ಆರ್.ಸುರೇಶಗೆ ಪಿಎಚ್.ಡಿ
R. Suresh has a Ph.D
ಬಾಗಲಕೋಟೆ 04: ನಗರದ ಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ ಸುರೇಶ ಆರ್ ಅವರಿಗೆ ಪಿಎಚ್.ಡಿ ಲಭಿಸಿದೆ. ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯಕ್ಕೆ ಮಂಡಿಸಿದ ಎ ಸ್ಟಡಿ ಆಫ್ ಇಂಡಿಯನ್ ಫೆಮಿನಿಸ್ಟ ಡ್ರಾಮಾಸ್ ಎಂಬ ಪ್ರಬಂಧಕ್ಕೆ ಪಿಎಚ್.ಡಿ ಪದವಿ ದೊರೆತಿದೆ. ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಇಂಗ್ಲಿಷ್ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ.ಕವಿತಾ ಕುಸುಗಲ್ಲ ಅವರ ಮಾರ್ಗದರ್ಶನದಲ್ಲಿ ಪಿಎಚ್.ಡಿ ಪೂರೈಸಿದ್ದಾರೆ. ಸುರೇಶ ಆರ್‌ಗೆ ಬಿವ್ಹಿವ್ಹಿ ಸಂಘದ ಕಾರ್ಯಾಧ್ಯಕ್ಷರಾದ ವೀರಣ್ಣ ಚರಂತಿಮಠ, ಗೌರವ ಕಾರ್ಯದರ್ಶಿಗಳಾದ ಮಹೇಶ ಎನ್.ಅಥಣಿ, ಕಾಲೇಜುಗಳ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷರಾದ, ಗುರುಬಸವ ಸೂಳಿಭಾವಿ, ಆಡಳಿತಾಧಿಕಾರಿಗಳಾದ ವ್ಹಿ ಆರ್.ಶಿರೋಳ, ಡಾ.ವಿ.ಎಸ್.ಕಟಗಿಹಳ್ಳಿಮಠ, ಪ್ರಾಚಾರ್ಯರಾದ ಎಸ್.ಆರ್.ಮೂಗನೂರಮಠ ಸೇರಿದಂತೆ ಮಹಾವಿದ್ಯಾಲಯದ ಬೋಧಕ-ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 