ಕ್ರಿಕೆಟ್ ಟೂರ್ನಿಗೆ ಆರ್.ಆಂಜನೇಯ ಚಾಲನೆ
R. Anjaneya launches cricket tournament
ಕ್ರಿಕೆಟ್ ಟೂರ್ನಿಗೆ ಆರ್.ಆಂಜನೇಯ ಚಾಲನೆ
ಕಂಪ್ಲಿ 08: ನಗರ ಪ್ರದೇಶಗಳಲ್ಲಿ ಕ್ರಿಕೆಟ್ ಟೂರ್ನಿಗಳನ್ನು ಅಯೋಜಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದ್ದು, ಆಟಗಾರರು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ, ಕ್ರೀಡಾ ಮನೋಭಾವ ಮೆರೆಯಿರಿ’ ಎಂದು ಪುರಸಭೆ ಸದಸ್ಯ ಆರ್.ಆಂಜನೇಯ್ಯ ಹೇಳಿದರು.ಸ್ಥಳೀಯ 21ನೇ ವಾರ್ಡಿನ ಎಂಡಿಕ್ಯಾಂಪಿನ ಹೊರವಲಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಸಂಘದಿಂದ ಭಾನುವಾರ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿ, ಕ್ರೀಡಾಪಟುಗಳು ತಮ್ಮಲ್ಲಿರುವ ಪ್ರತಿಭೆ ಅನಾವರಣ ಮಾಡಲು ಸ್ಥಳೀಯ ಮಟ್ಟದಲ್ಲಿ ನಡೆಯುವ ಕ್ರೀಡಾಕೂಟಗಳು ಸಹಕಾರಿ ಯಾಗಲಿವೆ. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಆರೋಗ್ಯ ಮತ್ತು ಮಾನಸಿಕ ಸಾಮರ್ಥ್ಯ ವೃದ್ದಿಯಾಗಲಿದೆ.
ಕ್ರೀಡಾಪಟುಗಳು ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಇಲ್ಲಿನ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್, ಹನುಮಾನ್ ಬಾಯ್ಸ್, ಡ್ರಾಗನ್ ಬಾಯ್ಸ್, ತಲಾ ಬಾಯ್ಸ್, ಒಜಿಯೋ ಬಾಯ್ಸ್, ವಿಕೆ ಜೂನಿಯರ್ ತಂಡವು ಪಾಲ್ಗೊಂಡವು ಭಾಗವಹಿಸಿದ್ದವು. ವಿಜೇತ ತಂಡಗಳಿಗೆ ಪ್ರಥಮ 10 ಸಾವಿರ ಜತೆಗೆ ಕಪ್ ದ್ವಿತೀಯ 5 ಸಾವಿರ ಕಪ್, ಉಳಿದ ತಂಡಗಳಿಗೆ ಸಮದಾನಕರ ಬಹುಮಾನ ವಿತರಿಸಲಾಗುವುದು ಎಂದರು.
ಇಲ್ಲಿನ ಪಂದ್ಯಾವಳಿಯಲ್ಲಿ ಆರು ತಂಡಗಳು ಭಾಗವಹಿಸಿದ್ದವು.ಈ ಸಂದರ್ಭದಲ್ಲಿ ಮುಖಂಡರಾದ ಎನ್.ಗಂಗಣ್ಣ, ಶೇಖರ, ತಂಡದ ನಾಯಕರಾದ ಭೀಮಾ, ಕಾಶಿ, ಲೋಕೇಶ, ಅಶೋಕ, ಅಂಗಡಿ ಅಂಜಿನಯ್ಯ, ನರಸಿಂಹ ಸೇರಿದಂತೆ ಕ್ರೀಡಾಪಟುಗಳು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 