಜ್ಯಾಧ್ಯಕ್ಷ ಶಶಿಕುಮಾರ ಮೆಹರವಾಡೆ, ಮಾಜಿ ಶಾಸಕ ಅಶೋಕ ಕಾಟವೆ, ಪ್ರಮುಖರಾದ ವಿಠ್ಠಲ ಲದವಾ, ನಾಗೇಶ ಕಲಬುರ್ಗಿ, ಕೊಟ್ರೇಶ್ ಮೆಹರವಾಡೆ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.