ಸರ್ಕಾರಿ ಶಾಲೆಗಳಿಗೆ ಅವಶ್ಯಕ ಮೂಲಭೂತ ಸೌಲಭ್ಯ ಪೂರೈಸಿ- ಎಐಡಿಎಸ್‌ಓ
Provide essential basic facilities to government schools- AIDSO
ಸರ್ಕಾರಿ ಶಾಲೆಗಳಿಗೆ ಅವಶ್ಯಕ ಮೂಲಭೂತ ಸೌಲಭ್ಯ ಪೂರೈಸಿ- ಎಐಡಿಎಸ್‌ಓ
ಬಳ್ಳಾರಿ 28: ಸಂಯೋಜನೆ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ 4,200 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದನ್ನು ಖಂಡಿಸಿ ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆಯಿಂದ ಸಂಗಮ್ ಸರ್ಕಲ್‌ನಲ್ಲಿ ಪ್ರತಿಭಟನೆಯನ್ನು ಮಾಡಲಾಯಿತು.
ಪ್ರತಿಭಟನೆ ಉದ್ದೇಶಿಸಿ ಎಐಡಿಎಸ್‌ಓ ಜಿಲ್ಲಾ ಅಧ್ಯಕ್ಷರು ಕೆ.ಈರಣ್ಣ ಅವರು ಮಾತನಾಡಿ. ಇತ್ತೀಚೆಗಷ್ಟೆ ರಾಜ್ಯ ಸರ್ಕಾರವು ‘ಹಬ್ ಅಂಡ್ ಸ್ಪೋಕ್' ಅಡಿಯಲ್ಲಿ ಕಡಿಮೆ ಹಾಜರಾತಿ ಇರುವ ಸರ್ಕಾರಿ ಶಾಲೆಗಳನ್ನು ಇತರ ಶಾಲೆಗಳೊಂದಿಗೆ ಸಂಯೋಜಿಸುವ ನಿರ್ಧಾರವನ್ನು ಪ್ರಕಟಿಸಿದೆ. ಈ ನಿಟ್ಟಿನಲ್ಲಿ ಶಿಕ್ಷಣ ಸುಧಾರಣಾ ಸಮಿತಿಯನ್ನು ಸಹ ರಚಿಸಲಾಗಿದೆ. ಪತ್ರಿಕೆಗಳಲ್ಲಿ ವರದಿಯಾಗಿರುವಂತೆ ರಾಜ್ಯದಲ್ಲಿ 4 ಸಾವಿರಕ್ಕೂ ಅಧಿಕ ಶಾಲೆಗಳು 10 ಮಕ್ಕಳಿಗಿಂತ ಕಡಿಮೆ ದಾಖಲಾತಿಯನ್ನು ಹೊಂದಿವೆ. ಈ ಶಾಲೆಗಳ ಭವಿಷ್ಯದ ಕುರಿತು ಪಾಲಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಆತಂಕ ತಲೆದೊರಿದೆ. ಸರ್ಕಾರವು ರಾಜ್ಯದ ಬಡಜನರ ಮಕ್ಕಳ ಶಿಕ್ಷಣದ ಆಶಾಕಿರಣವಾಗಿರುವ ಸರ್ಕಾರಿ ಶಾಲೆಗಳನ್ನು ಮುಚ್ಚುವುದಕ್ಕಿಂತ ಬಲಪಡಿಸುವ ಜವಾಬ್ದಾರಿ ಸರ್ಕಾರ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು.
ಆದ್ಯತೆಯ ಮೇರೆಗೆ ಸರ್ಕಾರವು ಶಿಕ್ಷಣಕ್ಕೆ ಬಜೆಟ್ ನಲ್ಲಿ ಅನುದಾನ ನಿಗದಿಪಡಿಸಬೇಕು, ಸರ್ಕಾರಿ ಶಾಲೆಗಳನ್ನು ಸಂಯೋಜನೆಗೊಳಿಸುವ ಬದಲು ಹಾಜರಾತಿ ಕಡಿಮೆಯಿರುವ ಶಾಲೆಗಳನ್ನು ಅವಶ್ಯಕ ಸೌಲಭ್ಯ ನೀಡಿ ರಕ್ಷಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.
ಎಐಡಿಎಸ್‌ಓ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ಅವರು ಮಾತನಾಡುತ್ತಾ... ಕರ್ನಾಟಕ ರಾಜ್ಯದಲ್ಲಿ 6,000 ಕ್ಕಿಂತ ಹೆಚ್ಚು ಏಕೋಪಾಧ್ಯಾಯ ಶಾಲೆಗಳಿವೆ, 50,000 ಕ್ಕಿಂತ ಹೆಚ್ಚು ಶಿಕ್ಷಕರನ್ನು ನೇಮಕ ಮಾಡಿಕೊಂಡಿಲ್ಲ, ಶಾಲೆಗಳಲ್ಲಿ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕ್ರಮಗಳನ್ನು ಕೈಗೊಳ್ಳದೆ, ಹಾಜರಾತಿ ಕಡಿಮೆಯಿರುವ ಶಾಲೆಗಳನ್ನು ಮುಚ್ಚುವುದು, ‘ನೆಗಡಿ ಬಂದರೆ ಮೂಗು ಕತ್ತರಿಸಿದಂತೆ'! ಸರ್ಕಾರವು ತನ್ನ ಈ ಅವೈಜ್ಞಾನಿಕ ಮತ್ತು ಅಪ್ರಜಾತಾಂತ್ರಿಕ ಜನವಿರೋಧಿ ನಿರ್ಧಾರವನ್ನು ಕೈಬಿಡಬೇಕು.
ಮುಂದಿನ ದಿನಗಳಲ್ಲಿ ಶಾಲೆಗಳ ಮುಚ್ಚುವಿಕೆಯ ವಿರುದ್ಧ ಬಲಿಷ್ಠ ಹೋರಾಟಗಳನ್ನು ಸಂಘಟಿಸುತ್ತೇವೆ. ಶಾಲೆಗಳಲ್ಲಿ ಹೋರಾಟದ ಸಮಿತಿಗಳನ್ನು ರಚಿಸಿ, ಪೋಷಕರ ಸಭೆಗಳನ್ನು ಸಂಘಟಿಸುತ್ತಿದ್ದೇವೆ. ಈ ಹೋರಾಟದಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಬೇಡಿಕೆಗಳು: ಶಾಲೆಗಳ ಸಂಯೋಜನೆಯನ್ನು ಕೈಬಿಟ್ಟು ಸಮರ್ಕ ಮೂಲಭೂತ ಸೌಲಭ್ಯ ನೀಡಿ ಸರ್ಕಾರಿ ಶಾಲೆಗಳನ್ನು ಬಲಪಡಿಸಿ.
ಪ್ರತಿಭಟನೆಯ ಅಧ್ಯಕ್ಷತೆಯನ್ನು ಎಐಡಿಎಸ್‌ಓ ಉಪಾಧ್ಯಕ್ಷರು ಎಂ. ಶಾಂತಿ ಅವರು ವಹಿಸಿಕೊಂಡಿದ್ದರು. ಹಾಗೂ ಖಜಾಂಚಿ ಅನುಪಮ, ಕಛೇರಿ ಕಾರ್ಯದರ್ಶಿ ನಿಹಾರಿಕ, ಸದಸ್ಯರು ಶ್ರೀಧರ್, ಶಿವಾನಂದ ಮತ್ತು ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 