ಮಕ್ಕಳಿಗೆ ಬಿಸಿಯೂಟ ರುಚಿ-ಶುಚಿಯಾದ ಪೌಷ್ಠಿಕ ಆಹಾರ ಒದಗಿಸಿ: ಡಾ.ಈಶ್ವರ ಉಳ್ಳಾಗಡ್ಡಿ
Provide hot meals, tasty, clean and nutritious food to children: Dr. Ishwara Ullagadi
ಬೆಳಗಾವಿ 25: ಶಾಲಾ ಶಿಕ್ಷಣ ಇಲಾಖೆ, ಬೆಳಗಾವಿ ವಿಭಾಗದ ಅಪರ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ ಇವರು ದಿನಾಂಕ: 25-11-2025 ರಂದು ಸರ್ಕಾರಿ ಪ್ರೌಢ ಮತ್ತು ಪ್ರಾಥಮಿಕ ಶಾಲೆ, ಕೆಂಗಾನೂರ. ತಾ: ಬೈಲಹೊಂಗಲ ಜಿ: ಬೆಳಗಾವಿ ಇಲ್ಲಿಗೆ ಸಂದರ್ಶನ ನೀಡಿದರು. ವಿದ್ಯಾರ್ಥಿಗಳ ಕಲಿಕೆಯನ್ನು ವರ್ಗವಾರು ಮತ್ತು ವಿದ್ಯಾರ್ಥಿವಾರು ಪರೀಶೀಲನೆ ಮಾಡಿದರು.
ಎಸ್.ಎಸ್.ಎಲ್.ಸಿ ಪಲಿತಾಂಶ ಸುಧಾರಣೆಗಾಗಿ ಶಿಕ್ಷಕರಿಗೆ ಮಾರ್ಗದರ್ಶನ ನೀಡಿದರು.ಎಲ್ಲಾ ಮಕ್ಕಳು ಆರಂಭಿಕ ಸಾಕ್ಷರತೆ ಮತ್ತು ಸಂಖ್ಯಾ ಸಾಮರ್ಥ್ಯವನ್ನು ಗಳಿಸುವಂತೆ ಎಲ್ಲಾ ಶಿಕ್ಷಕರು ಕ್ರಮವಹಿಸಲು ಸೂಚಿಸಿದರು. ಮಕ್ಕಳೊಂದಿಗೆ ಬಿಸಿಯೂಟವನ್ನು ಸವಿದು ರುಚಿ-ಶುಚಿಯಾದ ಆಹಾರ ಪೂರಕ ಪೌಷ್ಠಿಕ ಆಹಾರ ಒದಗಿಸಲು ತಿಳಿಸಿದರು.ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಿಶೇಷ ಗಮನಹರಿಸಲು ತಿಳಿಸಲಾಯಿತು.
ಮಕ್ಕಳು ಗೈರಾಗದಂತೆ ಟ್ರ್ಯಾಕಿಂಗ್ ಮಾಡಲು ತಿಳಿಸಿದರು. ಪ್ರತಿಯೊಂದು ಮಗುವಿನ ಕಲಿಕೆಯ ಬಗ್ಗೆ ವಿಶೇಷ ಕಾಳಜಿ ವಹಿಸಿ ಮಕ್ಕಳ ಕಲಿಕಾ ಗುಣಮಟ್ಟ ಹೆಚ್ಚಿಸುವಲ್ಲಿ ಪ್ರತಿಯೊಬ್ಬ ಶಿಕ್ಷಕರು ಶ್ರಮವಹಿಸುವಂತೆ ತಿಳಿಸಿದರು. ಎಲ್ಲಾ ಮಕ್ಕಳಿಗೂ ಗುಣಾತ್ಮಕ ಶಿಕ್ಷಣ ಪಡೆಯಲು ಶಿಕ್ಷಕರು ಕೆಲಸ ಮಾಡಬೇಕು ಇಲ್ಲಾವಾದಲ್ಲಿ ನಿಯಮಾನುಸಾರ ಸೂಕ್ತಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 