ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ
Provide houses to civic workers on priority: District Collector
ಕಾರವಾರ.ಡಿ.31 :- ಜಿಲ್ಲೆಯಲ್ಲಿನ ಎಲ್ಲಾ ನಗರಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ಶೀಘ್ರದಲ್ಲಿ ಮನೆಗಳನ್ನು ಒದಗಿಸುವಂತೆ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಮಟ್ಟದ ಜಾಗೃತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಮನೆಗಳನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸಿ ಅವರಿಗೆ ಹಸ್ತಾಂತರಿಸುವಂತೆ ಮತ್ತು ಈಗಾಗಲೇ ಕೈಗೊಂಡಿರುವ ಕಾಮಗಾರಿಗಳನ್ನು ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಬೇಕು.ಮನೆ ನಿರ್ಮಾಣಕ್ಕೆ ಜಾಗದ ಅವಶ್ಯಕತೆಯಿದ್ದಲ್ಲಿ ಸಂಬಂಧಢಪಟ್ಟ ತಾಲೂಕಿನ ತಹಸೀಲ್ದಾರ್ ಗಳನ್ನು ಸಂಪರ್ಕಿಸುವಂತೆ ಮತ್ತು ಕಂದಾಯ ಭೂಮಿ ಲಭ್ಯವಿಲ್ಲವಾದಲ್ಲಿ ಪರ್ಯಾಯ ನಿವೇಶನಗಳನ್ನು ಗುರುತಿಸುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮ್ಯಾನ್ ಹೋಲ್ ಗಳನ್ನು ಕಾರ್ಮಿಕರಿಂದ ಸ್ವಚ್ಛಗೊಳಿಸದೇ ಕಡ್ಡಾಯವಾಗಿ ಸಕ್ಕಿಂಗ್ ಮತ್ತು ಜೆಟ್ಟಿಂಗ್ ಯಂತ್ರಗಳನ್ನು ಬಳಸುವಂತೆ ಕಟುನಿಟ್ಟಿನ ಸೂಚನೆ ನೀಡಿ, ಎಲ್ಲಾ ನಗರಸ್ಥಳೀಯ ಸಂಸ್ಥೆಗಳಲ್ಲಿ ಸಕ್ಕಿಂಗ್ ಯಂತ್ರಗಳನ್ನು ಬಳಸುತ್ತಿರುವ ಕುರಿತಂತೆ ಪರೀಶೀಲಿಸುವಂತೆ ಸೂಚಿಸಿದರು.
ಪೌರಕಾರ್ಮಿಕರಿಗೆ ಪ್ರತಿ ತಿಂಗಳು ನಿಗಧಿತ ದಿನಾಂಕದಂದು ವೇತನ ಪಾವತಿಯಾಗಬೇಕು, ಇ.ಎಸ್.ಐ ಮತ್ತು ಇ.ಪಿ.ಎಫ್ ನಿಗಧಿತವಾಗಿ ಕಡಿತವಾಗುತ್ತಿರುವ ಬಗ್ಗೆ ಕಾರ್ಮಿಕ ಇಲಾಖೆ ಅಧಿಕಾರಿಗಳು ಪರೀಶೀಲಿಸಬೇಕು. ಕರ್ತವ್ಯ ಸಮಯದಲ್ಲಿ ಸುರಕ್ಷಾ ಪರಿಕರಗಳನ್ನು ತಪ್ಪದೇ ಬಳಸುವ ಕುರಿತಂತೆ ಪೌರ ಕಾರ್ಮಿಕರಿಗೆ ನಿರ್ದೇಶನ ನೀಡಬೇಕು, ನಿಗಧಿತ ಸಮಯದಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ ಮತ್ತು ಮಾಸ್ಟರ್ ಹೆಲ್ತ್ ಚೆಕಪ್ ಗಳನ್ನು ಕಡ್ಡಾಯವಾಗಿ ಮಾಡಿಸಬೇಕು ಎಂದರು.
ಪ್ರತಿದಿನ ಪೌರ ಕಾರ್ಮಿಕರಿಗೆ ಉತ್ತಮ ಗುಣಮಟ್ಟದ ಪೌಷ್ಠಿಕಾಂಶವುಳ್ಳ ಉಪಹಾರ ಒದಗಿಸಬೇಕು ಮತ್ತು ಅವರಿಗೆ ವಿಶ್ರಾಂತಿ ಗೃಹಗಳ ವ್ಯವಸ್ಥೆ ಮಾಡಬೇಕು ಹಾಗೂ ಸಂಕಷ್ಟ ಭತ್ಯೆಗಳನ್ನು ವಿತರಿಸಬೇಕು ಎಂದರು.
ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದೀಲೀಷ್ ಶಶಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಉಮೇಶ್ ವೈ.ಕೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 