ಕಬ್ಬಿನ ದರ ನಿಗದಿಗೆ ಆಗ್ರಹಿಸಿ ಪ್ರತಿಭಟನೆ: ಬಾರ್ ಅಸೋಸಿಯೇಶನ್ ಬೆಂಬಲ
Protest demanding sugarcane price fixing: Bar Association supports
ಬೆಳಗಾವಿ 04: ಕಬ್ಬಿಗೆ ರೂ. 3500 ದರ ನಿಗದಿಪಡಿಸಲು ಆಗ್ರಹಿಸಿ ಕೈಗೊಂಡಿರುವ ರೈತರ ಹೋರಾಟಕ್ಕೆ ಬೆಳಗಾವಿ ಬಾರ್ ಅಸೋಸಿಯೇಶನ್ ಬೆಂಬಲವನ್ನು ಸೂಚಿಸುವುದರ ಮೂಲಕ ಮಂಗಳವಾರ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದರು. ರೈತರು ಬೆಳೆದ ಕಬ್ಬಿನ ದರವನ್ನು 3500 ರೂ. ನಿಗದಿಸಿ ಎಂದು ಬೆಳಗಾವಿ ಬಾರ್ ಅಸೋಸಿಯೇಶನ್ ವಕೀಲರು ರೈತರ ಹೋರಾಟಕ್ಕೆ ಬೆಂಬಲವನ್ನು ಸೂಚಿಸುವುದರ ಮೂಲಕ ಮಂಗಳವಾರ ಜಿಲ್ಲಾಧಿಕಾರಿಗೆ ಮನವಿ ನೀಡಿದರು.
ಪ್ರಸ್ತುತ ಕರ್ನಾಟಕ ರಾಜ್ಯದ ಸಕ್ಕರೆ ಕಾರ್ಖಾನೆಗಳು ನೀಡುವ ದರ ರೈತರ ಬೆಳೆಗೆ ತಕ್ಕ ಪ್ರತಿಫಲವಲ್ಲ ಇದರಿಂದ ರೈತರು ಸಾಕಷ್ಟು ಆರ್ಥಿಕ ನಷ್ಟವನ್ನು ಅನುಭವಿಸುತ್ತಿದ್ದಾರೆ. ಪ್ರತಿ ಟನ ಕಬ್ಬಿನ ದರವನ್ನು 3500 ರೂ. ಗೆ ನಿಗದಿ ಪಡಿಸಬೇಕು ಎಂದು ಬೆಳಗಾವಿ ಬಾರ್ ಅಸೋಸಿಯೇಶನ ವಕೀಲರು ರಾಣಿ ಚನ್ನಮ್ಮ ವೃತ್ತದಲ್ಲಿ ಮಾನವ ಸರಪಳಿಯನ್ನು ನಿರ್ಮಿಸಿ ಪ್ರತಿಭಟಿಸಿದರು. ಗುರ್ಲಾಪೂರದಲ್ಲಿ ರೈತಪರ ಸಂಘಟನೆಗಳು ಕಳೆದ 4-5 ದಿನಗಳಿಂದ ನಿರಂತರವಾಗಿ ಹೋರಾಟವನ್ನು ಕೈಗೊಂಡಿದ್ದಾರೆ. ಆದರೆ ಸರ್ಕಾರ ಇದ್ಯಾವುದಕ್ಕೂ ಸ್ಪಂದಿಸದೆ ನಿರ್ಲಕ್ಷಿಸುತ್ತಿದೆ. ಆದಕಾರಣ ಅತಿ ಶೀಘ್ರದಲ್ಲಿ ಕಬ್ಬಿನ ದರವನ್ನು ನಿಗದಿಸಬೇಕು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ಉಗ್ರಹೋರಾಟ ಕೈಗೊಳ್ಳಲಾಗುವುದು ಎಂದು ಬೆಳಗಾವಿ ಬಾರ್ ಅಸೋಸಿಯೇಶನ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಪ್ರತಿಭಟನೆಯಲ್ಲಿ ಬಾರ ಅಸೋಸಿಯೇಶನ ಅಧ್ಯಕ್ಷ ಬಿ.ಎಂ. ಮುಗಳಿ ಸೇರಿದಂತೆ ರೈತಪರ ಹೋರಾಟಗಾರರು, ವಕೀಲರು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 