ದೋಷರಹಿತ ಮತದಾರರ ಪಟ್ಟಿ ಸಿದ್ಧತೆಗೆ ಎಸ್ಐಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರ ಭಾಗವಹಿಸುವಿಕೆ ಅಗತ್ಯ: ಜಿಪಂ ಸಿಇಒ ಕರೆ
Public participation in the SIR process is essential for preparing an error-free electoral roll: ZP
ಲೋಕದರ್ಶನ ವರದಿ
ಬಳ್ಳಾರಿ, ಜು. 4: ಭಾರತ ಚುನಾವಣಾ ಆಯೋಗದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ವತಿಯಿಂದ ಶನಿವಾರ ಜಿಲ್ಲಾ ಪಂಚಾಯಿತಿ ಸಭಾಂಗಣದ ಮುಂಭಾಗದಲ್ಲಿ ‘ಎಸ್ಐಆರ್ ಮತದಾನ ಜಾಗೃತಿ ರಂಗೋಲಿ ಸ್ಪರ್ಧೆ’ ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್, ಪ್ರಜಾಪ್ರಭುತ್ವದಲ್ಲಿ ಪ್ರತಿಯೊಂದು ಮತವೂ ಅಮೂಲ್ಯವಾಗಿದ್ದು, ದೋಷರಹಿತ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲು ಪ್ರತಿಯೊಬ್ಬ ಅರ್ಹ ನಾಗರಿಕರೂ ಎಸ್ಐಆರ್ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಕರೆ ನೀಡಿದರು. ಜುಲೈ 29ರವರೆಗೆ ಬೂತ್ ಮಟ್ಟದ ಅಧಿಕಾರಿಗಳು ಮನೆಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸುತ್ತಿದ್ದು, ಸಾರ್ವಜನಿಕರು ಯಾವುದೇ ತಪ್ಪಿಲ್ಲದೆ ನಮೂನೆಗಳನ್ನು ಭರ್ತಿ ಮಾಡಿ ಹಿಂತಿರುಗಿಸುವಂತೆ ಮನವಿ ಮಾಡಿದರು.
ಮತದಾರರ ಪಟ್ಟಿಯಲ್ಲಿ ಅರ್ಹ ಪ್ರತಿಯೊಬ್ಬ ನಾಗರಿಕರ ಹೆಸರಿರಬೇಕು. ಆದ್ದರಿಂದ ಎಸ್ಐಆರ್ ಕುರಿತು ಸಮಾಜದ ಎಲ್ಲ ವರ್ಗಗಳಲ್ಲೂ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಅವರು ತಿಳಿಸಿದರು. ಸ್ಪರ್ಧೆಯಲ್ಲಿ ಭಾಗವಹಿಸಿದ ಮಹಿಳೆಯರು ಎಸ್ಐಆರ್ ಜಾಗೃತಿ ಸಂದೇಶಗಳನ್ನು ಒಳಗೊಂಡ ಆಕರ್ಷಕ ರಂಗೋಲಿಗಳನ್ನು ರಚಿಸಿ ಗಮನ ಸೆಳೆದರು. ಅವುಗಳ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮೊಬೈಲ್ ಸ್ಟೇಟಸ್ಗಳಲ್ಲಿ ಹಂಚಿಕೊಳ್ಳುವ ಮೂಲಕ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಇನ್ನಷ್ಟು ಜನರಲ್ಲಿ ಅರಿವು ಮೂಡಿಸುವಂತೆ ಅಧಿಕಾರಿಗಳು ಸಲಹೆ ನೀಡಿದರು.
ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಇದೇ ಮಾದರಿಯ ಎಸ್ಐಆರ್ ಜಾಗೃತಿ ರಂಗೋಲಿ ಸ್ಪರ್ಧೆಗಳನ್ನು ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಲಾಯಿತು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಜಿಲ್ಲಾ ಆಡಳಿತದ ವತಿಯಿಂದ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ವಿತರಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶಶಿಕಾಂತ್ ಶಿವಪುರ, ಸಹಾಯಕ ನಿರ್ದೇಶಕ ಬಸವರಾಜ ಹಿರೇಮಠ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಸ್ವಸಹಾಯ ಸಂಘಗಳ ಮಹಿಳೆಯರು ಸೇರಿದಂತೆ ನೂರಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 