ಸಂರಕ್ಷಿಸಿದ ಬೀದಿನಾಯಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ -ಜಿಲ್ಲಾಧಿಕಾರಿ ದಾನಮ್ಮನವರ
Provide basic facilities to rescued stray dogs - District Magistrate Danammavara
ಹಾವೇರಿ 19 : ಮನುಷ್ಯನಿಗೆ ಉತ್ತಮ ಆಹಾರ ಎಷ್ಟು ಮುಖ್ಯವಾಗಿದೆಯೋ ಹಾಗೆಯೇ ಈ ಸ್ವಾನಗಳಿಗೂ ಸಹ ಮೂಲಭೂತ ಸೌಕರ್ಯ ಮತ್ತು ಗುಣಮಟ್ಟದ ಚಿಕಿತ್ಸೆ ಅವಶ್ಯವಾಗಿದೆ. ಶ್ವಾನಗಳಲಿಗೆ ಮೂಲಭೂತ ಸೌಕರ್ಯ ಅವಶ್ಯಕವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಹೇಳಿದರು.
ಹಾವೇರಿ ನಗರದ ಎ.ಪಿ.ಎಂ.ಸಿ ಆವರಣದಲ್ಲಿ ಶುಕ್ರವಾರ ಬೀದಿನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸಾ ಕೇಂದ್ರ ಆಶ್ರಯದ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ ಆದೇಶದ ಮೇರೆಗೆ ಜಿಲ್ಲೆಯಲ್ಲಿ ವಿಶೇಷವಾಗಿ 10 ಸ್ಥಳೀಯ ಸಂಸ್ಥೆಗಳ ವಿಭಾಗದಲ್ಲಿ ಬೀದಿ ನಾಯಿಗಳ ಸಂತಾನ ಹರಣದ ಚಿಕಿತ್ಸೆಗೆ ಸಂಬಂಧಿಸಿದಂತೆ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು.
ಈಗಾಗಲೇ ಬ್ಯಾಡಗಿ, ಹಾನಗಲ್, ಹಾವೇರಿ ಹಾಗೂ ರಾಣೇಬೆನ್ನೂರ ಸೇರಿ ನಾಲ್ಕು ಸ್ಥಳಗಳಲ್ಲಿ ಪ್ರಾರಂಭವಾಗಿದ್ದು, 400ಕ್ಕೂ ಹೆಚ್ಚು ಬೀದಿನಾಯಿಗಳ ಸಂರಕ್ಷಣೆಯನ್ನು ಮಾಡಲಾಗಿದೆ. ಶೀಘ್ರದಲ್ಲೇ ಶಿಗ್ಗಾಂವ ಮತ್ತು ಉಳಿದ ತಾಲೂಕುಗಳಲ್ಲಿ ಆರಂಭಿಸಲಾಗುವುದು.
ವಿವಿಧ ಸಂಸ್ಥೆಗಳಲ್ಲಿ, ಕ್ರೀಡಾಂಗಣ, ಶಿಕ್ಷಣ ಸಂಸ್ಥೆಗಳ ಆವರಣ, ಆಸ್ಪತ್ರೆ ಆವರಣ ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ಬೀದಿನಾಯಿಗಳ ಹಾವಳಿ ಜಾಸ್ತಿಯಾಗಿದ್ದು, ಅವುಗಳನ್ನು ಹಿಡಿದು ಸಂರಕ್ಷಿಸಿ ಉತ್ತಮವಾದ ಶಸ್ತ್ರಚಿಕಿತ್ಸೆ ನೀಡುವುದು ಅವಶ್ಯವಾಗಿದೆ.
ಇಂದಿನ ದಿನಗಳಲ್ಲಿ ಬೀದಿ ನಾಯಿಗಳು ಮಕ್ಕಳು ಮತ್ತು ಮಹಿಳೆಯರ ಮೇಲೆ ದಾಳಿ ಮಾಡಿದ್ದು ವರದಿಯಾಗಿದೆ. ಇದಕ್ಕೆ ಕಡಿವಾಣ ಹಾಕಲು ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಂಡಿದೆ ಎಂದು ಹೇಳಿದರು. ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ.ಶಿವಯೋಗಿ ಯಲಿ, ನಗರಸಭೆ ಆಯುಕ್ತ ಕಾಂತರಾಜ ಇತರರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 