ಹೆಚ್ ಎಲ್ ಸಿ ಕಾಲುವೆಗೆ ನೀರು ಹರಿಸಲು ಒತ್ತಾಯಿಸಿ ಪ್ರತಿಭಟನೆ
ಬಳ್ಳಾರಿ 06: ಎಐಕೆಕೆಎಂಎಸ್ ರೈತ ಸಂಘಟನೆ ಮತ್ತು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಂಟಿಯಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಚ್.ಎಲ್.ಸಿ ಕಾಲುವೆಗೆ ಕನಿಷ್ಠ 20 ದಿನ ನೀರು ಹರಿಸಲು ಆಗ್ರಹಿಸಿ ಪ್ರತಿಭಟನೆ ಮಾಡಿ ಮಾನ್ಯ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಯ ಜಿಲ್ಲಾ ಅಧ್ಯಕ್ಷ ಸಂಗನಕಲ್ಲು ಕೃಷ್ಣಪ್ಪ ಮತ್ತು ಎಐಕೆಕೆಎಂಎಸ್ ರೈತ ಸಂಘಟನೆ ಯ ಜಿಲ್ಲಾ ಅಧ್ಯಕ್ಷ ಗೋವಿಂದ್ ಅವರಿಬ್ಬರು ಮಾತನಾಡುತ್ತಾ ಈ ಬಾಗದ ರೈತರು ಜೋಳ, ಮೆಕ್ಕೆಜೋಳ, ಸಜ್ಜೆ, ಹಲಸಂದೆ, ಮೆಣಸಿನಕಾಯಿ ಸೇರಿದಂತೆ ಇತರ ಬೆಳೆ ಬೆಳೆಯುತ್ತಿದ್ದಾರೆ. ಇವರಿಗೆ ಈ ಬೆಳೆ ಕೈ ಸೇರಲು ಇನ್ನು ಸುಮಾರು 20 ದಿನ ನೀರು ಬೇಕಾಗಿದೆ, ಹಾಗಾಗಿ ಜನ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ರೈತರ ಹಿತದೃಷ್ಟಿಯಿಂದ ಈ ತಿಂಗಳ ಪೂರ್ಣ ಎಚ್ ಎಲ್ ಸಿ ಕಾಲುವೆಗೆ ನೀರು ಹರಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಎಐಕೆಕೆಎಂಎಸ್ ಜಿಲ್ಲಾ ಕಾರ್ಯದರ್ಶಿ ಗುರಳ್ಳಿ ರಾಜ, ರೈತರಾದ ಈಶ್ವರ್ ಗೌಡ ಬಸವರಾಜ್, ಗಾದಿಲಿಂಗ, ಓಂಕಾರ, ಸ್ವಾಮಿ, ಬಸವರಾಜ್, ತುಳಸಪ್ಪ ಇನ್ನಿತರು ಇನ್ನಿತರರು ಭಾಗವಹಿಸಿದ್ದರು.