ಪಿಂಚಣಿಗೋಸ್ಕರ ಪ್ರತಿಭಟನೆ
Protest for pension
ಲೋಕದರ್ಶನ ವರದಿ
ಧಾರವಾಡ 2: ಜಾರಿ ಕುರಿತು ಧಾರವಾಡದ ಯುನಿವರ್ಸಿಟಿ ಪಬ್ಲಿಕ್ ಸ್ಕೂಲ್ನಲ್ಲಿ 01-07-2026ರಂದು ನಡೆದ ಪೂರ್ವಭಾವಿ ಸಭೆಯಲ್ಲಿ, ಪಿಂಚಣಿ ಸೌಲಭ್ಯ ಪಡೆಯಲು ಬೃಹತ್ ಪ್ರತಿಭಟನೆ ನಡೆಸುವ ಕುರಿತು ತೀರ್ಮಾನ ಕೈಗೊಳ್ಳಲಾಯಿತು.
ಕನ್ನಡ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ, ಜಿಲ್ಲಾ ಘಟಕ ಧಾರವಾಡ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನಡೆದ ಈ ಸಭೆಯಲ್ಲಿ ಪ್ರತಿಭಟನೆ ನಡೆಸುವ ಬಗ್ಗೆ ಸ್ಪಷ್ಟ ಅಭಿಪ್ರಾಯ ವ್ಯಕ್ತಪಡಿಸಲಾಯಿತು. ಜುಲೈ 4ರಂದು ತಾಲೂಕು ಮಟ್ಟದಲ್ಲಿ, ಜುಲೈ 18ರಂದು ಜಿಲ್ಲಾ ಮಟ್ಟದಲ್ಲಿ ಹಾಗೂ ಆಗಸ್ಟ್ 1ರಂದು ರಾಜ್ಯ ಮಟ್ಟದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ರಾಜ್ಯ ಘಟಕದ ಪದಾಧಿಕಾರಿಗಳು, ಜಿಲ್ಲಾ ಘಟಕದ ನಾಯಕರು, ವಿವಿಧ ಸಂಘಟನೆಗಳ ಪ್ರತಿನಿಧಿಗಳು, ಪ್ರಾಂಶುಪಾಲರು ಮತ್ತು ಮುಖ್ಯೋಪಾಧ್ಯಾಯರು ಭಾಗವಹಿಸಿದ್ದರು. ಸಭೆಯಲ್ಲಿ ಸಂಘದ ಪ್ರಮುಖ ಪದಾಧಿಕಾರಿಗಳು ಮಾತನಾಡಿ, ಓ.ಕ.ಖ ಜಾರಿಗೆ ಸಂಬಂಧಿಸಿದ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 