ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾನೂನು ಸೇವೆಗಳ ಯೋಜನೆಗಳ ಮಾಹಿತಿ ನೀಡಿ
Provide information about legal service schemes to even the last person in society
ಲೋಕದರ್ಶನ ವರದಿ
ಹಾವೇರಿ, ಸೆ.23 (ಕರ್ನಾಟಕ ವಾರ್ತೆ): ಅರೆನ್ಯಾಯಿಕ ಸ್ವಯಂಸೇವಕರು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಯೋಜನೆಗಳ ಕುರಿತು ಮಾಹಿತಿ ನೀಡಬೇಕು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ದೊರೆಯುವ ಕಾನೂನು ಅರಿವು ಹಾಗೂ ನೆರವಿನ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿರಾದಾರ ದೇವೇಂದ್ರ್ಪ ಎನ್. ಹೇಳಿದರು.
ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಅಭಿಯೋಜನಾ ಇಲಾಖೆ ಹಾಗೂ ಬೆಂಗಳೂರಿನ ಓಟ್ಲಾ ಇಂಡಿಯಾ ಫೌಂಡೇಶನ್ ಸಹಯೋಗದಲ್ಲಿ ಸೆ.23 ಮತ್ತು 24ರಂದು ನಡೆಯಲಿರುವ ಅರೆನ್ಯಾಯಿಕ ಸ್ವಯಂಸೇವಕರ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಸಮಾಜದ ಜನರ ನಡುವೆ ಸೇತುವೆಯಾಗಿ ಅರೆನ್ಯಾಯಿಕ ಸ್ವಯಂಸೇವಕರು ಕಾರ್ಯನಿರ್ವಹಿಸಬೇಕು. ಕಾನೂನು ಹಾಗೂ ಸಂಬಂಧಿತ ವಿಷಯಗಳ ಕುರಿತು ಜ್ಞಾನ ಪಡೆದುಕೊಳ್ಳಲು ತರಬೇತಿ ಆಯೋಜಿಸಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಕುಟುಂಬ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಎಂ.ಜಿ. ಶಿವಳ್ಳಿ ಅಧ್ಯಕ್ಷತೆ ವಹಿಸಿದ್ದರು. ನ್ಯಾಯಾಧೀಶರಾದ ಶ್ರೀಮತಿ ಅಶ್ವಿನಿ ವಿಜಯ ಶಿರಿಯಣ್ಣವರ, ಎನ್.ಎಂ. ರಮೇಶ್, ಶ್ರೀಮತಿ ಶೋಭಾ ಬಿ.ಜಿ., ಶ್ರೀಮತಿ ಶ್ರೀಶೈಲಜಾ ಎಚ್.ವಿ., ಆಕರ್ಷ್ ಎಂ., ರಾಹುಲ್ ಆದಿನಾಥ ನಾಮಗೌಡ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಚ್.ಸಿ. ಸಿದ್ದನಗೌಡರ, ಕಾರ್ಯದರ್ಶಿ ಪಿ.ಎಸ್. ಹೆಬ್ಬಾಳ, ಓಟ್ಲಾ ಇಂಡಿಯಾ ಫೌಂಡೇಶನ್ನ ಜೋವಿಜೋಯ್ ಹಾಗೂ ಶ್ರೀಮತಿ ಮೀಮಾಂಸಾಸಿಂಗ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 