ಕೊಪ್ಪಳ 26: 0-5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪೋಲಿಯೋ ಹನಿ ಹಾಕಿಸುವಂತೆ ಪಾಲಕರಿಗೆ ಮಾಹಿತಿ ನೀಡಿ ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ವೆಂಕಟರಾಜ್ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೊಪ್ಪಳ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ 2019ರ ಫೆಬ್ರುವರಿ. 03 ರಂದು ನಡೆಯುವ "ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ" ಪೂರ್ವಸಿದ್ದತೆಗಾಗಿ ಜಿ.ಪಂ. ಸಭಾಂಗಣದಲ್ಲಿ ಬುಧವಾರದಂದು ಆಯೋಜಿಸಲಾದ ಜಿಲ್ಲಾ ಮಟ್ಟದ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ದೇಶದಲ್ಲಿ ಪೋಲಿಯೋ ರೋಗ ಈಗಾಗಲೇ ನಿಮರ್ೂಲನೆಯಾಗಿದ್ದು, ಪಕ್ಕದ ರಾಷ್ಟ್ರದಲ್ಲಿ ಈ ಪ್ರಕರಣಗಳು ಇರುವುದರಿಂದ ಮುಂಜಾಗ್ರತೆಗಾಗಿ ನಮ್ಮ ದೇಶದಲ್ಲಿ, ರಾಜ್ಯದಲ್ಲಿ ಮತ್ತು ನಮ್ಮ ಜಿಲ್ಲೆಯಲ್ಲಿ 0 ರಿಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪೋಲಿಯೋ ಹನಿ ಹಾಕಿಸುವಂತೆ ಪಾಲಕರಿಗೆ ಮಾಹಿತಿ ನೀಡುವುದು ಬಹಳ ಮುಖ್ಯವಾಗಿದೆ. ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಇತರ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನಗೊಳಿಸುವಂತೆ ಈ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಸಹ ಯಾವುದೇ ತೊಂದರೆಯಾಗದಂತೆ ಎಲ್ಲಾ ಇಲಾಖೆಗಳ ಸಹಕಾರ ತೆಗೆದುಕೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಜಿಲ್ಲೆಯ ಎಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ತಾಲೂಕಾ ಆರೋಗ್ಯಾಧಿಕಾರಿಗಳು, ವೈದ್ಯಾಧಿಕಾಗಳು ಮತ್ತು ಸಿಬ್ಬಂದಿ ವರ್ಗದವರು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು ಎಂದು ಜಿ.ಪಂ. ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ವೆಂಕಟರಾಜ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಳ್ಳಾರಿ ಜಿಲ್ಲೆಯ ಎಸ್.ಎಂ.ಓ. ಡಾ. ಶ್ರೀಧರ ಅವರು ಮಾತನಾಡಿ, ಜಿಲ್ಲೆಯ, ರಾಜ್ಯಾದ, ದೇಶದ ಪೋಲಿಯೋ ರೋಗದ ಸ್ಥಿತಿಗತಿ ಮತ್ತು ಪಿ.ಪಿ.ಟಿ ಮೂಲಕ ಕಾರ್ಯಕ್ರಮಕ್ಕೆ ಸಹಕರಿಸಬೇಕು. ಎಲ್ಲರೂ ರಾಜ್ಯಾ ಮಟ್ಟದ ಮಾರ್ಗಸೂಚಿ ಪ್ರಕಾರ ಕ್ರೀಯಾ ಯೋಜನೆ ತಯಾರಿಸಿ ಸರಿಯಾದ ಸಮಯಕ್ಕೆ ಜಿಲ್ಲೆಗೆ ಸಲ್ಲಿಸಬೇಕು. ಯಾವುದೇ 0 ರಿಂದ 5 ವರ್ಷದೊಳಗಿನ ಮಗು ಪೋಲಿಯೋ ಹನಿಯಿಂದ ತಪ್ಪಿಸಿಕೊಳ್ಳದಂತೆ ಲಸಿಕೆ ನೀಡಬೇಕು. ಪ್ರತಿ ಮನೆ ಮನೆಗೂ ಭೇಟಿ ನೀಡಿ ಪೋಲಿಯೋ ಲಸಿಕೆ ನೀಡುವ ಬಗ್ಗೆ ಕಿರಿಯ ಆರೋಗ್ಯ ಸಹಾಯಕರು, ಆಶಾ ಮತ್ತು ಅಂಗನಾವಾಡಿ ಕಾರ್ಯಕತರ್ೆಯರಿಗೆ ತರಬೇತಿ ನೀಡಲಾಗುವುದು. ಕಾರ್ಯಕ್ರಮದ ಪ್ರಚಾರಕ್ಕಾಗಿ ಹೆಚ್ಚಿನ ರೀತಿಯಲ್ಲಿ ಐ.ಇ.ಸಿ ಚಟುವಟಿಕೆಗಳನ್ನು ಹಮ್ಮಿಕೊಂಡು ಯಶಸ್ವಿಗೊಳಿಸಬೇಕು ಎಂದರು.
ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಅಲಕನಂದಾ ಮಳಗಿ ಮಾತನಾಡಿ, ಆರೋಗ್ಯ ಇಲಾಖೆ ಯಿಂದ ಪ್ರತಿವರ್ಷ ಪಲ್ಸ್ ಪೋಲಿಯೋ ಕಾರ್ಯಕ್ರಮ ನಿರ್ವಹಿಸುತ್ತಾ ಬಂದಿದ್ದೇವೆ. ಈ ವರ್ಷವು ಸಹ ಸರಕಾರದ ಆದೇಶದಂತೆ ಫೆಬ್ರುವರಿ. 03 ರಂದು ಹಮ್ಮಿಕೊಳ್ಳವ ಪಲ್ಸ್ ಪೋಲಿಯೋ ಕಾರ್ಯಕ್ರಮದ ಬಗ್ಗೆ ಪ್ರತಿಯೊಂದು ಆರೋಗ್ಯ ಸಂಸ್ಥೆಯ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಮುಖ್ಯವಾಗಿ ಜಿಲ್ಲೆಯಲ್ಲಿರುವ ಸಮಸ್ಯಾತ್ಮಾಕ ಪ್ರದೇಶಗಳಾದ ಇಟ್ಟಿಗೆ ಬಟ್ಟಿ, ತೋಟದ ಮನೆ, ವಲಸೆ ಜನಾಂಗ, ನಗರ ಪ್ರದೇಶದ ಕೊಳಚೆ ಪ್ರದೇಶ, ಕಬ್ಬು ಕಡಿಯುವ ಕಾಮರ್ಿಕರು, ಕಟ್ಟಡ ನಿಮರ್ಾಣದ ಕಾಮರ್ಿಕರು, ಗುಡ್ಡಗಾಡು ಪ್ರದೇಶದಲ್ಲಿ ವಾಸಿಸುವ ಜನರ 0-5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕಾ ಬಗ್ಗೆ ಮಾಹಿತಿಯನ್ನು ತಮ್ಮ ಕ್ರೀಯಾಯೋಜನೆಯಲ್ಲಿ ಸೇರಿಸಿ ಜಿಲ್ಲಾ ಮಟ್ಟಕ್ಕೆ ನಿಗದಿತ ಸಮಯದಲ್ಲಿ ಸಲ್ಲಿಸಬೇಕು ಎಂದರು.
ಕಾರ್ಯಗಾರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ವಿರುಪಾಕ್ಷರೆಡ್ಡಿ ಮಾದಿನೂರ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಜಂಬಯ್ಯ, ಜಿಲ್ಲಾ ಸವರ್ೆಕ್ಷಣಾಧಿಕಾರಿ ಡಾ. ಎಂ.ಎಂ ಕಟ್ಟಿಮನಿ ಸೇರಿದಂತೆ ತಾಲೂಕಾ ಆರೋಗ್ಯಾಧಿಕಾರಿಗಳು, ತಾಲೂಕಾ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿಗಳು, ವಿವಿಧ ಆರೋಗ್ಯ ಸಂಸ್ಥೆ ವೈದ್ಯಾಧಿಕಾರಿಗಳು, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು, ಹಿರಿಯ ಆರೋಗ್ಯ ಸಹಾಯಕರು ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದು, ಕಾರ್ಯಗಾರ ಯಶಸ್ವಿಗೊಳಿಸಿದರು.