ಸಮೂಹ ನೃತ್ಯದಲ್ಲಿ ಕೊಳವಿ ಶಾಲೆ ಪ್ರಥಮ
ಲೋಕದರ್ಶನ ವರದಿ
ಬೆಳಗಾವಿ 24: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳಗಾವಿ, ಜಿಲ್ಲಾ ಬಾಲಭವನ ಬೆಳಗಾವಿ, ಸಮಗ್ರ ಶಿಶು ಅಭಿವೃದ್ಧಿಯೋಜನೆ ಬೆಳಗಾವಿ ನಗರ ಹಾಗೂ ಮಹಿಳಾ ಕಲ್ಯಾಣ ಸಂಸ್ಥೆ ಬೆಳಗಾವಿ ವಾರಾಂತ್ಯ ಕಾರ್ಯಕ್ರಮ ದಡಿಯಲ್ಲಿ ಹುಕ್ಕೇರಿ ತಾಲೂಕಿನ ಯರಗಟ್ಟಿ ಗ್ರಾಮದ ಜಗಜ್ಯೋತಿ ಬಸವೇಶ್ವರಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ ಜಿಲ್ಲಾ ಮಟ್ಟದ ಅಂತರ ಶಾಲಾ ಸಮೂಹ ನೃತ್ಯ ಸ್ಪಧರ್ೆಯಲ್ಲಿ ಗೋಕಾಕ ತಾಲೂಕಿನ ಕೊಳವಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಪ್ರಥಮ ಬಹುಮಾನ ಪಡೆದುಕೊಂಡಿತು.
ಬಹುಮಾನ ವಿತರಿಸಿ ಮಾತನಾಡಿದಕಿರಣ ಚೌಗಲಾ ಪಠ್ಯೇತರ ಚಟುವಟಿಕೆಗಳು ಮಕ್ಕಳಲ್ಲಿ ಆಸಕ್ತಿ ಬೆಳೆಸಲು ಸಹಕಾರಿಯಾಗಲಿವೆ. ಮಕ್ಕಳ ಸವರ್ಾಂಗೀಣ ಪ್ರಗತಿಯತ್ತ ಗಮನಿಸಿ ಜಿಲ್ಲೆ ಹಾಗೂ ತಾಲೂಕು ಬಾಲಭವನಗಳು ಅನೇಕ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಲಿವೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯರಗಟ್ಟಿ ಗ್ರಾಮದ ಹಿರಿಯರಾದ ಬಿ.ಆರ್.ಪಾಟೀಲ ವಹಿಸಿದ್ದರು.ಜಿಲ್ಲೆಯ ವಿವಿಧ ಹತ್ತು ಶಾಲಾ ತಂಡಗಳು ಸಮೂಹ ನೃತ್ಯ ಸ್ಪಧರ್ೆಯಲ್ಲಿ ಭಾಗವಹಿಸಿದ್ದವು, ದ್ವಿತೀಯ ಬಹುಮಾನವನ್ನು ಜಂಟಿಯಾಗಿ ಮುರಾಜರ್ಿ ದೇಸಾಯಿ ವಸತಿ ಶಾಲೆ ಹೊಸುರ ಹಾಗೂ ಸರಕಾರಿ ಪ್ರಾಥಮಿಕ ಶಾಲೆಕೊಳವಿ, ತೃತೀಯ ಬಹುಮಾನವನ್ನು ಜಂಟಿಯಾಗಿ ಕನರ್ಾಟಕ ಪಬ್ಲಿಕ ಶಾಲೆ ಯರಗಟ್ಟಿ ಮತ್ತು ಸರಕಾರಿ ಪ್ರೌಢ ಶಾಲೆ ಹೊಸೂರ ಪಡೆದು ಕೊಂಡವು.
ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಹುಸೇನ ಮುಲ್ಲಾ, ವಿರುಪಾಕ್ಷಿ ಚೌಗಲಾ ಎಸ್.ಡಿ.ಎಂ.ಸಿ ಅಧ್ಯಕ್ಷಚಂದ್ರಶೇಖರ ಪಾಟೀಲ, ಮಲ್ಲಿಕಾಜರ್ುನ ನಂದಗಾವಿ, ಗ್ರಾಮ ಪಂಚಾಯತ ಸದಸ್ಯರು ಉಪಸ್ಥಿತರಿದ್ದರು. ವಿಜೇತ ತಂಡಗಳಿಗೆ ಪ್ರಥಮ ಬಹುಮಾನ3 ಸಾವಿರ ದ್ವಿತೀಯ 2 ಸಾವಿರ ಹಾಗೂ ತೃತೀಯ1 ಸಾವಿರರೂಪಾಯಿ ಬಹುಮಾನವನ್ನು ನೀಡಲಾಯಿತು.
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ 