ಆರ್.ಸಿ.ಕನ್ನೋಳ್ಳಿ ಅವರಿಗೆ ಶಿಕ್ಷಣ ಸಿರಿ ಪ್ರಶಸ್ತಿ ಪ್ರಧಾನ
ಹಾರೂಗೇರಿ, 26 : ಸಮೀಪದ ಖವಟಕೊಪ್ಪ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯ ಆರ್.ಸಿ.ಕನ್ನೋಳ್ಳಿ ಅವರಿಗೆ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಶಿಕ್ಷಕ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇತ್ತೀಚೆಗೆ ಅಥಣಿಯಲ್ಲಿ ನಡೆದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಗಳೂರು, ತಾಲೂಕು ಶಾಖೆ ಅಥಣಿ ಸಹಯೋಗದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ಹಮ್ಮಿಕೊಳ್ಳಲಾದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮುಖ್ಯೋಪಾಧ್ಯಾಯ ಆರ್.ಸಿ.ಕನ್ನೋಳ್ಳಿ ಅವರು ಮಕ್ಕಳ ಶೈಕ್ಷಣಿಕ ಭವಿಷ್ಯ ನಿರ್ಮಾಣ ಮಾಡುವಲ್ಲಿ ಹಗಲಿರುಳು ಶ್ರಮಿಸುತ್ತಿರುವುದಕ್ಕೆ ಮಾಜಿ ಉಪಮುಖ್ಯಮಂತ್ರಿ ಹಾಗೂ ಅಥಣಿ ಶಾಸಕ ಲಕ್ಷ್ಮಣ ಸವದಿಯವರು ಶಿಕ್ಷಣ ಸಿರಿ ಪ್ರಶಸ್ತಿ ನೀಡಿ ಅಭಿನಂದಿಸಿ, ಸತ್ಕರಿಸಿದರು.
ಮಕ್ಕಳ ಭವಿಷ್ಯ ರೂಪಿಸಿ, ಶೈಕ್ಷಣಿಕ ಕ್ಷೇತ್ರದಲ್ಲಿ ಅಮೋಘ ಸಾಧನೆ ಮಾಡಿದ ಮುಖ್ಯೋಪಾಧ್ಯಾಯ ಆರ್.ಸಿ.ಕನ್ನೋಳ್ಳಿ ಅವರನ್ನು ಶಾಲಾ ಎಸ್‌ಡಿಎಮ್‌ಸಿ ಅಧ್ಯಕ್ಷರು, ಸದಸ್ಯರು, ಗ್ರಾಮದ ಮುಖಂಡರು ಅಭಿನಂದಿಸಿದ್ದಾರೆ.