ಆಯ-ವ್ಯಯ ಪೂರ್ವಭಾವಿ ಸಭೆಯಲ್ಲಿ ಕೆರೆ ಹಾಗೂ ಪಾರ್ಕ್ ರಸ್ತೆ ಅಗಲೀಕರಣ ಲೈಟ್ ಚರಂಡಿ ಶೌಚಾಲಯ ಅಭಿವೃದ್ಧಿಪಡಿಸಿ ಸಾರ್ವಜನಿಕರ ಒತ್ತಾಯ
Public demands for widening of lake and park roads, development of lights, sewerage and toilets in
ಕಂಪ್ಲಿ 18: ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಆಯ-ವ್ಯಯದ ಪೂರ್ವಭಾವಿ ಸಭೆಯು ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ ಅವರ ಸಭಾಧ್ಯಕ್ಷತೆಯಲ್ಲಿ ಶನಿವಾರ ನಡೆಯಿತು.ನಂತರ ಲೆಕ್ಕಿಗ ರಮೇಶ ಬೆಳಂಕರ್ ಅವರು ವರದಿಯನ್ನು ಮಂಡಿಸಿ ಮಾತನಾಡಿ, ಎಸ್‌ಎಫ್‌ಸಿ ವಿಶೇಷ ಅನುದಾನದ ಸುಮಾರು 2 ಕೋಟಿಯಲ್ಲಿ ಅಗಲೀಕರಣ ಮಾಡಿದ್ದು ಸೋಮಪ್ಪ ಕೆರೆ ಹಾಗೂ ಪಾರ್ಕ್ ಅಭಿವೃದ್ಧಿಗಾಗಿ ಅಮೃತ್ ಯೋಜನೆಯಡಿ ಸುಮಾರು 2 ಕೋಟಿ ನಿಗದಿಪಡಿಸಿದೆ.
ನೀರು ಸರಬರಾಜು ಯೋಜನೆಯಲ್ಲಿ ರೈಸಿಂಗ್ ಮೇನ್ ಪೈಪ್‌ಲೈನ್. ಎಸ್‌ಎಫ್‌ಸಿ ವಿಶೇಷ ಅನುದಾನದ 170 ಲಕ್ಷ ವೆಚ್ಚದಲ್ಲಿ ವಾರದ ಸಂತೆ ಮಾರುಕಟ್ಟೆ ಅಭಿವೃದ್ಧಿ ಕಾಮಗಾರಿಗೆ ಶ್ರೀಘ್ರವಾಗಿ ಕಾಮಗಾರಿ ಆರಂಭಿಸಲಾಗುವುದು. ಸುಮಾರು 7.50 ಕೋಟಿಯಲ್ಲಿ ಪುರಸಭೆಯ ನೂತನ ಕಟ್ಟಡ ನಿರ್ಮಾಣಕ್ಕೆ ಡಿಪಿಆರ್ ಪ್ರಗತಿಯಲ್ಲಿದೆ. ಹೀಗೆ ವಿವಿಧ ಅಭಿವೃದ್ಧಿಗೆ ಸಂಬಂಧಿಸಿದ ವರದಿಯನ್ನು ಮಂಡಿಸಿದರು. ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ ಮಾತನಾಡಿ, ಪೂರ್ವಭಾವಿ ಸಭೆಯಲ್ಲಿ ಪಟ್ಟಣದ ಅಭಿವೃದ್ಧಿಗೆ ಸಂಬಂಧಿಸಿದಂತೆ ಅನೇಕ ಸಲಹೆ ಸೂಚನೆಗಳನ್ನು ನೀಡಿದ್ದು, ಬಜೆಟ್‌ನಲ್ಲಿಟ್ಟು ಪ್ರತಿಯೊಂದು ಸಮಸ್ಯೆಗಳನ್ನು ಮುಕ್ತಿ ನೀಡಲು ಸೂಕ್ತಕ್ರಮವಹಿಸಲಾಗುವುದು ಎಂದರು.
ಇಲ್ಲಿನ ಪೂರ್ವಭಾವಿ ಸಭೆಯಲಿ ಜನಪ್ರತಿನಿಧಿಗಳು, ಮುಖಂಡರು, ಸಂಘ-ಸಂಸ್ಥೆಯವರು ಅನೇಕ ಸಲಹೆ ಸೂಚನೆಗಳನ್ನು ನೀಡಿದರು. ರಸ್ತೆ ಅಗಲೀಕರಣ ಮಾಡಿ, ಅಭಿವೃದ್ಧಿಪಡಿಸಬೇಕು ಎಂದು ಸಲಹೆ ನೀಡಿದರು. ಸೋಮಪ್ಪ ಕೆರೆಯಲ್ಲಿ ಕುಡುಕರ ಹಾವಳಿಯಿಂದ ಎಲ್ಲೆಂದರಲ್ಲಿ ಬಾಟಲಿಗಳು ಪ್ರತ್ಯಕ್ಷವಾಗುತ್ತಿವೆ. ಇಲ್ಲಿ ಬರುವ ವಾಯು ವಿಹಾರಿಗಳಿಗೆ ತುಂಬ ತೊಂದರೆ ಉಂಟಾಗಿದೆ, ಇದರಲ್ಲಿ ಅನೈತಿಕ ಚಟವಟಿಕೆ ನಡೆಯುತ್ತಿವೆ. ಬೀದಿ ದೀಪಗಳಿಲ್ಲ. ವಿಹಾರಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಕಾವಲುಗಾರರನ್ನು ನೇಮಿಸಬೇಕು.ಆದ್ದರಿಂದ ಅಧಿಕಾರಿಗಳು ಸೂಕ್ತಕ್ರಮ ಕೈಗೊಳ್ಳಬೇಕೆಂದು ಮುಖಂಡ ಬಿಕೆ ವಿರುಪಾಕ್ಷ ತಿಳಿಸಿದರು. ಈ ಸಂದರ್ಭದಲ್ಲಿ ಕೆ.ಎಂ.ಹೇಮಯ್ಯಸ್ವಾಮಿ, ಹೂಗಾರ ರಮೇಶ, ಜಾಫರ್, ಸುಧಾಕರ, ಅಕ್ಕಿಜಿಲಾನ್, ಎನ್.ಎಂ.ಪತ್ರಯ್ಯಸ್ವಾಮಿ, ವೆಂಕಟೇಶ, ಚನ್ನಬಸವ ತಿಮ್ಮಪ್ಪನಾಯಕ ಹಾಗೂ ಸಿಬ್ಬಂದಿಗಳು ಸೇರಿದಂತೆ ಸಂಘ-ಸಂಸ್ಥೆಯವರುಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 