ವ್ಲಾಡಿವೋಸ್ಟಾಕ್, ಏ 22 ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹಾಗೂ ಉತ್ತರ ಕೊರಿಯಾದ ಕಿಮ್ ಜಾಂಗ್ ಅನ್ ಅವರ ನಡುವೆ ನಡೆಯಲಿರುವ ಮಾತುಕತೆ ಹಿನ್ನೆಲೆ, ನಗರದಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಇಬ್ಬರು ನಾಯಕರ ಸಭೆ ಇಲ್ಲಿನ ಈಸ್ಟನರ್್ ಫೆಡರಲ್ ವಿಶ್ವವಿದ್ಯಾಲಯದಲ್ಲಿ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ, ಸುರಕ್ಷತೆಯನ್ನು ಹೆಚ್ಚಿಸಲಾಗಿದೆ ಎಂದು ತಿಳಿದುಬಂದಿದೆ. ಈ ಇಬ್ಬರು ನಾಯಕರ ಭೇಟಿಗೆ ಈಗಾಗಲೇ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ. ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ವಿಶೇಷ ಆಹ್ವಾನಿತರಿಗೆ ಮಾತ್ರ ಒಳಗೆ ಪ್ರವೇಶ ನೀಡಲಾಗುವುದು. ವಿಶ್ವವಿದ್ಯಾಲಯದ ಸಿಬ್ಬಂದಿ ಹಾಗೂ ವಿದ್ಯರ್ಥಿಗಳಿಗೆ ಸಭೆಯಲ್ಲಿ ಭಾಗವಹಿಸಬೇಕೊ ಬೇಡವೋ ಎಂಬುದರ ಬಗ್ಗೆ ಇನ್ನು ಖಚಿತ ನಿರ್ಧಾರ ಕೈಗೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.