ಬಾಲಕಾರ್ಮಿಕರ, ಕಿಶೋರ ಕಾರ್ಮಿಕರ ಕುರಿತು ಜನಜಾಗೃತಿ ಕಾರ್ಯಕ್ರಮ; ಓರ್ವ ಕಿಶೋರ ಕಾರ್ಮಿಕ ಪತ್ತೆ, ಪ್ರಕರಣ ದಾಖಲು

Public Awareness Program on Child Labour, Youth Labour; A juvenile worker was found, a case was reg

ಬಾಲಕಾರ್ಮಿಕರ, ಕಿಶೋರ ಕಾರ್ಮಿಕರ ಕುರಿತು ಜನಜಾಗೃತಿ ಕಾರ್ಯಕ್ರಮ; ಓರ್ವ ಕಿಶೋರ ಕಾರ್ಮಿಕ ಪತ್ತೆ, ಪ್ರಕರಣ ದಾಖಲು

ಹುಬ್ಬಳ್ಳಿ 13:  ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ  ಸಹಯೋಗದಲ್ಲಿ ಇಂದು (ಫೆ.13) ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಪ್ಯಾನ ಇಂಡಿಯಾ ಮಕ್ಕಳ ರಕ್ಷಣೆ ಮತ್ತು ಪುನರ್ವಸತಿ ಆಂದೋಲನದ ಅಂಗವಾಗಿ ಕಾರ್ಮಿಕ ಆಯುಕ್ತರ ಹಾಗೂ ಸಹಾಯಕ ಕಾರ್ಮಿಕರ ಆಯುಕ್ತರ ನಿರ್ದೇಶನದ ಮೇರೆಗೆ ಹುಬ್ಬಳ್ಳಿಯ ದುರ್ಗದಬೈಲ್, ಬಟರ ಮಾರ್ಕೆಟ್, ಸಿಬಿಟಿ, ಸುತ್ತಲೀನ ವ್ಯಾಪ್ತಿಯಲ್ಲಿ ಬರುವ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ, ಬೇಕರಿ, ಗ್ಯಾರೆಜ, ಮುಂತಾದ ವಾಣಿಜ್ಯ ಸಂಸ್ಥೆಗಳಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಕುರಿತು ಜಾಗೃತಿ ಹಾಗೂ ತಪಾಸಣೆಯನ್ನು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.  

      ಈ ಸಂದರ್ಭದಲ್ಲಿ ವಾಣಿಜ್ಯ ಸಂಸ್ಥೆಗಳ ಮಾಲೀಕರಿಗೆ ಬಾಲಕಾರ್ಮಿಕರನ್ನು ಅಥವಾ ಕಿಶೋರ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಂಡಲ್ಲಿ ಮಾಲೀಕರಿಗೆ ಕಾಯ್ದೆಯಡಿ ರೂ. ಇಪ್ಪತ್ತ ರಿಂದ ಐವತ್ತು ಸಾವಿರ ದವರೆಗೆ ದಂಡ ಇಲ್ಲವೆ ಆರು ತಿಂಗಳಿಂದ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಕಾಯ್ದೆಯಲ್ಲಿ ಅವಕಾಶವಿದೆ ಎಂದು ಜಾಗೃತಿಯನ್ನು ಮೂಡಿಸಲಾಯಿತು. ಹಾಗೂ ಕರಪತ್ರ ಮತ್ತು ಸ್ಟಿಕರ್‌ಗಳನ್ನು ಸಾರ್ವಜನಿಕರಿಗೆ ಕಾಣುವಂತೆ ಸಾರ್ವಜನಿಕ ಸ್ಥಳ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಅಂಟಿಸಲಾಯಿತು. 

ಈ ಸಂದರ್ಭದಲ್ಲಿ ಮನಿಷಾ ನಾವೆಲ್ಟಿ, ಪಾನ ಬಜಾರ್‌ದಲ್ಲಿ ಒಬ್ಬ ಕಿಶೋರ ಕಾರ್ಮಿಕರನ್ನು ಗುರುತಿಸಿ, ಮಗುವನ್ನು ಕೆಲಸದಿಂದ ಬಿಡುಗಡೆಗೊಳಿಸಿ ಪಾಲಕರ ವಶಕ್ಕೆ ಒಪ್ಪಿಸಲಾಯಿತು. ಹಾಗೂ ಮಾಲೀಕರ ವಿರುದ್ದ ಪ್ರಕರಣ ದಾಖಲಿಸಲು ಕ್ರಮ ಕೈಗೊಳ್ಳಲಾಯಿತು.  

    ಈ ತಪಾಸಣಾ ಮತ್ತು ಜಾಗೃತಿ ಕಾರ್ಯಕ್ರಮದಲ್ಲಿ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಬಸವರಾಜ ಪಂಚಾಕ್ಷರಿಮಠ, ಹಿರಿಯ ಕಾರ್ಮಿಕ ನೀರೀಕ್ಷಕರಾದ ರಜನಿ ಹಿರೇಮಠ, ಅಶೋಕ ಒಡೆಯರ್, ಸಂಗೀತಾ ಬೆನಕೊಪ್ಪ, ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ಅಧಿಕಾರಿ ಮುತ್ತು ವಡ್ಡರ್, ಪೊಲೀಸ್ ಇಲಾಖೆಯ ಸಹಾಯಕ ಆರಕ್ಷಕ ನೀರೀಕ್ಷಕ ವಾಯ್‌.ಎಸ್‌.ಗೌರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೆಲ್ವೀಚಾರಕಿ ರೇಖಾ ಸೊರಕೊಪ್ಪ ಹಾಗೂ ಇತರರು ಉಪಸ್ಥಿತರಿದ್ದರು.