ಜಾಲತಾಣದ ರಾಜ್ಯ ಸಂಯೋಜಕರಾಗಿ ಆರ್.ಪಿ. ಶಶಿಕುಮಾರ್ ನೇಮಕ
RP as the State Coordinator of the website. Sasikumar Appointed
ಕಂಪ್ಲಿ 08: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣದ ರಾಜ್ಯ ಸಂಯೋಜಕರನ್ನಾಗಿ ಕಂಪ್ಲಿಯ ಆರ್.ಪಿ. ಶಶಿಕುಮಾರ್ ಇವರು ನೇಮಕಗೊಂಡಿದ್ದಾರೆ. ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷಕ್ಕಾಗಿ ಶಿಸ್ತಿನ ಸಿಪಾಯಿಯಂತೆ ಶ್ರಮಿಸುತ್ತಿರುವ ಇವರ ಕಾರ್ಯವೈಕರಿಯನ್ನು ಆಧರಿಸಿ, ಕೆಪಿವೈಸಿಸಿ ಸಾಮಾಜಿಕ ಜಾಲತಾಣದ ರಾಜ್ಯಾಧ್ಯಕ್ಷ ಸಿದ್ದು ಹಳ್ಳಿಗೌಡರವರು ಕಂಪ್ಲಿಯ ಆರ್.ಪಿ.ಶಶಿಕುಮಾರ ಇವರನ್ನು ಸಾಮಾಜಿಕ ಜಾಲತಾಣದ ರಾಜ್ಯ ಸಂಯೋಜಕರನ್ನಾಗಿ ಆಯ್ಕೆ ಮಾಡಿ, ಆದೇಶ ಹೊರಡಿಸಿ, ಪಕ್ಷದ ಸಂಘಟನೆಯಲ್ಲಿ ಹೆಚ್ಚು ತೊಡಗಿಕೊಂಡು ಯುವ ಮತದಾರರನ್ನು ಸೆಳೆಯುವ ಮೂಲಕ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲ ಪಡಿಸುವುದು.
ಅಲ್ಲದೆ, ಸರ್ಕಾರದ ಪಂಚ ಯೋಜನೆ ಸೇರಿದಂತೆ ಪ್ರತಿಯೊಂದು ಸೌಲಭ್ಯಗಳ ಬಗ್ಗೆ ಸಾಮಾಜಿಕ ಜಾಲತಾಣದ ಮೂಲಕ ಜನರಿಗೆ ಮನದಟ್ಟು ಮಾಡಬೇಕೆಂದು ತಿಳಿಸಿದರು.ನಂತರ ರಾಜ್ಯ ಸಂಯೋಜಕ ಶಶಿಕುಮಾರ ಮಾತನಾಡಿ, ಹಲವು ವರ್ಷಗಳಿಂದ ಕಾಂಗ್ರೆಸ್ನಲ್ಲಿದ್ದುಕೊಂಡು ಪಕ್ಷದ ಏಳಿಗೆಗೆ ಶ್ರಮಿಸುತ್ತಾ ಬರಲಾಗಿದೆ. ಈ ಹಿಂದೆ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವೆ. ಈಗ ಸಾಮಾಜಿಕ ಜಾಲತಾಣದ ರಾಜ್ಯ ಸಂಯೋಜಕರನ್ನಾಗಿ ನೇಮಕ ಮಾಡುವ ಮೂಲಕ ಮತ್ತಷ್ಟು ಜವಾಬ್ದಾರಿ ನೀಡಿದ್ದು, ಈ ಹುದ್ದೆಗೆ ತಕ್ಕಂತೆ ಕೆಲಸ ಮಾಡಲಾಗುವುದು. ಮಾನ್ಯ ಜನಪ್ರಿಯ ನಾಯಕ ಶಾಸಕ ಗಣೇಶ ಅವರ ಮಾರ್ಗದರ್ಶನದಲ್ಲಿ ಹಿರಿಯರ, ಕಾರ್ಯಕರ್ತರ ಸಹಕಾರದೊಂದಿಗೆ ಪಕ್ಷದ ಬಲವರ್ಧನೆಗೆ ಶ್ರಮಿಸಲಾಗುವುದು ಎಂದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 