ಚಾಲಕರ ಸಂಘದ ವತಿಯಿಂದ ತಾಲೂಕಿನ ಚಳಗೇರಿ ಟೋಲ್‌ನಾಕಾ ಎದುರು ಪ್ರತಿಭಟನೆ
ರಾಣೇಬೆನ್ನೂರ 07: ರಾಷ್ಟ್ರೀಯ ಹೆದ್ದಾರಿಯ ಟೋಲ್‌ನಾಕಾಗಳಲ್ಲಿ ನಿಯಮಾನುಸಾರ ರೈತರ ಹಾಗೂ ಸ್ಥಳಿಯರ ವಾಹನಗಳನ್ನು ಉಚಿತವಾಗಿ ಬಿಡಬೇಕು. ಶೌಚಗೃಹ ನಿರ್ಮಾಣ ಸೇರಿ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂ ಹಾಗೂ ಕಾರು ಚಾಲಕರು ಮಾಲೀಕರು ಮತ್ತು ಚಾಲಕರ ಸಂಘದ ವತಿಯಿಂದ ತಾಲೂಕಿನ ಚಳಗೇರಿ ಟೋಲ್‌ನಾಕಾ ಎದುರು ಪ್ರತಿಭಟನೆ ನಡೆಸಲಾಯಿತು.
ನೇತೃತ್ವ ವಹಿಸಿದ್ದ ರೈತ ಸಂದ ತಾಲೂಕು ಅಧ್ಯಕ್ಷ ಹನುಮಂತಪ್ಪ ಕಬ್ಬಾರ ಮಾತನಾಡಿ, ಟೋಲ್‌ನಾಕಾಗಳಲ್ಲಿ ರೈತರಿಂದ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ. ಸರ್ಕಾರದ ಮಾರ್ಗಸೂಚಿ ಪ್ರಕಾರ ನಡೆದುಕೊಳ್ಳುತ್ತಿಲ್ಲ. ಅಲ್ಲದೆ ರೈತರಿಗೆ ಮನಬಂದಂತೆ ಮಾತನಾಡುತ್ತಿದ್ದಾರೆ. ವಾಹನಗಳಿಂದ ಶುಲ್ಕ ಸಂಗ್ರಹಿಸುವ ಇವರು ಶೌಚಗೃಹ, ಕುಡಿಯುವ ನೀರು ಸೇರಿ ಯಾವುದೇ ಮೂಲ ಸೌಕರ್ಯ ಕಲ್ಪಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹೆದ್ದಾರಿ ಪ್ರಾಧಿಕಾರದವರು ರಾಣೆಬೆನ್ನೂರ ತಾಲೂಕಿನ ಸುತ್ತಮುತ್ತಲಿನ ಹಳ್ಳಿಗಳು ಮತ್ತು ನಗರದಲ್ಲಿರುವಂತಹ ಟ್ಯಾಕ್ಸಿಗಳು ಮತ್ತು ಕಾರುಗಳು, ರೈತರಿಗೆ ಸಂಬಂಧಪಟ್ಟ ವಾಹನಗಳನ್ನು ಉಚಿತವಾಗಿ ಬಿಡಬೇಕು. ಸ್ಥಳಿಕರಿಗೆ ಐ.ಡಿ. ಪೂಫ್ ತೋರಿಸಿದಲ್ಲಿ ಉಚಿತವಾಗಿ ಬಿಡಬೇಕು. ರಸ್ತೆ ಸರಿಪಡಿಸುವವರೆಗೂ ಟೋಲ್ ವಸೂಲಿ ಮಾಡುವುದನ್ನು ಬಂದ್ ಮಾಡಬೇಕು. ಸಾರ್ವಜನಿಕರಿಗೆ ಶೌಚಗೃಹದ ವ್ಯವಸ್ಥೆ ಸರಿಪಡಿಸಬೇಕು. ಸರಿಯಾದ ರೀತಿಯಲ್ಲಿ ಸಂಪರ್ಕ ರಸ್ತೆಗಳನ್ನು ಸರಿಪಡಿಸಬೇಕು. ಉದ್ಯೋಗದಲ್ಲಿ ಸ್ಥಳಿಕರಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಜ. 20ರೊಳಗೆ ನಮ್ಮ ಬೇಡಿಕೆ ಈಡೇರಿಸಬೇಕು. ಇಲ್ಲವಾದರೆ ಮುಂದಿನ ದಿನದಲ್ಲಿ ತೀವ್ರತರನಾದ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿ ಸ್ಥಳಕ್ಕೆ ಬಂದ ಗ್ರೇಡ್ 2 ತಹಸೀಲ್ದಾರ್ ಅರುಣ ಕಾರಗಿ ಅವರ ಮೂಲಕ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ದೇಶಕರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯ ಮುಂಚೂಣಿಯಲ್ಲಿ ಸಂಘಟನೆಗಳ ಮುಖಂಡರಾದ ಕಿರಣ ಗುಳೇದ, ಈಶ್ವರ ಅರಳೇಶ್ವರ, ಚೇತನ ಹಂಚಿನಾಳ, ಕರಬಸಪ್ಪ ಅಗಸಿಬಾಗಿಲ, ರುದ್ರ್ಪ ಪೂಜಾರ, ಸೀನು ಗೌಳಿ, ಮಂಜುನಾಥ ನಾರ್ಪನಾಯ್ಕರ, ರವಿ ಜಿಗಳಿ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.