ಕಿತ್ತೂರು ಉತ್ಸವ ಯಶಸ್ಸಿಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ
Public participation is essential for the success of the Kittur Utsav
ಲೋಕದರ್ಶನ ವರದಿ
ಬೆಳಗಾವಿ 28: ಕಿತ್ತೂರು ಉತ್ಸವ-2026ರ ಯಶಸ್ಸಿಗೆ ವಿವಿಧ ಉಪಸಮಿತಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಉತ್ಸವದ ಯಶಸ್ವಿ ಆಯೋಜನೆಗೆ ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಕಿತ್ತೂರಿನ ವೀರ ರಾಣಿ ಕಿತ್ತೂರು ಚೆನ್ನಮ್ಮ ಸಭಾಭವನದಲ್ಲಿ ಸೋಮವಾರ (ಸೆ. 28) ನಡೆದ ಚೆನ್ನಮ್ಮ ಉತ್ಸವ-2026ರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಉತ್ಸವದ ಸಿದ್ಧತೆಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲು ಸಂಬಂಧಿಸಿದ ಎಲ್ಲ ಉಪಸಮಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಕಾರ್ಯಕ್ರಮಗಳ ಯಶಸ್ಸಿಗೆ ಅಧಿಕಾರಿಗಳೊಂದಿಗೆ ಸಾರ್ವಜನಿಕರು ಹಾಗೂ ಸ್ಥಳೀಯರ ಸಹಕಾರವೂ ಅಗತ್ಯವಾಗಿದೆ ಎಂದು ಸಚಿವರು ತಿಳಿಸಿದರು.
ಐವರು ಪೋಲಿಸರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ನಾಗರಿಕರ ಪ್ರತಿಭಟನೆ, ನೀಲಗಾರ ಗಣಪತಿ ದರ್ಶನ ರದ್ದು
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ 